Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 7:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವನನ್ನು ಹಿಡಿದು, ಮುದ್ದಾಡಿ ನಾಚಿಕೆಗೆಟ್ಟವಳಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅವನನ್ನು ಬಿಗಿಹಿಡಿದು ಮುದ್ದಾಡುತ್ತಾಳೆ. ಲಜ್ಜೆಗೆಟ್ಟ ಮೋರೆಯುಳ್ಳ ಅವಳು ಹೀಗೆನ್ನುತ್ತಾಳೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವನನ್ನು ಹಿಡಿದು ಮುದ್ದಾಡಿ ನಾಚಿಕೆಗೆಟ್ಟವಳಾಗಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅವಳು ಆ ಯೌವನಸ್ಥನನ್ನು ಹಿಡಿದುಕೊಂಡು ಮುದ್ದಿಟ್ಟಳು. ಅವಳು ನಾಚಿಕೆಯಿಲ್ಲದೆ ಅವನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವಳು ಆ ಯುವಕನನ್ನು ಹಿಡಿದುಕೊಂಡು ಮುದ್ದಿಟ್ಟು, ನಾಚಿಕೆಯಿಲ್ಲದೆ ಅವಳು ಹೀಗೆನ್ನುತ್ತಾಳೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 7:13
14 ತಿಳಿವುಗಳ ಹೋಲಿಕೆ  

ಆಕೆ ಅವನ ಬಟ್ಟೆಯನ್ನು ಹಿಡಿದುಕೊಂಡು, “ನನ್ನೊಂದಿಗೆ ಸಂಗಮಿಸಲು ಬಾ” ಎಂದು ಕರೆಯಲು, ಅವನು ತನ್ನ ಬಟ್ಟೆಯನ್ನು ಆಕೆಯ ಕೈಯಲ್ಲೇ ಬಿಟ್ಟು ತಪ್ಪಿಸಿಕೊಂಡು ಹೊರಗೆ ಓಡಿಹೋದನು.


ನಿನ್ನ ವಿರುದ್ಧ ನನಗೆ ಅಪಾದನೆ ಒಂದಿದೆ. ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು, ಜಾರತ್ವಮಾಡಬಹುದೆಂದೂ ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಅನುಮತಿಯನ್ನು ಕೊಟ್ಟಿರುವಿ.


ಎಲ್ಲಾ ಕಡೆ ವ್ಯಭಿಚಾರಿ ಸ್ತ್ರೀಗೆ ಹಣಕೊಡುವುದುಂಟು; ನೀನಾದರೋ ನಿನ್ನ ಪ್ರಿಯರಿಗೆಲ್ಲ ನೀನೇ ಹಣವನ್ನು ಕೊಡುತ್ತಿರುವೆ; ಅವರು ಎಲ್ಲಾ ಕಡೆಯಿಂದಲೂ ಬಂದು ನಿನ್ನಲ್ಲಿ ವ್ಯಭಿಚಾರಮಾಡುವಂತೆ ಅವರಿಗೆ ಬಹುಮಾನ ಕೊಡುತ್ತಿರುವೆ.


“ನರಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯದಲ್ಲಿದ್ದರೂ ಅವರಿಗೆ ಭಯಪಡಬೇಡ, ಅವರ ಗದರಿಕೆಗೆ ಹೆದರದಿರು; ಅವರು ತಿರುಗಿ ಬೀಳುವ ವಂಶದವರು; ಅವರ ಬಿರುನುಡಿಗೆ ಭಯಪಡಬೇಡ, ಅವರ ಬಿರುನೋಟಕ್ಕೆ ಹೆದರದಿರು.


“ನಾನು ಯಾವ ಸಂತಾನದವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಆ ಸಂತಾನದವರು ನಾಚಿಕೆಗೆಟ್ಟವರೂ, ಹಟಗಾರರೂ ಆಗಿರುತ್ತಾರೆ; ನೀನು ಅವರಿಗೆ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿ.


ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು. ಆದಕಾರಣ ನಾನು ನಾಚಿಕೆಯಿಂದ ಕೊರಗಲಿಲ್ಲ; ನನ್ನ ಮುಖವನ್ನು ಕಗ್ಗಲ್ಲಿನಂತೆ ಗಟ್ಟಿಮಾಡಿಕೊಂಡಿದ್ದೇನೆ. ಆಶಾಭಂಗಪಡಲಾರನೆಂದು ನನಗೆ ಗೊತ್ತು.


ದುಷ್ಟನ ಮುಖದಲ್ಲಿ ಲಜ್ಜೆಯಿಲ್ಲ, ಸತ್ಯವಂತನು ತನ್ನ ನಡತೆಯನ್ನು ಸರಿಪಡಿಸಿಕೊಳ್ಳುತ್ತಿರುವನು.


ಪೆಗೋರದ ಬಾಳನ ಸಂಗತಿಯಲ್ಲಿ ಬಿಳಾಮನ ಆಲೋಚನೆಯನ್ನು ಅನುಸರಿಸಿ ಇಸ್ರಾಯೇಲರನ್ನು ಯೆಹೋವನಿಗೆ ದ್ರೋಹಿಗಳನ್ನಾಗಿ ಮಾಡಿ ಸಮೂಹದವರಲ್ಲಿ ಘೋರವ್ಯಾಧಿ ಉಂಟಾಗುವಂತೆ ಮಾಡಿದವರು ಇವರೇ ಅಲ್ಲವೇ.


ಇಸ್ರಾಯೇಲರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಅವರು ಮೋವಾಬ್ ಸ್ತ್ರೀಯರೊಡನೆ ಸಹವಾಸ ಮಾಡುವವರಾದರು.


ಹೀಗಿರುವಲ್ಲಿ ಯೋಸೇಫನ ದಣಿಯ ಹೆಂಡತಿಯು ಅವನನ್ನು ಮೋಹಿಸಿ “ನನ್ನ ಸಂಗಡ ಸಂಗಮಿಸಲು ಬಾ” ಎಂದಳು.


ಇಗೋ, ಅವರು ನನ್ನ ಜೀವಕ್ಕೆ ಹೊಂಚುಹಾಕುತ್ತಾರೆ; ಬಲಿಷ್ಠರು ನನಗೆ ವಿರುದ್ಧವಾಗಿ ಗುಂಪುಕೂಡಿದ್ದಾರೆ. ಯೆಹೋವನೇ, ನಾನು ನಿರ್ದೋಷಿಯೂ ನಿರಪರಾಧಿಯೂ ಅಲ್ಲವೇ!


ತಮ್ಮ ಮಾರ್ಗವನ್ನು ಹಿಡಿದು, ಹೋಗಿ ಬರುವವರನ್ನು ನೋಡಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು