Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 5:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಸದುಪದೇಶದ ಕೊರತೆಯಿಂದಲೇ ನಾಶವಾಗುವನು, ತನ್ನ ಅತಿಮೂರ್ಖತನದಿಂದ ಭ್ರಾಂತನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವನು ಶಿಸ್ತುಪಾಲನೆಯಿಲ್ಲದೆ ನಾಶವಾಗುತ್ತಾನೆ; ಅತಿ ಮೂರ್ಖತನದಿಂದಲೇ ಮೋಸಹೋಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಸದುಪದೇಶದ ಕೊರತೆಯಿಂದಲೇ ಸಾಯುವನು, ತನ್ನ ಅತಿಮೂರ್ಖತನದಿಂದ ಭ್ರಾಂತನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅವನು ಬುದ್ಧಿವಾದವನ್ನು ತಿರಸ್ಕರಿಸಿದ್ದರಿಂದ ಸಾಯುವನು; ತನ್ನ ಅತಿಮೂರ್ಖತನದಿಂದ ದಾರಿತಪ್ಪುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಶಿಸ್ತುಪಾಲನೆಯಿಲ್ಲದೆ ಅವನು ನಾಶವಾಗುವನು; ತನ್ನ ಅತಿಮೂರ್ಖತನದಿಂದಲೇ ತಪ್ಪಿಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 5:23
11 ತಿಳಿವುಗಳ ಹೋಲಿಕೆ  

ಕೇಳದಿದ್ದರೆ ದೈವಾಸ್ತ್ರದಿಂದ ಅಳಿದುಹೋಗುವರು, ಜ್ಞಾನಹೀನರಾಗಿಯೇ ಪ್ರಾಣಬಿಡುವರು.


ಅವರ ಗುಡಾರದ ಹಗ್ಗವು ಬಿಚ್ಚಿಹೋಗುವುದಷ್ಟೆ. ಅವರು ಜ್ಞಾನವಿಲ್ಲದವರಾಗಿ ಸಾಯುವರು” ಎಂಬುದೇ.


ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು, ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.


ಶಿಷ್ಟರ ಭಾಷಣ ಬಹುಜನ ಪೋಷಣ, ಬುದ್ಧಿಯ ಕೊರತೆ ಮೂರ್ಖರ ನಾಶನ.


ಭ್ರಷ್ಟನು ಕರ್ಮಫಲವನ್ನು ತಿಂದು ತಿಂದು ದಣಿಯುವನು, ಶಿಷ್ಟನು ತನ್ನಲ್ಲಿ ತಾನೇ ತೃಪ್ತನಾಗುವನು.


ಆದುದರಿಂದ ಇವರು ಹಟಮಾರಿಗಳು; ತಮ್ಮ ಮನಸ್ಸಿನಂತೆ ನಡೆಯಲಿ ಎಂದು ಬಿಟ್ಟುಬಿಟ್ಟೆನು.


ಆದುದರಿಂದ ಅವರು ತಮ್ಮ ನಡತೆಯ ಫಲವನ್ನು ಅನುಭವಿಸಿ, ಸ್ವಂತ ಕುಯುಕ್ತಿಗಳನ್ನೇ ಹೊಟ್ಟೆತುಂಬಾ ಉಣ್ಣಬೇಕಾಗುವುದು.


ಅವರ ಕೆಟ್ಟತನವನ್ನು ಅವರಿಗೇ ತಿರುಗಿಸುವನು; ಅವರ ದುಷ್ಟತನದಿಂದಲೇ ಅವರನ್ನು ನಿರ್ಮೂಲಮಾಡುವನು. ನಮ್ಮ ಯೆಹೋವ ದೇವರು ಅವರನ್ನು ಸಂಹರಿಸಿಬಿಡುವನು.


ಬುದ್ಧಿವಂತನನ್ನು ಅವನ ಬುದ್ಧಿಗೆ ತಕ್ಕಂತೆ ಹೊಗಳುವರು, ವಕ್ರಬುದ್ಧಿಯುಳ್ಳವನನ್ನು ತಿರಸ್ಕರಿಸುವರು.


ಜ್ಞಾನಮಾರ್ಗದಿಂದ ತಪ್ಪಿದವನಿಗೆ, ಪ್ರೇತಸಮೂಹವೇ ವಿಶ್ರಾಂತಿಸ್ಥಾನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು