Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 1:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರ ಸೇವಕನೂ, ಯೇಸು ಕ್ರಿಸ್ತನ ಅಪೊಸ್ತಲನೂ ಆಗಿರುವ ಪೌಲನು, ನಮ್ಮೆಲ್ಲರಿಗೆ ಹುದುವಾದ ನಂಬಿಕೆಯಲ್ಲಿ ನಿಜಕುಮಾರನಾಗಿರುವ ತೀತನಿಗೆ ಬರೆಯುವ ಪತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1-4 ಕ್ರಿಸ್ತವಿಶ್ವಾಸದಲ್ಲಿ ಪುತ್ರನಾಗಿರುವ ತೀತನಿಗೆ - ದೇವರ ದಾಸನೂ ಯೇಸುಕ್ರಿಸ್ತರ ಪ್ರೇಷಿತನೂ ಆದ ಪೌಲನು ಬರೆಯುವ ಪತ್ರ.ತಂದೆಯಾದ ದೇವರೂ ನಮ್ಮ ಉದ್ಧಾರಕರಾದ ಯೇಸುಕ್ರಿಸ್ತರೂ ನಿನಗೆ ಕೃಪಾಶೀರ್ವಾದವನ್ನೂ‍ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ! ದೇವರು, ತಾವು ಆರಿಸಿಕೊಂಡಿರುವ ಜನರ ವಿಶ್ವಾಸವನ್ನು ದೃಢಪಡಿಸಲು ಮತ್ತು ಭಕ್ತಿಯನ್ನು ವೃದ್ಧಿಗೊಳಿಸಿ ಅಮರಜೀವದತ್ತ ಕರೆದೊಯ್ಯುವ ಸತ್ಯಗಳನ್ನು ಅವರಿಗೆ ಬೋಧಿಸಲು ನನ್ನನ್ನು ನೇಮಿಸಿದ್ದಾರೆ. ಈ ಅಮರ ಜೀವವನ್ನು ಕೊಡುವುದಾಗಿ ಸತ್ಯಪರರಾದ ದೇವರು ಆದಿಯಿಂದಲೂ ನಮಗೆ ವಾಗ್ದಾನಮಾಡಿದ್ದರು. ಸೂಕ್ತಕಾಲವು ಬಂದಾಗ ಈ ವಾಗ್ದಾನವನ್ನು ಈಡೇರಿಸಿ ತಮ್ಮ ಸಂದೇಶವನ್ನು ಪ್ರಕಟಿಸಿದರು. ನನಗೊಪ್ಪಿಸಿರುವ ಈ ಸಂದೇಶವನ್ನು ಜಗದ್ರಕ್ಷಕರಾದ ದೇವರ ಆಜ್ಞಾನುಸಾರ ನಾನು ಸಾರುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1-4 ದೇವರ ದಾಸನೂ ಯೇಸು ಕ್ರಿಸ್ತನ ಅಪೊಸ್ತಲನೂ ಆಗಿರುವ ಪೌಲನು ನಮ್ಮೆಲ್ಲರಿಗೆ ಹುದುವಾಗಿರುವ ನಂಬಿಕೆಯ ಸಂಬಂಧದಲ್ಲಿ ನನ್ನ ನಿಜಕುಮಾರನಾದ ತೀತನಿಗೆ ಬರೆಯುವದೇನಂದರೆ - ತಂದೆಯಾದ ದೇವರಿಂದಲೂ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಶಾಂತಿಯೂ ಆಗಲಿ. ದೇವರಾದುಕೊಂಡವರ ನಂಬಿಕೆಯೂ ಭಕ್ತಿಯನ್ನುಂಟುಮಾಡುವ ಸತ್ಯದ ಪರಿಜ್ಞಾನವೂ ವೃದ್ಧಿಯಾಗುವದಕ್ಕೋಸ್ಕರವೇ ಅಪೊಸ್ತಲನಾಗಿದ್ದೇನೆ. ಆ ನಂಬಿಕೆಗೂ ಸತ್ಯದ ಪರಿಜ್ಞಾನಕ್ಕೂ ನಿತ್ಯಜೀವದ ನಿರೀಕ್ಷೆಯೇ ಆಧಾರವಾಗಿದೆ. ಸುಳ್ಳಾಡದ ದೇವರು ಆ ನಿತ್ಯಜೀವವನ್ನು ಕೊಡುತ್ತೇನೆಂದು ಅನಾದಿಕಾಲದಲ್ಲಿ ವಾಗ್ದಾನಮಾಡಿ ತನ್ನ ಕ್ಲುಪ್ತ ಸಮಯದಲ್ಲಿ ವಾಗ್ದಾನ ನೆರವೇರಿಸಿ ಪ್ರಸಂಗದ ಮೂಲಕ ಪ್ರಕಟಿಸಿದನು. ಆ ಪ್ರಸಂಗೋದ್ಯೋಗವು ನಮ್ಮ ರಕ್ಷಕನಾದ ದೇವರ ಅಪ್ಪಣೆಯ ಪ್ರಕಾರ ನನಗೆ ಒಪ್ಪಿಸಲ್ಪಟ್ಟದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವರ ಸೇವಕನಾದ ಮತ್ತು ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು ಬರೆಯುವ ಪತ್ರ. ದೇವರು ಆರಿಸಿಕೊಂಡ ಜನರ ನಂಬಿಕೆಯನ್ನು ವೃದ್ಧಿಗೊಳಿಸುವುದಕ್ಕಾಗಿ ಮತ್ತು ಅವರಿಗೆ ಸತ್ಯವನ್ನು ತಿಳಿಸುವುದಕ್ಕಾಗಿ ನನ್ನನ್ನು ಕಳುಹಿಸಲಾಯಿತು. ದೇವರ ಸೇವೆಯನ್ನು ಹೇಗೆ ಮಾಡಬೇಕೆಂಬುದನ್ನು ಆ ಸತ್ಯವು ತೋರ್ಪಡಿಸುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರು ಆಯ್ದುಕೊಂಡವರ ನಂಬಿಕೆಗನುಸಾರವೂ ಭಕ್ತಿಗನುಸಾರವಾದ ಸತ್ಯದ ತಿಳುವಳಿಕೆಗನುಸಾರವೂ ದೇವರ ಸೇವಕನೂ ಕ್ರಿಸ್ತ ಯೇಸುವಿನ ಅಪೊಸ್ತಲನೂ ಆಗಿರುವ ಪೌಲನೆಂಬ ನನಗೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ದೆವಾಚೊ ಸೆವಕ್ ಅನಿ ಜೆಜು ಕ್ರಿಸ್ತಾಚೊ ಅಪೊಸ್ತಲ್ ಹೊವ್ನ್ ಹೊತ್ತ್ಯಾ ಪಾವ್ಲು, ವಿಶ್ವಾಸಾತ್ ದೆವಾಚಿ ಮನುನ್ ಅಸಲ್ಲ್ಯಾ ಲೊಕಾಕ್ನಿ ಮಜತ್ ಕರುಕ್ ಅನಿ ಅಮ್ಚ್ಯಾ ದೆವಸ್ಪಾನ್ ಶಿಕ್ವಲ್ಲ್ಯಾ ಖರ್‍ಯಾ ಶಿಕಾಪಾಚ್ಯಾ ವಾಟೆನ್ ಚಲ್ತಲ್ಯಾಕ್ನಿ ಚಾಲ್ವುನ್ ನ್ಹೆವ್ಕ್ ಮನುನ್ ಎಚುನ್ ಕಾಡಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 1:1
23 ತಿಳಿವುಗಳ ಹೋಲಿಕೆ  

ಯೇಸು ಕ್ರಿಸ್ತನ ದಾಸನೂ, ಅಪೊಸ್ತಲನಾಗುವುದಕ್ಕೆ ಕರೆಯಲ್ಪಟ್ಟವನೂ, ದೇವರ ಸುವಾರ್ತೆಯನ್ನು ಸಾರುವುದಕ್ಕೆ ಪ್ರತ್ಯೇಕಿಸಲ್ಪಟ್ಟವನೂ ಆಗಿರುವ ಪೌಲನು,


ಯಾವನಾದರೂ ಭಿನ್ನವಾದ ಉಪದೇಶವನ್ನು ಮಾಡಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ, ಭಕ್ತಾನುಸಾರವಾದ ಉಪದೇಶಗಳಿಗೂ ಸಮ್ಮತಿಸದೆ ಹೋದರೆ,


ಎದುರಿಸುವವರನ್ನು ಸೌಮ್ಯತೆಯಿಂದ ತಿದ್ದುವವನೂ ಆಗಿರಬೇಕು. ಬಹುಶಃ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟಾನು.


ಮೂಢರ ಬುದ್ಧಿಹೀನರ ವಿಚಾರಗಳು ಜಗಳಗಳಿಗೆ ಕಾರಣವಾಗುತ್ತವೆಯೆಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ.


ನಮ್ಮನ್ನು ತನ್ನ ಮಹಿಮೆಯಿಂದಲೂ, ಗುಣಾತಿಶಯದಿಂದಲೂ ಕರೆದ ದೇವರ ವಿಷಯವಾಗಿ ಯೇಸುವಿನ ದಿವ್ಯಶಕ್ತಿಯು ನಮಗೆ ದೈವಿಕ ಪರಿಜ್ಞಾನವನ್ನು ಕೊಟ್ಟಿರುವುದರ ಮೂಲಕ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವನ್ನೂ ದಾನಮಾಡಲಾಗಿದೆಯೆಂದು ನಾವು ಬಲ್ಲೆವು.


ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.


ಇವೆಲ್ಲವುಗಳು ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿರಬೇಕು? ಪರಿಶುದ್ಧವಾಗಿಯೂ ಭಕ್ತಿಯುಳ್ಳವರಾಗಿಯೂ ಜೀವಿಸಬೇಕು.


ಎಲ್ಲಾ ಜನರೂ ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರಬೇಕೆಂಬುದೇ ಆತನ ಚಿತ್ತವಾಗಿದೆ.


ಅವರ ಹೃದಯಗಳು ಉತ್ತೇಜನಗೊಂಡು, ಪ್ರೀತಿಯಿಂದ ಒಂದಾಗಿದ್ದು, ದೇವರ ಮರ್ಮವನ್ನು ಅಂದರೆ ಕ್ರಿಸ್ತನನ್ನು ತಿಳಿದುಕೊಳ್ಳುವ ಮೂಲಕ ಬರುವ ನಿಶ್ಚಯವಾದ ಭಾಗ್ಯವನ್ನು ಪಡೆಯಬೇಕೆಂಬುದೇ ನನ್ನ ಅಪೇಕ್ಷೆ. ಅದಕ್ಕಾಗಿಯೇ ನಾನು ಎಷ್ಟು ಪ್ರಯಾಸಪಡುತ್ತಿದ್ದೇನೆಂಬುದು ನಿಮಗೆ ತಿಳಿದಿರಬೇಕೆಂದು ಬಯಸುತ್ತೇನೆ.


ಕ್ರಿಸ್ತ ಯೇಸುವಿನ ದಾಸರಾದ ಪೌಲ ಮತ್ತು ತಿಮೊಥೆಯರು, ಫಿಲಿಪ್ಪಿಯದಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವಜನರಾಗಿರುವವರೆಲ್ಲರಿಗೂ ಮತ್ತು ಅವರೊಂದಿಗಿರುವ ಸಭಾಧ್ಯಕ್ಷರಿಗೂ ಹಾಗೂ ಸಭಾಸೇವಕರಿಗೂ ಬರೆಯುವುದೇನೆಂದರೆ,


ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೂ ಸಹೋದರನಾದ ತಿಮೊಥೆಯನೂ ಕೊರಿಂಥದಲ್ಲಿರುವ ದೇವರ ಸಭೆಯವರಿಗೂ ಅಖಾಯ ಸೀಮೆಯಲ್ಲಿ ಇರುವ ದೇವಜನರೆಲ್ಲರಿಗೂ ಬರೆಯುವುದೇನಂದರೆ,


ಅಲ್ಲಿದ್ದ ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು, ದೇವರ ವಾಕ್ಯವನ್ನು ಹೊಗಳಿದರು. ಮತ್ತು ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.


ದೇವರ ಸೇವಕನಾದ ಮೋಶೆಯ ಎಲ್ಲಾ ಆಜ್ಞೆಗಳಿಗೆ ಅನುಸಾರವಾಗಿ ಆರೋನನೂ, ಅವನ ಮಕ್ಕಳೂ ಇಸ್ರಾಯೇಲರಿಗೋಸ್ಕರ ಯಜ್ಞವೇದಿ, ಧೂಪವೇದಿ ಇವುಗಳ ಮೇಲೆ ಹೋಮ ಮಾಡುತ್ತಾ, ಧೂಪ ಹಾಕುತ್ತಾ, ದೇವಾಲಯದ ಅತಿಪರಿಶುದ್ಧ ಸ್ಥಳದ ಎಲ್ಲಾ ಸೇವೆಯನ್ನು ಮಾಡುತ್ತಾ, ದೋಷಪರಿಹಾರ ಮಾಡುತ್ತಾ ಇದ್ದರು.


ನಂಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಈ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.


ಯಾರು ದೇವರ ಮಗನನ್ನು ಅಲ್ಲಗಳೆಯುವನೋ ಅವನು ದೇವರಿಗೆ ಸೇರಿದವನಲ್ಲ. ಯಾರು ಮಗನನ್ನು ಒಪ್ಪಿಕೊಳ್ಳುವನೋ ಅವನು ತಂದೆಯಾದ ದೇವರಿಗೆ ಸೇರಿದವನಾಗಿದ್ದಾನೆ.


ದೇವರು ಆರಿಸಿಕೊಂಡವರು ಆತನಿಗೆ ಹಗಲುರಾತ್ರಿ ಮೊರೆಯಿಡುವಲ್ಲಿ, ಆತನು ಅವರ ವಿಷಯದಲ್ಲಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಅವರಿಗೆ ಬೇಗ ನ್ಯಾಯವನ್ನು ತೀರಿಸದೆ ಇರುವನೇ?


ಆದಕಾರಣ ದೇವರು ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆಯ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನು ತಾಳಿಕೊಳ್ಳುತ್ತೇನೆ.


ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬನು ಅನ್ಯದೇಶಗಳಲ್ಲಿ ಚದುರಿರುವ ಇಸ್ರಾಯೇಲ್ಯರ ಹನ್ನೆರಡು ಗೋತ್ರದವರಿಗೂ ಬರೆಯುವುದೇನೆಂದರೆ, “ನಿಮಗೆ ಶುಭವಾಗಲಿ.”


ಯೇಸು ಕ್ರಿಸ್ತನ ಪ್ರಕಟನೆಯು, ಆತನು ಬೇಗನೆ ಸಂಭವಿಸಬೇಕಾಗಿರುವ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ ದೇವರಿಂದ ಈ ಪ್ರಕಟಣೆಯನ್ನು ಹೊಂದಿದನು. ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಆ ಸಂಗತಿಗಳನ್ನು ತನ್ನ ದಾಸನಾದ ಯೋಹಾನನಿಗೆ ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು