Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 7:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವು ಜಾರಳಿಂದ ಮತ್ತು ಸವಿಮಾತನಾಡುವ ಪರಸ್ತ್ರೀಯಿಂದ ನಿನ್ನನ್ನು ರಕ್ಷಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವು ನಿನ್ನನ್ನು ಕಾಪಾಡುವುವು ವ್ಯಭಿಚಾರಿಣಿಯಿಂದ, ಸವಿಮಾತಾಡುವ ಆ ಪರಸ್ತ್ರೀಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವು ಜಾರಳಿಂದ, ಸವಿಮಾತನಾಡುವ ಪರಸ್ತ್ರೀಯಿಂದ, ನಿನ್ನನ್ನು ರಕ್ಷಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಅವು ನಿನ್ನನ್ನು ಬೇರೆ ಹೆಂಗಸರಿಂದ ತಪ್ಪಿಸಿ ಕಾಪಾಡುತ್ತವೆ; ನಿನ್ನನ್ನು ಪಾಪಕ್ಕೆ ನಡೆಸುವಂಥ ಅವರ ಸವಿ ಮಾತುಗಳಿಂದ ತಪ್ಪಿಸಿ ಕಾಪಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವು ವ್ಯಭಿಚಾರಿಣಿಯಿಂದಲೂ ಸವಿಮಾತನಾಡುವ ದಾರಿತಪ್ಪಿದ ಸ್ತ್ರೀಯಿಂದಲೂ ನಿನ್ನನ್ನು ಕಾಪಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 7:5
8 ತಿಳಿವುಗಳ ಹೋಲಿಕೆ  

ವಿವೇಕವು ನಿನ್ನನ್ನು ಜಾರಳಿಂದ ಅಂದರೆ ಸವಿಮಾತನಾಡುವ ಪರಸ್ತ್ರೀಯಿಂದ ತಪ್ಪಿಸುವುದು.


ಅದು ಕೆಟ್ಟ ಸ್ತ್ರೀಯಿಂದಲೂ, ವೇಶ್ಯೆಯ ಸಿಹಿನುಡಿಯಿಂದಲೂ ನಿನ್ನನ್ನು ರಕ್ಷಿಸತಕ್ಕದ್ದಾಗಿದೆ.


ವೇಶ್ಯಸ್ತ್ರೀಯ ತುಟಿಗಳಲ್ಲಾದರೋ ಜೇನುಗರೆಯುವುದು, ಅವಳ ಮಾತು ಎಣ್ಣೆಗಿಂತಲೂ ನಯವಾಗಿದೆ.


ಮಗನೇ, ಏಕೆ ಪರಸ್ತ್ರೀಯಲ್ಲಿ ಭ್ರಮೆಗೊಳ್ಳುವಿ, ಅನ್ಯಳ ಎದೆಯನ್ನು ತಬ್ಬಿಕೊಳ್ಳುವುದೇಕೆ?


ಜ್ಞಾನವನ್ನು, “ನೀನು ನನ್ನ ಅಕ್ಕಾ” ಎಂದು ಹೇಳು, ವಿವೇಕವನ್ನು, “ಪ್ರಿಯೇ” ಎಂದು ಕರೆ.


ನಾನು ನನ್ನ ಮನೆಯ ಕಿಟಕಿಯ ಜಾಲರಿಯಿಂದ ಇಣಿಕಿ ನೋಡಲು


ಜಾರಸ್ತ್ರೀಯ ಬಾಯಿ ಆಳವಾದ ಹಳ್ಳ, ಯೆಹೋವನಿಗೆ ಸಿಟ್ಟನ್ನೆಬ್ಬಿಸಿದವನು ಅದರಲ್ಲಿ ಬೀಳುವನು.


ಅವಳು ಅವನನ್ನು ತನ್ನ ಸವಿಮಾತುಗಳಿಂದ ಮನವೊಲಿಸಿ, ಬಹಳವಾಗಿ ಪ್ರೇರೇಪಿಸಿ ಸಮ್ಮತಿಪಡಿಸುತ್ತಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು