Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 9:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಜ್ಞಾನಿಗೆ ಉಪದೇಶಿಸಿದರೆ ಹೆಚ್ಚು ಜ್ಞಾನವನ್ನು ಹೊಂದುವನು, ನೀತಿವಂತನಿಗೆ ಬೋಧಿಸಿದರೆ ಹೆಚ್ಚು ತಿಳಿವಳಿಕೆಯನ್ನು ಪಡೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಜ್ಞಾನಿಗೆ ಉಪದೇಶಿಸಿದರೆ ಅವನು ಹೆಚ್ಚು ಜ್ಞಾನಿಯಾಗುತ್ತಾನೆ; ಸತ್ಪುರುಷನಿಗೆ ಬೋಧಿಸಿದರೆ ಅವನು ಹೆಚ್ಚು ತಿಳುವಳಿಕೆ ಪಡೆಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಜ್ಞಾನಿಗೆ ಉಪದೇಶಿಸಿದರೆ ಹೆಚ್ಚು ಜ್ಞಾನವನ್ನು ಹೊಂದುವನು, ನೀತಿವಂತನಿಗೆ ಬೋಧಿಸಿದರೆ ಹೆಚ್ಚು ತಿಳುವಳಿಕೆಯನ್ನು ಪಡೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನೀನು ಜ್ಞಾನಿಗೆ ಉಪದೇಶಿಸಿದರೆ ಅವನು ಮತ್ತಷ್ಟು ಜ್ಞಾನಿಯಾಗುವನು. ನೀನು ನೀತಿವಂತನಿಗೆ ಬೋಧಿಸಿದರೆ, ಅವನು ಮತ್ತಷ್ಟು ತಿಳುವಳಿಕೆಯನ್ನು ಪಡೆದುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಜ್ಞಾನಿಗೆ ಶಿಕ್ಷಣ ನೀಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; ನೀತಿವಂತನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 9:9
8 ತಿಳಿವುಗಳ ಹೋಲಿಕೆ  

ಜ್ಞಾನಿಯು ಇವುಗಳನ್ನು ಕೇಳಿ ಹೆಚ್ಚಾದ ಪಾಡಿಂತ್ಯವನ್ನು ಹೊಂದುವನು, ವಿವೇಕಿಯು ಮತ್ತಷ್ಟು ಉಚಿತಾಲೋಚನೆಯನ್ನು ಹೊಂದುವನು.


ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಟ್ಟಿರುವವರಾದ ನಿಮ್ಮಲ್ಲಿ ಆ ನಿತ್ಯಜೀವ ಉಂಟೆಂಬುದು ಗೊತ್ತಾಗುವುದಕ್ಕಾಗಿ ನಿಮಗೆ ಈ ವಿಷಯಗಳನ್ನು ಬರೆದಿದ್ದೇನೆ.


ಕೇಳುವ ಕಿವಿಗೆ ಮುಟ್ಟುವ ಬುದ್ಧಿವಾದವು ಹೊನ್ನಿನ ಮುರುವಿಗೂ, ಅಪರಂಜಿಯ ಆಭರಣಕ್ಕೂ ಸಮಾನ.


ಯೆಹೋವನನ್ನು ತಿಳಿದುಕೊಳ್ಳೋಣ, ನಿರಂತರವಾಗಿ ಹುಡುಕಿ ತಿಳಿದುಕೊಳ್ಳೋಣ, ಆತನ ಆಗಮನವು ಉದಯದಂತೆ ನಿಶ್ಚಯ; ಆತನು ಮುಂಗಾರಿನಂತೆಯೂ, ಭೂಮಿಯನ್ನು ತಂಪುಮಾಡುವ ಹಿಂಗಾರಿನಂತೆಯೂ ನಮಗೆ ಸಿಕ್ಕುವನು” ಅಂದುಕೊಂಡು ನನ್ನನ್ನು ಮೊರೆಹೋಗುವರು.


ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್.


ಜ್ಞಾನಿಗಳು ತಿಳಿದ ಸಂಗತಿಯನ್ನು ಹೊರಪಡಿಸುವುದಿಲ್ಲ, ಮೂರ್ಖನ ಭಾಷಣ ನಾಶನಕ್ಕೆ ಸಮೀಪ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು