Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 8:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನನ್ನಲ್ಲಿ ಧನ, ಘನತೆ, ಶ್ರೇಷ್ಠಸಂಪತ್ತೂ, ನೀತಿಯೂ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನನ್ನಲ್ಲಿವೆ ಶ್ರೀಮಂತಿಕೆ ಮತ್ತು ಘನತೆ ಶಾಶ್ವತ ಸಂಪತ್ತು ಹಾಗೂ ಸಮೃದ್ಧಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನನ್ನಲ್ಲಿ ಧನಘನತೆಗಳೂ ಶ್ರೇಷ್ಠಸಂಪತ್ತೂ ನೀತಿಯೂ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನನ್ನಲ್ಲಿಯೂ ಸಹ ಕೊಡಲು ಐಶ್ವರ್ಯವಿದೆ ಮತ್ತು ಘನತೆಯಿದೆ. ನಾನು ಶಾಶ್ವತವಾದ ಐಶ್ವರ್ಯವನ್ನೂ ಯಶಸ್ಸನ್ನೂ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಐಶ್ವರ್ಯವೂ ಘನತೆಯೂ, ಶಾಶ್ವತ ಸಂಪತ್ತು ಹಾಗೂ ಸಮೃದ್ಧಿಯು ನನ್ನೊಂದಿಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 8:18
21 ತಿಳಿವುಗಳ ಹೋಲಿಕೆ  

ಜ್ಞಾನವೆಂಬಾಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ, ಎಡಗೈಯಲ್ಲಿ ಧನವೂ, ಘನತೆಯೂ ಉಂಟು.


ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ನೀನು ಐಶ್ವರ್ಯವಂತನಾಗಲು ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ, ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿ ಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ.


ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿಯೊಂದು ಕೊರತೆಗಳನ್ನೂ ನೀಗಿಸುವನು.


ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವ ಹಾಗೆಯೂ


ದುಃಖಪಡುವವರಾಗಿದ್ದರೂ ಸೇವೆಯಲ್ಲಿ ಯಾವಾಗಲೂ ಸಂತೋಷಪಡುತ್ತೇವೆ, ಬಡವರಾಗಿದ್ದರೂ ಅನೇಕರನ್ನು ಐಶ್ವರ್ಯವಂತರಾಗಿ ಮಾಡಿದ್ದೇವೆ; ಏನೂ ಇಲ್ಲದವರಾಗಿದ್ದರೂ ಎಲ್ಲಾ ಹೊಂದಿದವರಾಗಿದ್ದೇವೆ.


ನಿಮಗಿರುವುದನ್ನು ಮಾರಿಬಿಟ್ಟು ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ. ಪರಲೋಕದಲ್ಲಿ ಲಯವಾಗದ ಸಂಪತ್ತನ್ನು ಇಟ್ಟುಕೊಳ್ಳಿರಿ. ಅದನ್ನು ಕದಿಯುವುದಕ್ಕೆ ಕಳ್ಳನು ಸಮೀಪಕ್ಕೆ ಬರಲಾರನು. ಅವು ನುಸಿ ಹಿಡಿದು ನಾಶವಾಗುವುದಿಲ್ಲ.


ಆದರೆ ಅಗತ್ಯವಾದದ್ದು ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ, ಅದು ಆಕೆಯಿಂದ ತೆಗೆಯಲ್ಪಡುವುದಿಲ್ಲ” ಎಂದು ಉತ್ತರಕೊಟ್ಟನು.


ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?


ಧನವು ಕೋಪದ ದಿನದಲ್ಲಿ ವ್ಯರ್ಥ, ಧರ್ಮವು ಮರಣವಿಮೋಚಕ.


ಅವನ ಮನೆಯಲ್ಲಿ ಸಿರಿಸಂಪತ್ತುಗಳು ಇರುವವು; ಅವನ ನೀತಿಯು ಸದಾಕಾಲವೂ ಫಲಿಸುತ್ತಿರುವುದು.


ನಿನ್ನ ನೀತಿಯು ದಿವ್ಯಪರ್ವತಗಳಂತೆಯೂ, ನಿನ್ನ ನ್ಯಾಯವು ಮಹಾಸಾಗರದಂತೆಯೂ ಇವೆ; ಯೆಹೋವನೇ, ನೀನು ಮನುಷ್ಯರನ್ನೂ, ಮೃಗಗಳನ್ನೂ ಸಂರಕ್ಷಿಸುತ್ತೀ.


ಅದರ ಕೋಣೆಗಳನ್ನು ಅಮೂಲ್ಯವಾದ ಎಲ್ಲಾ, ಇಷ್ಟ ಸಂಪತ್ತಿನಿಂದ ತುಂಬಿಸುವುದಕ್ಕೆ, ತಿಳಿವಳಿಕೆಯೇ ಉಪಕರಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು