Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 6:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಸೋಮಾರಿಯೇ, ಇರುವೆಯ ಹತ್ತಿರ ಹೋಗಿ, ಅದರ ನಡವಳಿಕೆಯನ್ನು ನೋಡಿ ಜ್ಞಾನವನ್ನು ಪಡೆದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಎಲೈ ಸೋಮಾರಿಯೇ, ಇರುವೆಯ ಬಳಿಗೆ ಹೋಗು; ಅದರ ನಡವಳಿಕೆಯನ್ನು ನೋಡಿ ಜ್ಞಾನಿಯಾಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಸೋಮಾರಿಯೇ, ಇರುವೆಯ ಹತ್ತಿರ ಹೋಗಿ ಅದರ ನಡವಳಿಕೆಯನ್ನು ನೋಡಿ ಜ್ಞಾನವನ್ನು ತಂದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸೋಮಾರಿಯೇ, ನೀನು ಇರುವೆಯಂತೆ ಚುರುಕಾಗಿರಬೇಕು. ಇರುವೆಯನ್ನು ನೋಡಿ ಕಲಿತುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಸೋಮಾರಿಯೇ, ನೀನು ಇರುವೆಯ ಹತ್ತಿರ ಹೋಗಿ, ಅದರ ನಡವಳಿಕೆಯನ್ನು ನೋಡಿ ಜ್ಞಾನವಂತನಾಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 6:6
24 ತಿಳಿವುಗಳ ಹೋಲಿಕೆ  

ಮೈಗಳ್ಳನು ಮಳೆಗಾಲದಲ್ಲಿ ಉಳುವುದಿಲ್ಲ, ಸುಗ್ಗೀಕಾಲದಲ್ಲಿ ಅಪೇಕ್ಷಿಸಲು ಏನು ಸಿಕ್ಕೀತು?


ಕೆಲಸಗಳ್ಳನು ಕೆಡುಕನಿಗೆ ತಮ್ಮ.


ಸೋಮಾರಿಯೇ, ಎಷ್ಟು ಹೊತ್ತು ನಿದ್ರೆ? ನಿದ್ರೆಯಿಂದ ಯಾವಾಗ ಎಚ್ಚರಗೊಳ್ಳುವಿ?


ನೀವು ಸೋಮಾರಿಗಳಾಗಿರಬೇಕೆಂದು ಅಪೇಕ್ಷಿಸುವುದಿಲ್ಲ, ಬದಲಿಗೆ ನಂಬಿಕೆಯಿಂದಲೂ, ತಾಳ್ಮೆಯಿಂದಲೂ, ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವವರನ್ನು ಅನುಸರಿಸುವವರಾಗಬೇಕೆಂದು ಕೋರುತ್ತೇನೆ.


ಸೋಮಾರಿಯ ಆಶೆಯು ವ್ಯರ್ಥ, ಉದ್ಯೋಗಿಯ ಆತ್ಮಕ್ಕೆ ಪುಷ್ಟಿ.


ಆಗ ಅವನ ಯಜಮಾನನು ಅವನಿಗೆ, ‘ಮೈಗಳ್ಳನಾದ ದುಷ್ಟ ಸೇವಕನೇ; ನೀನು ನನ್ನನ್ನು ಬಿತ್ತದಿರುವಲ್ಲಿ ಕೊಯ್ಯುವವನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಎಂದು ತಿಳಿದಿದ್ದೇಯಾ?


ಇರುವೆಗಳು ದುರ್ಬಲಜಾತಿಯಾವಾದರೂ, ಸುಗ್ಗಿಯಲ್ಲಿ ತಮ್ಮ ಆಹಾರವನ್ನು ಸಿದ್ಧಮಾಡಿಕೊಳ್ಳುವವು.


ಜಾಗ್ರತೆ ಬೇಕಾದಲ್ಲಿ ಆಲಸ್ಯವಾಗಿರದೆ ಆಸಕ್ತಚಿತ್ತರಾಗಿದ್ದು ಕರ್ತನ ಸೇವೆ ಮಾಡುವವರಾಗಿರಿ.


ಸೋಮಾರಿಯ ಆಶೆಯು ಅವನನ್ನು ಕೊಲ್ಲುವುದು, ಅವನ ಕೈಗಳು ದುಡಿಯಲಾರವು.


ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುವುದು, ಸೋಮಾರಿಯು ಹಸಿವೆಗೊಳ್ಳುವನು.


“ಹೊರಗೆ ಸಿಂಹವಿದೆ, ನನ್ನನ್ನು ಬೀದಿಯಲ್ಲಿ ಕೊಂದ್ದಿತು” ಎಂಬುದು ಸೋಮಾರಿಯ ನೆವ.


ಹಲ್ಲುಗಳಿಗೆ ಹುಳಿಯೂ, ಕಣ್ಣುಗಳಿಗೆ ಹೊಗೆಯೂ ಹೇಗೋ, ಯಜಮಾನನಿಗೆ ಸೋಮಾರಿಯು ಹಾಗೆ.


ಮೈಗಳ್ಳನು ಪಾತ್ರೆಯೊಳಗೆ ಕೈ ಮುಳುಗಿಸಿದ ಮೇಲೆ, ತಿರುಗಿ ಬಾಯಿಯ ಹತ್ತಿರಕ್ಕೆ ತರಲಾರನು.


ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ; ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ತುಂಬಿಟ್ಟುಕೊಳ್ಳುವುದಿಲ್ಲ; ಆದಾಗ್ಯೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಸಾಕಿ ಸಲಹುತ್ತಾನೆ; ಅವುಗಳಿಗಿಂತ ನೀವು ಹೆಚ್ಚಿನವರಲ್ಲವೋ?


ಸೋಮಾರಿಯ ಮಾರ್ಗ ಮುಳ್ಳುಬೇಲಿ, ಯಥಾರ್ಥವಂತನ ಮಾರ್ಗ ರಾಜಮಾರ್ಗ.


ಪಕ್ಷಿಗಳ ಕಣ್ಣೆದುರಿಗೆ ಬಲೆಯನ್ನೊಡ್ಡುವುದು ವ್ಯರ್ಥ.


ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ತಿಳಿದಿರುವುದು. ಆದರೆ ಇಸ್ರಾಯೇಲ್ ಜನರಿಗೋ ತಿಳಿವಳಿಕೆ ಇಲ್ಲ. ನನ್ನ ಪ್ರಜೆಯು ಆಲೋಚಿಸುವುದಿಲ್ಲ.


ಕಂದಾ, ಕೇಳು, ಜ್ಞಾನವಂತನಾಗಿರು, ನಿನ್ನ ಮನಸ್ಸನ್ನು ಜ್ಞಾನದ ಮಾರ್ಗದಲ್ಲಿ ಮುಂದೆ ನಡೆಯಿಸು.


ಭೂಮಿಯ ಮೇಲೆ ಅಧಿಕ ಜ್ಞಾನವುಳ್ಳ ನಾಲ್ಕು ಸಣ್ಣ ಜಂತುಗಳುಂಟು.


ಆಕಾಶದಲ್ಲಿ ಹಾರುವ ಬಕವೂ ತನ್ನ ನಿಯಮಿತ ಕಾಲಗಳನ್ನು ತಿಳಿದುಕೊಂಡಿದೆ. ಬೆಳವಕ್ಕಿಯೂ, ಬಾನಕ್ಕಿಯೂ, ಕೊಕ್ಕರೆಯೂ ತಮ್ಮ ಗಮನಾಗಮನ ಸಮಯಗಳನ್ನು ಗಮನಿಸುತ್ತವೆ. ಆದರೆ ನನ್ನ ಜನರಾದರೋ ಯೆಹೋವನ ನಿಯಮವನ್ನು ತಿಳಿಯರು.


ಜೋಲುಗೈ ದಾರಿದ್ರ್ಯ, ಚುರುಕು ಕೈ ತರುವುದು ಐಶ್ವರ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು