Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 5:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಎಚ್ಚರವಹಿಸಿಕೋ, ನಿನ್ನ ಪುರುಷತ್ವವು ಪರಾಧೀನವಾಗುವುದು, ನಿನ್ನ ಆಯುಷ್ಯವು ಕ್ರೂರರ ವಶವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಿನ್ನ ಪುರುಷತ್ವ ಪರಾಧೀನವಾದೀತು, ಎಚ್ಚರಿಕೆ! ನಿನ್ನ ಆಯುಷ್ಯ ಕ್ರೂರಿಗಳ ವಶವಾದೀತು, ಜೋಕೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೋಡಿಕೋ, ನಿನ್ನ ಪುರುಷತ್ವವು ಪರಾಧೀನವಾದೀತು, ನಿನ್ನ ಆಯುಷ್ಯವು ಕ್ರೂರರ ವಶವಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಒಂದುವೇಳೆ ನೀನು ಹೋದರೆ, ನಿನ್ನ ಮೇಲೆ ಜನರಿಗಿರುವ ಗೌರವವನ್ನು ಕಳೆದುಕೊಳ್ಳುವಿ; ಕ್ರೂರಿಗಳಿಂದ ಯೌವನದಲ್ಲಿಯೇ ಸಾವಿಗೀಡಾಗುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನೀನು ನಿನ್ನ ಗೌರವವನ್ನು ಬೇರೆಯವರಿಗೆ ಕಳೆಯಬೇಡ, ನಿನ್ನ ಘನತೆನ್ನು ಕ್ರೂರನಿಗೂ ಕೊಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 5:9
9 ತಿಳಿವುಗಳ ಹೋಲಿಕೆ  

ಇಂತಹ ಸ್ತ್ರೀಯರ ದೆಸೆಯಿಂದ ಇಸ್ರಾಯೇಲ್ ರಾಜನಾದ ಸೊಲೊಮೋನನು ದೋಷಿಯಾದನಲ್ಲವೇ? ಅನೇಕ ಜನಾಂಗಗಳಲ್ಲಿ ಅವನಿಗೆ ಸಮಾನನಾದ ಅರಸನು ಇರಲಿಲ್ಲ. ಅವನು ತನ್ನ ದೇವರಿಗೆ ಪ್ರಿಯನಾಗಿದ್ದನು. ಆದ್ದರಿಂದ ದೇವರು ಅವನನ್ನು ಎಲ್ಲಾ ಇಸ್ರಾಯೇಲರ ಮೇಲೆ ಅರಸನನ್ನಾಗಿ ನೇಮಿಸಿದನು. ಆದರೂ ಅನ್ಯದೇಶದ ಸ್ತ್ರೀಯರು ಅವನನ್ನು ಪಾಪದಲ್ಲಿ ಬೀಳಿಸಿಬಿಟ್ಟರು.


ನಿನ್ನ ಮಾರ್ಗವು ಅವಳಿಗೆ ದೂರವಾಗಿರಲಿ ಅವಳ ಮನೆಬಾಗಿಲ ಹತ್ತಿರ ಹೋದೆಯಾ, ಎಚ್ಚರಿಕೆ!


ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳುವರು, ನೀನು ಅನ್ಯನ ಮನೆಯಲ್ಲಿ ದುಡಿಯುವಿ.


ವೇಶ್ಯೆಯಿಂದ ಯಾವನಿಗಾದರೂ ಒಂದು ರೊಟ್ಟಿ ಮಾತ್ರ ಗತಿಯಾಗುವುದು, ಪರಸ್ತ್ರೀಯೋ ಅಮೂಲ್ಯವಾದ ಜೀವವನ್ನು ಬೇಟೆಯಾಡುವಳು.


ನಿನ್ನ ತ್ರಾಣವನ್ನು ಸ್ತ್ರೀಯರಿಗೆ ಒಪ್ಪಿಸಬೇಡ, ರಾಜರಿಗೆ ವಿನಾಶಕರವಾದ ದಾರಿಗೆ ತಿರುಗಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು