Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 6:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದಕಾರಣ ಅವನಿಗೆ ತಟ್ಟನೆ ವಿಪತ್ತು ಸಂಭವಿಸುವುದು, ಏಳದ ಹಾಗೆ ಫಕ್ಕನೆ ಮುರಿಯಲ್ಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆದ್ದರಿಂದ ತಟ್ಟನೆ ಒದಗುವುದು ವಿಪತ್ತು ಮತ್ತೆ ಏಳಲಾಗದಂತಹ ಕಠಿಣ ಆಪತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದಕಾರಣ ಅವನಿಗೆ ತಟ್ಟನೆ ವಿಪತ್ತು ಸಂಭವಿಸುವದು, ಏಳದ ಹಾಗೆ ಫಕ್ಕನೆ ಮುರಿಯಲ್ಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ಅವನಿಗೆ ಆಪತ್ತು ಇದ್ದಕ್ಕಿದ್ದಂತೆ ಬರುವುದು. ಅವನು ನಾಶವಾಗುವನು! ಅವನಿಗೆ ಸಹಾಯಮಾಡಲು ಯಾರೂ ಇರುವುದಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದ್ದರಿಂದ ಅವನಿಗೆ ವಿಪತ್ತು ಬೇಗ ಬರುವುದು; ಯಾವ ಪರಿಹಾರವಿಲ್ಲದೆ ಅವನು ತಟ್ಟನೆ ನಾಶವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 6:15
15 ತಿಳಿವುಗಳ ಹೋಲಿಕೆ  

“ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಕುಂಬಾರನು ಒಡೆದು ಸರಿಪಡಿಸಲಾಗದ ಮಣ್ಣಿನ ಪಾತ್ರೆಯಂತೆ ನಾನು ಈ ಜನವನ್ನು ಮತ್ತು ಪಟ್ಟಣವನ್ನು ಒಡೆದುಬಿಡುವೆನು; ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಶವಗಳನ್ನು ತೋಫೆತಿನಲ್ಲಿ ಹೂಣುವರು.


ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ.


“ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು” ಜನರು ಹೇಳುತ್ತಿರುವಾಗಲೇ ನಾಶನವು ಅವರ ಮೇಲೆ ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವುದು, ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ನಿಮ್ಮ ಅಪಾಯದಲ್ಲಿ ನಾನೂ ನಗುವೆನು; ನಿಮ್ಮ ಆಪತ್ತಿನಲ್ಲಿ ಪರಿಹಾಸ್ಯ ಮಾಡುವೆನು.


ಬಹಳವಾಗಿ ಗದರಿಸಿದರೂ ತಗ್ಗದವನು, ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.


ದೇವರನ್ನು ಬಿಟ್ಟವರೇ, ಇದನ್ನು ಮನದಟ್ಟು ಮಾಡಿಕೊಳ್ಳಿರಿ; ಇಲ್ಲವಾದರೆ ನಿಮ್ಮನ್ನು ಹರಿದುಬಿಟ್ಟೇನು. ನಿಮ್ಮನ್ನು ತಪ್ಪಿಸುವವರು ಯಾರೂ ಇರುವುದಿಲ್ಲ.


ಆ ದುಷ್ಟರಿಗೆ ಮರಣವು ತಟ್ಟನೆ ಬರಲಿ; ಸಜೀವರಾಗಿಯೇ ಪಾತಾಳಕ್ಕೆ ಇಳಿದುಹೋಗಲಿ. ಅವರ ಮನೆಯಲ್ಲಿಯೂ, ಮನಸ್ಸಿನಲ್ಲಿಯೂ ಕೆಟ್ಟತನವೇ ತುಂಬಿದೆ.


ಆದಕಾರಣ ಬಿರುಗಾಳಿಯಂತೆ ಅಪಾಯವೂ, ತುಫಾನಿನಂತೆ ಆಪತ್ತೂ ಬಂದು, ನಿಮಗೆ ಶ್ರಮಸಂಕಟಗಳು ಸಂಭವಿಸುವಾಗ


ಯೆಹೋವನು ಹಗೆಮಾಡುವ ವಿಷಯಗಳು ಆರು ಇವೆ, ಹೌದು, ಏಳು ಸಂಗತಿಗಳು ಆತನಿಗೆ ಅಸಹ್ಯವಾಗಿ ತೋರುತ್ತವೆ.


ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು, ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.


ಶಿಷ್ಟನು ಏಳು ಸಾರಿ ಬಿದ್ದರೂ ಮತ್ತೆ ಏಳುವನು, ದುಷ್ಟನು ಕೇಡಿನಿಂದ ಬಿದ್ದೇಹೋಗುವನು.


ಅವರಿಬ್ಬರು ವಿಧಿಸುವ ವಿಪತ್ತು ಫಕ್ಕನೆ ಸಂಭವಿಸುವುದು, ಅವರಿಂದಾಗುವ ನಾಶವು ಯಾರಿಗೆ ತಿಳಿದೀತು?


ನಾನು ಈ ಮಾತನ್ನು ನುಡಿಯುತ್ತಿರುವಾಗಲೇ ಬೆನಾಯನ ಮಗನಾದ ಪೆಲತ್ಯನು ಸತ್ತುಹೋದನು. ಆಗ ನಾನು ಅಡ್ಡಬಿದ್ದು ಗಟ್ಟಿಯಾಗಿ ಕೂಗಿಕೊಂಡೆ, “ಅಯ್ಯೋ, ಕರ್ತನಾದ ಯೆಹೋವನೇ, ಇಸ್ರಾಯೇಲಿನಲ್ಲಿ ಉಳಿದವರನ್ನು ಸಂಪೂರ್ಣವಾಗಿ ನಿರ್ಮೂಲಮಾಡುವಿಯೋ?” ಎಂದು ಮೊರೆಯಿಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು