Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 7:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹಾಸಿಗೆಯ ಮೇಲೆ ರಕ್ತಬೋಳ, ಅಗುರು, ಲವಂಗ, ಚಕ್ಕೆ ಇವುಗಳ ಚೂರ್ಣಗಳಿಂದ ಸುವಾಸನೆಗೊಳಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ರಸಗಂಧ, ಅಗರು, ಲವಂಗ ಚಕ್ಕೆಗಳಿಂದ ಅದನ್ನು ಘಮಘಮಗೊಳಿಸಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಹಾಸಿಗೆಯ ಮೇಲೆ ರಕ್ತಬೋಳ, ಅಗುರು, ಲವಂಗ, ಚಕ್ಕೆ, ಇವುಗಳ ಚೂರ್ಣವನ್ನು ಉದರಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಪರಿಮಳದ್ರವ್ಯವನ್ನು ಚಿಮಿಕಿಸಿರುವೆ. ಆ ಪರಿಮಳದ್ರವ್ಯವನ್ನು ರಕ್ತಬೋಳ, ಅಗುರು ಮತ್ತು ಲವಂಗಚಕ್ಕೆಗಳಿಂದ ತಯಾರಿಸಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ರಕ್ತಬೋಳ, ಅಗರು, ಲವಂಗ, ಚಕ್ಕೆಗಳಿಂದ ನನ್ನ ಹಾಸಿಗೆಯನ್ನು ಸುವಾಸನೆಗೊಳಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 7:17
9 ತಿಳಿವುಗಳ ಹೋಲಿಕೆ  

ನಿನ್ನ ವಸ್ತ್ರಗಳೆಲ್ಲಾ ರಕ್ತಬೋಳ, ದಾಲ್ಚಿನ್ನಿ, ಚಂದನಗಳಿಂದ ಎಷ್ಟೋ ಸುವಾಸನೆಯುಳ್ಳವುಗಳಾಗಿವೆ; ಗಜದಂತ ಅರಮನೆಗಳೊಳಗೆ ಉತ್ಕೃಷ್ಟವಾದ ವಾದ್ಯಗಳು ನಿನ್ನನ್ನು ಆನಂದಗೊಳಿಸುತ್ತವೆ.


ವರ್ತಕರು ಮಾರುವ ಸಕಲ ಸುಗಂಧತೈಲಗಳಿಂದ, ರಸಗಂಧ, ಸಾಂಬ್ರಾಣಿಧೂಪ ಮುಂತಾದ ದ್ರವ್ಯಗಳಿಂದ ಧೂಮಸ್ತಂಭಗಳೋಪಾದಿಯಲ್ಲಿ ಹೊರಹೊಮ್ಮುತ್ತಿರುವ, ಅರಣ್ಯಮಾರ್ಗವಾಗಿ ಬರುತ್ತಿರುವ ಈ ಮೆರವಣಿಗೆ ಯಾರದು?


“ನೀನು ಸುಗಂಧದ್ರವ್ಯಗಳಲ್ಲಿ ದೇವರ ಸೇವೆಗೆ ನೇಮಕವಾದ ತೂಕದ ಮೇರೆಗೆ ಐನೂರು ಶೆಕೆಲ್ ಅಚ್ಚರಕ್ತಬೋಳ, ಅದರರ್ಧ ಅಂದರೆ ಇನ್ನೂರೈವತ್ತು ಶೆಕೆಲ್ ಶ್ರೇಷ್ಠವಾದ ಲವಂಗ,


ಇದಲ್ಲದೆ ಮೊದಲು ಒಂದು ಸಾರಿ ರಾತ್ರಿ ವೇಳೆಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಸಹ ರಕ್ತಬೋಳ ಅಗರುಗಳನ್ನು ಕಲಸಿದ ಚೂರ್ಣವನ್ನು ನೂರು ಸೇರಿನಷ್ಟು ತೆಗೆದುಕೊಂಡು ಅಲ್ಲಿಗೆ ಬಂದನು.


ಬಾ, ಬೆಳಗಿನ ತನಕ ಬೇಕಾದಷ್ಟು ರಮಿಸುವ, ಕಾಮವಿಲಾಸಗಳಿಂದ ಸಂತೋಷಿಸುವ.


ನಿನ್ನ ಸ್ತ್ರೀಪರಿವಾರದಲ್ಲಿ ರಾಜಕುಮಾರಿಯರೂ ಇದ್ದಾರೆ; ಪಟ್ಟದ ರಾಣಿಯು ಓಫೀರ್ ದೇಶದ ಬಂಗಾರದ ಆಭರಣಗಳಿಂದ ಅಲಂಕೃತಳಾಗಿ, ನಿನ್ನ ಬಲಭಾಗದಲ್ಲಿ ನಿಂತಿರುವಳು.


“ದಾನಿನವರೂ ಮತ್ತು ಯಾವಾನಿನವರೂ ಊಜಾಲಿನಿಂದ ನಾನಾ ಸರಕುಗಳನ್ನು ತಂದು ನಿನಗೆ ಒಪ್ಪಿಸಿದರು.ಕಬ್ಬಿಣ, ಬಜೆ, ಲವಂಗ, ಚಕ್ಕೆ ಇವುಗಳು ನಿನಗೆ ಆಮದಾಗುತ್ತಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು