Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 8:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮೂಢರೇ, ಜಾಣತನವನ್ನು ಕಲಿತುಕೊಳ್ಳಿರಿ, ಜ್ಞಾನಹೀನರೇ, ಬುದ್ಧಿಯನ್ನು ಗ್ರಹಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮೂಢರೇ, ಕಲಿತುಕೊಳ್ಳಿ ಜಾಣತನವನ್ನು ಬುದ್ಧಿಹೀನರೇ, ಗ್ರಹಿಸಿರಿ ಸನ್ಮತಿಯನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಮೂಢರೇ, ಜಾಣತನವನ್ನು ಕಲಿತುಕೊಳ್ಳಿರಿ, ಜ್ಞಾನಹೀನರೇ, ಬುದ್ಧಿಯನ್ನು ಗ್ರಹಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಮೂಢರೇ, ಜಾಣತನವನ್ನು ಕಲಿತುಕೊಳ್ಳಿರಿ; ಜ್ಞಾನಹೀನರೇ ಬುದ್ಧಿಯನ್ನು ಗ್ರಹಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಮುಗ್ಧರೇ, ಜ್ಞಾನವನ್ನು ಗ್ರಹಿಸಿರಿ. ಬುದ್ಧಿಹೀನರೇ, ನೀವು ತಿಳುವಳಿಕೆಯ ಹೃದಯದವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 8:5
15 ತಿಳಿವುಗಳ ಹೋಲಿಕೆ  

“ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವುದಕ್ಕೆ ಎಷ್ಟುಕಾಲ ಇಷ್ಟಪಡುವರು? ಜ್ಞಾನಹೀನರು ತಿಳಿವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು?


ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’ ಅಂದನು.


ಈ ನುಡಿಗಳು ಮೂಢರಿಗೆ ಜಾಣತನವನ್ನೂ, ಯೌವನಸ್ಥರಿಗೆ ತಿಳಿವಳಿಕೆಯನ್ನು ಮತ್ತು ಬುದ್ಧಿಯನ್ನು ಉಂಟುಮಾಡುವವು.


ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು; ಅದು ಪ್ರಾಣವನ್ನು ಉಜ್ಜೀವಿಸಮಾಡುವಂಥದ್ದು. ಯೆಹೋವನ ಕಟ್ಟಳೆಗಳು ನಂಬಿಕೆಗೆ ಯೋಗ್ಯವಾದದ್ದು; ಅವು ಬುದ್ಧಿಹೀನರಿಗೆ ವಿವೇಕಪ್ರದವಾಗಿದೆ.


ದೇವರು ಈ ಲೋಕದಲ್ಲಿ ಕೀಳಾದವರನ್ನೂ ಹಾಗೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣ್ಯರನ್ನು ಇಲ್ಲದಂತೆ ಮಾಡುವುದಕ್ಕಾಗಿ ಗಣನೆಗೆ ಬಾರದವರನ್ನು, ನಿಂದಿಸಲ್ಪಟ್ಟವರನ್ನು ಆರಿಸಿಕೊಂಡಿದ್ದಾನೆ.


ಯೆಹೋವನು ಶೂರನಂತೆ ಹೊರಟು, ಯುದ್ಧವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸುವನು. ಆರ್ಭಟಿಸಿ ಗರ್ಜಿಸಿ ಶತ್ರುಗಳ ಮೇಲೆ ಬಿದ್ದು ತನ್ನ ಪರಾಕ್ರಮವನ್ನು ತೋರ್ಪಡಿಸುವನು.


ಆಕೆಯು ಬುದ್ಧಿಹೀನರಿಗೆ, “ಮೂಢನಾಗಿರುವವನು ಈ ಕಡೆಗೆ ತಿರುಗಲಿ,


ಪಶುಪ್ರಾಯರಾದ ಪ್ರಜೆಗಳಿರಾ, ಲಕ್ಷಿಸಿರಿ; ಮೂರ್ಖರೇ, ನಿಮಗೆ ಬುದ್ಧಿಬರುವುದು ಯಾವಾಗ?


ಮೂಢರು ತಮ್ಮ ಉದಾಸೀನತೆಯಿಂದಲೇ ಹತರಾಗುವರು, ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೇ ನಾಶವಾಗುವರು.


ಜ್ಞಾನವಂತರು ಸನ್ಮಾನಕ್ಕೆ ಬಾಧ್ಯರಾಗುವರು, ಜ್ಞಾನಹೀನರಿಗಾಗುವ ಬಹುಮಾನವು ಅವಮಾನವೇ.


“ಜನರೇ, ನಿಮ್ಮನ್ನೇ ಕರೆಯುತ್ತೇನೆ, ಮಾನವರಿಗಾಗಿಯೇ ಧ್ವನಿಗೈಯುತ್ತೇನೆ.


ಜ್ಞಾನವೆಂಬ ನನಗೆ ಜಾಣ್ಮೆಯೇ ನಿವಾಸ, ಯುಕ್ತಿಗಳ ತಿಳಿವಳಿಕೆಯನ್ನು ಹೊಂದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು