Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 8:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನನ್ನ ಬೋಧನೆಯನ್ನು ಬೆಳ್ಳಿಗಿಂತಲೂ ಮತ್ತು ಜ್ಞಾನೋಪದೇಶವನ್ನು ಅಪರಂಜಿಗಿಂತಲೂ ಉತ್ತಮವೆಂದು ಹೊಂದಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅಂಗೀಕರಿಸಿರಿ ಬೆಳ್ಳಿಗಿಂತ ಶ್ರೇಷ್ಠವಾದ ಬೋಧನೆಯನ್ನು ಅಪರಂಜಿಗಿಂತ ಅಪೂರ್ವವಾದ ಉಪದೇಶವನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನನ್ನ ಬೋಧನೆಯನ್ನು ಬೆಳ್ಳಿಗಿಂತಲೂ ಜ್ಞಾನೋಪದೇಶವನ್ನು ಅಪರಂಜಿಗಿಂತಲೂ ಉತ್ತಮವೆಂದು ಹೊಂದಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನನ್ನ ಉಪದೇಶವನ್ನು ಬೆಳ್ಳಿಗಿಂತಲೂ ನನ್ನ ಜ್ಞಾನೋಪದೇಶವನ್ನು ಶುದ್ಧ ಬಂಗಾರಕ್ಕಿಂತಲೂ ಉತ್ತಮವೆಂದು ಸ್ವೀಕರಿಸಿಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಬೆಳ್ಳಿಗಿಂತ ನನ್ನ ಬೋಧನೆಯನ್ನು ಆರಿಸಿಕೋ ಉತ್ತಮ ಬಂಗಾರಕ್ಕಿಂತ ಮಿಗಿಲಾದ ತಿಳುವಳಿಕೆಯನ್ನು ಪಡೆದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 8:10
15 ತಿಳಿವುಗಳ ಹೋಲಿಕೆ  

ನಿಜವಾಗಿ ನಿನ್ನ ಆಜ್ಞೆಗಳು ಬಂಗಾರಕ್ಕಿಂತಲೂ, ಅಪರಂಜಿಗಿಂತಲೂ ನನಗೆ ಬಹುಪ್ರಿಯವಾಗಿವೆ.


ನೀನು ಕೊಟ್ಟ ಧರ್ಮಶಾಸ್ತ್ರವು, ಸಾವಿರಾರು ಚಿನ್ನ, ಬೆಳ್ಳಿಯ ನಾಣ್ಯಗಳಿಗಿಂತಲೂ ನನಗೆ ಅತಿಪ್ರಿಯವಾಗಿದೆ. ಯೋದ್.


ಸತ್ಯವನ್ನು ಎಂದರೆ ಜ್ಞಾನ, ಸುಶಿಕ್ಷೆ, ವಿವೇಕಗಳನ್ನು ಕೊಂಡುಕೋ, ಮಾರಿ ಬಿಡಬೇಡ.


ಜ್ಞಾನವು ಸ್ವತ್ತಿನಂತೆ ಪ್ರಯೋಜನಕರ. ಇದು ಲೋಕದಲ್ಲಿ ಜೀವಿಸುವವರಿಗೆ ಸ್ವತ್ತಿಗಿಂತ ಉತ್ತಮೋತ್ತಮವಾಗಿದೆ.


ಶಿಷ್ಟರ ನಾಲಿಗೆ ಚೊಕ್ಕ ಬೆಳ್ಳಿ, ದುಷ್ಟನ ಹೃದಯ ಮೌಲ್ಯವಿಲ್ಲದ್ದು.


ಆಗ ಪೇತ್ರನು “ಬೆಳ್ಳಿ ಬಂಗಾರವಂತೂ ನನ್ನಲ್ಲಿಲ್ಲ, ನನ್ನಲ್ಲಿರುವುದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆ” ಎಂದು ಹೇಳಿ,


ಬಂಗಾರಕ್ಕಿಂತಲೂ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು, ಬೆಳ್ಳಿಗಿಂತಲೂ ವಿವೇಕವನ್ನು ಹೊಂದುವುದು ಲೇಸು.


ಒಬ್ಬನು ತಾನು ಸಂಪಾದಿಸಿದ ದೊಡ್ಡ ಕೊಳ್ಳೆಯಲ್ಲಿ ಹೇಗೋ, ಹಾಗೆಯೇ ನಾನು ನಿನ್ನ ನುಡಿಯಲ್ಲಿ ಆನಂದಿಸುತ್ತೇನೆ.


ದುಃಖಪಡುವವರಾಗಿದ್ದರೂ ಸೇವೆಯಲ್ಲಿ ಯಾವಾಗಲೂ ಸಂತೋಷಪಡುತ್ತೇವೆ, ಬಡವರಾಗಿದ್ದರೂ ಅನೇಕರನ್ನು ಐಶ್ವರ್ಯವಂತರಾಗಿ ಮಾಡಿದ್ದೇವೆ; ಏನೂ ಇಲ್ಲದವರಾಗಿದ್ದರೂ ಎಲ್ಲಾ ಹೊಂದಿದವರಾಗಿದ್ದೇವೆ.


ನನ್ನಿಂದಾಗುವ ಫಲವು ಬಂಗಾರಕ್ಕಿಂತಲೂ ಹೌದು ಅಪರಂಜಿಗಿಂತಲೂ ಉತ್ತಮ. ನನ್ನ ಮೂಲಕವಾದ ಆದಾಯವು ಚೊಕ್ಕ ಬೆಳ್ಳಿಗಿಂತಲೂ ಅಮೂಲ್ಯವಾಗಿದೆ.


ಚೊಕ್ಕ ಬಂಗಾರವನ್ನು ಕೊಟ್ಟು ಅದನ್ನು ಕೊಂಡುಕೊಳ್ಳುವುದು ಅಸಾಧ್ಯ, ಅದರ ಬೆಲೆಗೆ ಬೆಳ್ಳಿಯನ್ನು ತೂಗುವುದು ಅಶಕ್ಯ.


ಬಂಗಾರವಾಗಲಿ, ಸ್ಫಟಿಕವಾಗಲಿ ಅದಕ್ಕೆ ಸಮವಾದೀತೇ? ಚಿನ್ನದ ಆಭರಣಗಳನ್ನು ಅದಕ್ಕೆ ಬದಲಾಗಿಕೊಡುವುದು ಸಾಧ್ಯವೋ?


ಹೊನ್ನು ಉಂಟು, ಹವಳದ ರಾಶಿ ಉಂಟು, ಆದರೆ ಜ್ಞಾನದ ತುಟಿಗಳೇ ಅಮೂಲ್ಯವಾದ ಆಭರಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು