Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 8:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಜ್ಞಾನವೆಂಬ ನನಗೆ ಜಾಣ್ಮೆಯೇ ನಿವಾಸ, ಯುಕ್ತಿಗಳ ತಿಳಿವಳಿಕೆಯನ್ನು ಹೊಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಜ್ಞಾನವೆಂಬ ನನಗೆ ಜಾಣ್ಮೆಯೆ ಸಹವಾಸಿ ಯುಕ್ತ ತಿಳುವಳಿಕೆ ನನಗೆ ಸಂಗಾತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಜ್ಞಾನವೆಂಬ ನನಗೆ ಜಾಣ್ಮೆಯೇ ನಿವಾಸ, ಯುಕ್ತಿಗಳ ತಿಳುವಳಿಕೆಯನ್ನು ಹೊಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ನಾನೇ ಜ್ಞಾನ. ನಾನು ಒಳ್ಳೆಯ ನ್ಯಾಯತೀರ್ಪಿನೊಡನೆ ವಾಸಿಸುವೆ. ನಾನು ವಿವೇಕದೊಡನೆಯೂ ಒಳ್ಳೆಯ ಆಲೋಚನೆಯೊಡನೆಯೂ ಇರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಜ್ಞಾನವೆಂಬ ನಾನು ವಿವೇಕದೊಂದಿಗೆ ವಾಸವಾಗಿದ್ದೇನೆ. ತಿಳುವಳಿಕೆಯನ್ನೂ ವಿವೇಚನೆಯನ್ನೂ ನಾನು ಹೊಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 8:12
16 ತಿಳಿವುಗಳ ಹೋಲಿಕೆ  

ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ, ತಿದ್ದುತ್ತಾನೆ.


ಮೋಶೆಯು ಇಸ್ರಾಯೇಲ್ಯರಿಗೆ ಹೀಗೆಂದನು, “ನೋಡಿರಿ, ಯೆಹೋವನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ, ಊರಿಯ ಮಗನೂ ಆಗಿರುವ ಬೆಚಲೇಲನೆಂಬವನನ್ನು ಹೆಸರು ಹಿಡಿದು ಕರೆದಿದ್ದಾನೆ.


ಆಹಾ ದೇವರ ಐಶ್ವರ್ಯವೂ, ಜ್ಞಾನವೂ, ವಿವೇಕವೂ ಅಗಾಧ. ಆತನ ನ್ಯಾಯತೀರ್ಪುಗಳು ಎಷ್ಟೋ ಆಗಮ್ಯವಾದದ್ದು. ಆತನ ಮಾರ್ಗಗಳು ಆಗೋಚರವಾದವುಗಳೂ ಆಗಿವೆ.


ಈ ನುಡಿಗಳು ಮೂಢರಿಗೆ ಜಾಣತನವನ್ನೂ, ಯೌವನಸ್ಥರಿಗೆ ತಿಳಿವಳಿಕೆಯನ್ನು ಮತ್ತು ಬುದ್ಧಿಯನ್ನು ಉಂಟುಮಾಡುವವು.


ಈ ಕ್ರಿಸ್ತನಲ್ಲಿಯೇ ಜ್ಞಾನ ಮತ್ತು ವಿವೇಕದ ಸರ್ವಸಂಪತ್ತು ಅಡಗಿದೆ.


ಇದಲ್ಲದೆ ತನ್ನ ಚಿತ್ತದ ಉದ್ದೇಶಕ್ಕನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವಾತನು ತನ್ನ ಸಂಕಲ್ಪದ ಪ್ರಕಾರ ಮೊದಲೇ ನೇಮಿಸಲ್ಪಟ್ಟವರಾದ ನಮ್ಮನ್ನು ಕ್ರಿಸ್ತನಲ್ಲಿ ತನ್ನ ಸ್ವಕೀಯ ಜನರನ್ನಾಗಿ ಅರಿಸಿಕೊಂಡನು.


ಯೆಹೋವನೇ, ನಿನ್ನ ಕೈಕೆಲಸಗಳು ಬಗೆ ಬಗೆಯಾಗಿವೆ. ಅವುಗಳನ್ನೆಲ್ಲಾ ಜ್ಞಾನದಿಂದಲೇ ಮಾಡಿರುವೆ; ಭೂಲೋಕವು ನಿನ್ನ ಆಸ್ತಿಯಿಂದ ತುಂಬಿರುತ್ತದೆ.


ಆ ನಕ್ಷೆಯಲ್ಲಿ ಸೂಚಿಸಿದ ಎಲ್ಲಾ ಕೆಲಸಗಳ ವಿವರವಾದ ಜ್ಞಾನವು ತನಗೆ ಯೆಹೋವನು ಸೂಚಿಸಿದಂತೆ ಪ್ರಾಪ್ತವಾಯಿತೆಂದು ಹೇಳಿದನು.


ದೇವರು ನಮ್ಮ ಕರ್ತನಾದ ಕ್ರಿಸ್ತಯೇಸುವಿನಲ್ಲಿ ಮಾಡಿದ ನಿತ್ಯಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು, ಪರಲೋಕದಲ್ಲಿ ರಾಜತ್ವಗಳಿಗೂ, ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂದು ಉದ್ದೇಶಿಸಿದನು.


ಈ ಕೃಪೆಯನ್ನು ಆತನು ಎಲ್ಲಾ ಜ್ಞಾನ ವಿವೇಕಗಳೊಂದಿಗೆ ನಮಗೆ ಹೇರಳವಾಗಿ ಸುರಿಸಿದ್ದಾನೆ.


ಯೆಹೂದ್ಯರು ತಿರುಗಿಕೊಂಡು ತಮ್ಮ ಮುಂದೆಯೂ ಹಿಂದೆಯೂ ಯುದ್ಧ ಪ್ರಾರಂಭವಾಗಿರುವುದನ್ನು ಕಂಡು ಯೆಹೋವನಿಗೆ ಮೊರೆಯಿಟ್ಟರು, ಯಾಜಕರು ತುತ್ತೂರಿಗಳನ್ನು ಊದಿದರು.


ಅವನು ನಫ್ತಾಲಿ ಕುಲದ ಒಬ್ಬ ವಿಧವೆಯಲ್ಲಿ ತೂರ್ ಪಟ್ಟಣದ ಒಬ್ಬ ಕಂಚುಗಾರನಿಗೆ ಹುಟ್ಟಿದವನು. ಜಾಣನೂ, ತಾಮ್ರದ ಕೆಲಸದಲ್ಲಿ ನಿಪುಣನೂ, ಅನುಭವಶಾಲಿಯೂ ಆಗಿದ್ದ ಅವನು ಅರಸನ ಬಳಿಗೆ ಬಂದು ಅರಸನು ಆಜ್ಞಾಪಿಸಿದ ಎಲ್ಲಾ ಕಾರ್ಯಗಳನ್ನು ಮಾಡಿ ಮುಗಿಸಿದನು.


ಇವನು ಯೆಹೋವನ ಆಲಯದ ಅಂಗಳಗಳು, ಸುತ್ತಣ ಕೋಣೆಗಳು, ದೇವಾಲಯದ ಭಂಡಾರಗಳು, ಪ್ರತಿಷ್ಠಿತ ವಸ್ತುಗಳು, ಭಂಡಾರಗಳು ಇವುಗಳ ವಿಷಯವಾಗಿಯೂ,


ಮೂಢರೇ, ಜಾಣತನವನ್ನು ಕಲಿತುಕೊಳ್ಳಿರಿ, ಜ್ಞಾನಹೀನರೇ, ಬುದ್ಧಿಯನ್ನು ಗ್ರಹಿಸಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು