Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 6:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಏಕೆಂದರೆ ಮತ್ಸರವು ಪತಿಗೆ ಕ್ರೋಧವನ್ನು ಉಂಟುಮಾಡುತ್ತದೆ, ಅವನು ಮುಯ್ಯಿತೀರಿಸತಕ್ಕ ದಿನದಲ್ಲಿ ವ್ಯಭಿಚಾರಿಯನ್ನು ಉಳಿಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಏಕೆಂದರೆ, ಅವಳ ಪತಿಗಾಗುವ ಮತ್ಸರ ಉದ್ರೇಕಗೊಳ್ಳುವುದು; ಕನಿಕರ ತೋರನು, ಮುಯ್ಯಿ ತೀರಿಸುವ ದಿನದಂದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಏಕೆಂದರೆ ಮತ್ಸರವು ಪತಿಗೆ ಕ್ರೋಧವನ್ನು ಉಂಟುಮಾಡುತ್ತದೆ, ಮುಯ್ಯಿತೀರಿಸತಕ್ಕ ದಿನದಲ್ಲಿ ವ್ಯಭಿಚಾರಿಯನ್ನು ಉಳಿಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆಕೆಯ ಗಂಡನು ಮತ್ಸರದಿಂದ ಬಹು ಕೋಪಗೊಳ್ಳುವನು; ಕರುಣೆತೋರದೆ ಅವಳ ಮೇಲೆ ಸೇಡುತೀರಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಏಕೆಂದರೆ ಮತ್ಸರವು ಪತಿಯ ಕ್ರೋಧವನ್ನು ಉದ್ರೇಕಿಸುವುದು. ಆದ್ದರಿಂದ ಮುಯ್ಯಿ ತೀರಿಸುವಾಗ ಅವನು ಕರುಣೆ ತೋರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 6:34
12 ತಿಳಿವುಗಳ ಹೋಲಿಕೆ  

ನಿನ್ನ ಕೈಯಲ್ಲಿನ ಮುದ್ರೆಯ ಹಾಗೆ ನಿನ್ನ ಹೃದಯದ ಮೇಲೆ ನನ್ನನ್ನು ಧರಿಸಿಕೋ. ಪ್ರೀತಿ ಮೃತ್ಯುವಿನಷ್ಟು ಶಕ್ತಿಶಾಲಿ, ಪ್ರೀತಿದ್ರೋಹದಿಂದ ಹುಟ್ಟುವ ಮತ್ಸರವು ಪಾತಾಳದಷ್ಟು ಕ್ರೂರ, ಅದರ ಜ್ವಾಲೆಯು ಬೆಂಕಿಯ ಉರಿ, ಧಗಧಗಿಸುವ ಕೋಪಾಗ್ನಿ.


ಕೋಪವು ಕ್ರೂರ, ಕ್ರೋಧವು ಪ್ರವಾಹ, ಮತ್ಸರಕ್ಕೆ ಎದುರಾಗಿ ಯಾರು ನಿಂತಾರು?


ಅಥವಾ ಅವಳು ಹಾಗೆ ಮಾಡದೆ ಅಶುದ್ಧಳಾಗದ ಸಂದರ್ಭದಲ್ಲಿಯೂ, ಆಕೆಯು ಕೆಟ್ಟುಹೋದಳೆಂಬ ಸಂಶಯ ಗಂಡನಿಗೆ ಬಂದರೆ,


ಕರ್ತನಿಗೆ ಕೋಪವನ್ನುಂಟುಮಾಡಿ ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೋ?


“ನಾನು ನನ್ನ ಗೌರವವನ್ನು ಕಾಪಾಡಿಕೊಳ್ಳುವ ಪ್ರಕಾರ ಮಹಾಯಾಜಕನಾದ ಆರೋನನ ಮೊಮ್ಮಗನೂ, ಎಲ್ಲಾಜಾರನ ಮಗನಾದ ಫೀನೆಹಾಸನು ನನ್ನ ಗೌರವವನ್ನು ಕಾಪಾಡಿದ್ದರಿಂದ ಇಸ್ರಾಯೇಲರ ಮೇಲಿದ್ದ ನನ್ನ ಕೋಪವನ್ನು ತೊಲಗಿಸಿದ್ದಾನೆ. ಹೀಗಿರುವುದರಿಂದ ನಾನು ನನ್ನ ಗೌರವವನ್ನು ಕಾಪಾಡಿಕೊಳ್ಳುವುದಕ್ಕಾಗಿ ಇಸ್ರಾಯೇಲರನ್ನು ನಿರ್ಮೂಲಮಾಡಬೇಕಾದ ಅಗತ್ಯವಿಲ್ಲ.


ನಿನ್ನ ಸೇವಕನು ಹೀಗೆ ನನಗೆ ಮಾಡಿದನೆಂಬುದಾಗಿ ತನ್ನ ಹೆಂಡತಿ ಹೇಳಿದ ಮಾತುಗಳನ್ನು ಯೋಸೇಫನ ದಣಿಯು ಕೇಳಿದಾಗ ಬಹಳ ಸಿಟ್ಟುಗೊಂಡನು.


ಅವನಿಗೆ ಗಾಯವೂ, ಅವಮಾನವೂ ಆಗುವವು, ಅವನ ಕೆಟ್ಟ ಹೆಸರು ಎಂದಿಗೂ ಅಳಿಸಲ್ಪಡದು.


ಅವನು ಯಾವ ಈಡನ್ನೂ ಮುಟ್ಟನು; ಎಷ್ಟು ಲಂಚಕೊಟ್ಟರೂ ಒಪ್ಪನು.


ಧನವು ಕೋಪದ ದಿನದಲ್ಲಿ ವ್ಯರ್ಥ, ಧರ್ಮವು ಮರಣವಿಮೋಚಕ.


ಇಗೋ, ಅವರ ವಿರುದ್ಧವಾಗಿ ಮೇದ್ಯರನ್ನು ಎಬ್ಬಿಸುವೆನು. ಇವರು ಬೆಳ್ಳಿಯನ್ನು ಲಕ್ಷಿಸರು. ಬಂಗಾರವನ್ನು ಪ್ರೀತಿಸರು.


ಆಕೆಯು ತಾನು ಗರ್ಭಧರಿಸಿದ್ದು ಗೊತ್ತಾದಾಗ ದಾವೀದನಿಗೆ ವರ್ತಮಾನ ಕಳುಹಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು