Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 6:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ದುರಾಲೋಚನೆಗಳನ್ನು ಕಲ್ಪಿಸುವ ಹೃದಯ, ಕೇಡುಮಾಡಲು ತ್ವರೆಪಡುವ ಕಾಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ದುರಾಲೋಚನೆಗಳನ್ನು ಕಲ್ಪಿಸುವ ಹೃದಯ, ಕೇಡುಮಾಡಲು ತ್ವರೆಪಡುವ ಕಾಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ದುರಾಲೋಚನೆ ಮಾಡುವ ಹೃದಯ, ಕೇಡುಮಾಡಲು ಓಡುವ ಕಾಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ದುರಾಲೋಚನೆಗಳನ್ನು ಕಲ್ಪಿಸುವ ಹೃದಯ, ಕೇಡಿಗೆ ನುಗ್ಗಲು ತ್ವರೆಪಡುವ ಕಾಲುಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 6:18
11 ತಿಳಿವುಗಳ ಹೋಲಿಕೆ  

ಮನುಷ್ಯರ ಕೆಟ್ಟತನವು ಭೂಮಿಯ ಮೇಲೆ ಹೆಚ್ಚಾಗಿರುವುದನ್ನೂ, ಅವರು ತಮ್ಮ ಹೃದಯದಲ್ಲಿ ಯೋಚಿಸುವುದೆಲ್ಲವು ಯಾವಾಗಲೂ ಕೆಟ್ಟ ಆಲೋಚನೆಗಳನ್ನೇ ಮಾಡುತ್ತಿರುವುದನ್ನು ಯೆಹೋವನು ನೋಡಿದನು.


ಅವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುವವು, ಅವರು ರಕ್ತವನ್ನು ಸುರಿಸಲು ಆತುರಪಡುವರು.


ಅವರ ಕಾಲುಗಳು ರಕ್ತವನ್ನು ಸುರಿಸಲು ಆತುರಪಡುತ್ತವೆ.


ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?


ಇವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುತ್ತವೆ, ಇವರು ನಿರಪರಾಧಿಯ ರಕ್ತವನ್ನು ಸುರಿಸಲು ಆತುರಪಡುತ್ತಾರೆ, ಇವರ ಯೋಚನೆಗಳು ಅಧರ್ಮದ ಯೋಚನೆಗಳೇ, ಇವರು ಹೋದ ದಾರಿಗಳಲ್ಲಿ ನಷ್ಟವೂ, ನಾಶನವೂ ಉಂಟಾಗುತ್ತವೆ;


ನಿಮ್ಮಲ್ಲಿ ಯಾವನೂ ತನ್ನ ಹೃದಯದಲ್ಲಿ ನೆರೆಯವನಿಗೆ ಕೇಡನ್ನು ಬಗೆಯದಿರಲಿ; ಸುಳ್ಳು ಸಾಕ್ಷಿಗೆ ಎಂದೂ ಸಂತೋಷಪಡಬೇಡಿರಿ; ನಾನು ಇವುಗಳನ್ನೆಲ್ಲಾ ದ್ವೇಷಿಸುವವನಾಗಿದ್ದೇನೆ; ಇದು ಯೆಹೋವನ ನುಡಿ.”


ತಮ್ಮ ಹಾಸಿಗೆಯಲ್ಲಿ ಮಲಗಿರುವಾಗಲೇ ಅನ್ಯಾಯವನ್ನು ಯೋಚಿಸಿ, ಕೇಡನ್ನು ಕಲ್ಪಿಸುವವರ ಗತಿಯನ್ನು ಏನು ಹೇಳಲಿ. ಉದಯದ ಬೆಳಕಿನಲ್ಲಿ ಅದನ್ನು ನಡಿಸುವರು, ಅದು ಅವರ ಕೈವಶವಷ್ಟೇ.


ಕೇಡನ್ನು ಕಲ್ಪಿಸುವವನು, ಕುಯುಕ್ತಿಯುಳ್ಳವನು ಎನಿಸಿಕೊಳ್ಳುವನು.


ಹಾಸಿಗೆಯ ಮೇಲೆ ಇರುವಾಗಲೂ ಕೆಡುಕನ್ನೇ ಯೋಚಿಸುತ್ತಿರುವನು; ದುಷ್ಟ ಮಾರ್ಗದಲ್ಲಿ ನಿಂತುಕೊಂಡಿದ್ದಾನೆ; ಎಂಥ ದುಷ್ಕೃತ್ಯಕ್ಕೂ ಹೇಸುವುದಿಲ್ಲ.


ಅವರ ಮನಸ್ಸು ಹಿಂಸೆಯನ್ನು ಯೋಚಿಸುತ್ತಿರುವುದು, ಅವರ ತುಟಿಯು ಹಾನಿಯನ್ನು ಪ್ರಸ್ತಾಪಿಸುತ್ತಿರುವುದು.


ಕುಯುಕ್ತಿಯು ಯೆಹೋವನಿಗೆ ಅಸಹ್ಯ, ನಯನುಡಿಯು ಆತನಿಗೆ ಪ್ರಿಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು