Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 1:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ಕ್ರೇತ್ ದ್ವೀಪದವರು ಯಾವಾಗಲೂ ಸುಳ್ಳುಗಾರರೂ, ದುಷ್ಟಮೃಗಗಳೂ, ಸೋಮಾರಿಗಳಾದ ಹೊಟ್ಟೆಬಾಕರೂ” ಆಗಿದ್ದಾರೆಂದು ಅವರ ಸ್ವಂತ ಪ್ರವಾದಿಗಳಲ್ಲಿಯೇ ಒಬ್ಬ ಪ್ರವಾದಿಯು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12-13 ಕ್ರೇಟ್‍ನವನೇ ಆದ ಅವರ ಪ್ರವಾದಿಯೊಬ್ಬನು ಸ್ವಜನರ ವಿಷಯವಾಗಿ ಹೀಗೆಂದಿದ್ದಾನೆ: ‘ಕ್ರೇಟ್ ನಿವಾಸಿಗಳು ಸದಾ ಸುಳ್ಳುಗಾರರು, ದುಷ್ಟಮೃಗಗಳು, ಸೋಮಾರಿಗಳು ಮತ್ತು ಹೊಟ್ಟೆಬಾಕರು’ - ಈ ಮಾತು ನಿಜವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕ್ರೇತದವರು ಯಾವಾಗಲೂ ಸುಳ್ಳುಗಾರರೂ ದುಷ್ಟಮೃಗಗಳೂ ಸೋಮಾರಿಗಳಾದ ಹೊಟ್ಟೇಬಾಕರೂ ಆಗಿದ್ದಾರೆಂದು ಅವರಲ್ಲಿಯೇ ಹುಟ್ಟಿದ ಒಬ್ಬ ಪ್ರವಾದಿಯು ಹೇಳಿದನು. ಈ ಸಾಕ್ಷಿಯು ನಿಜವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅವರ ಪ್ರವಾದಿಗಳಲ್ಲಿ ಒಬ್ಬನು, “ಕ್ರೇತದ ಜನರು ಯಾವಾಗಲೂ ಸುಳ್ಳು ಹೇಳುತ್ತಾರೆ. ಅವರು ದುಷ್ಟ ಮೃಗಗಳಾಗಿದ್ದಾರೆ; ಸೋಮಾರಿತನದಿಂದ ಕೆಲಸವನ್ನೇ ಮಾಡದೆ ಹೊಟ್ಟೆಬಾಕರಾಗಿದ್ದಾರೆ” ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಕ್ರೇತದವರು ಯಾವಾಗಲೂ ಸುಳ್ಳುಗಾರರೂ ದುಷ್ಟಮೃಗಗಳಂಥವರೂ ಸೋಮಾರಿಗಳಾದ ಹೊಟ್ಟೆಬಾಕರೂ ಆಗಿದ್ದಾರೆ!” ಎಂದು ಅವರ ಸ್ವಂತ ಪ್ರವಾದಿಗಳಲ್ಲಿ ಒಬ್ಬನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತೆಂಚ್ಯಾತ್ಲ್ಯಾ ಕ್ರೆತ್ ಗಾಂವಾತ್ಲ್ಯಾ ಎಕ್ ಪ್ರವಾದ್ಯಾನುಚ್ ಅಶೆ ಮಟ್ಲ್ಯಾನಾಯ್ ಕ್ರೆತಾತ್ಲಿ ಲೊಕಾ ಕನ್ನಾಬಿ ಝುಟೆ ಬೊಲ್ತಲ್ಲಿ ಅನಿ ಭಯಂಕರ್ ಜನಾವರಾ ಸಾರ್ಕಿ, ಅನಿ ಅಸ್‍ ಬುರ್ಕಿ ಅನಿ ಆಳ್ಸಿ ಮಾನ್ಸಾ ಮನುನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 1:12
12 ತಿಳಿವುಗಳ ಹೋಲಿಕೆ  

ಕಪಟದಿಂದ ಸುಳ್ಳಾಡುವವರು, ಸ್ವಂತ ಮನಸ್ಸಾಕ್ಷಿಯ ಮೇಲೆ ಬರೆಹಾಕಲ್ಪಟ್ಟವರಾಗಿದ್ದು,


ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಮತ್ತು ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.


ಏಕೆಂದರೆ ಆತನಲ್ಲಿಯೇ ನಾವು ಜೀವಿಸುತ್ತೇವೆ, ಚಲಿಸುತ್ತೇವೆ ಮತ್ತು ಇರುತ್ತೇವೆ. ನಿಮ್ಮ ಕವಿಗಳಲ್ಲಿ ಕೆಲವರು, ‘ನಾವು ಆತನ ಸಂತಾನದವರೇ’ ಎಂದು ಹೇಳಿದ್ದಾರೆ.


ಇವರು ಸನ್ಮಾರ್ಗವನ್ನು ಬಿಟ್ಟವರು. ಹಾದಿ ತಪ್ಪಿದವರು ಮತ್ತು ಬೇಯೋರಿನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದವರಾಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಭಾವನೆಯನ್ನು ಪ್ರೀತಿಸಿದನು.


ಸ್ವಾಭಾವಿಕವಾಗಿ ಸೆರೆಹಿಡಿಯಲ್ಪಟ್ಟು ನಾಶವಾಗುವುದಕ್ಕೆ ಹುಟ್ಟಿರುವ ವಿವೇಕಶೂನ್ಯ ಪ್ರಾಣಿಗಳಂತಿರುವ ಈ ದುರ್ಬೋಧಕರು ತಮಗೆ ತಿಳಿಯದವುಗಳ ವಿಷಯವಾಗಿ ದೂಷಿಸುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ತಾವೇ ಸಂಪೂರ್ಣ ನಾಶವಾಗುವರು.


ಆಗಿರುವ ನಾವು ನಮ್ಮ ನಮ್ಮ ಭಾಷೆಗಳಲ್ಲಿ ಇವರು ದೇವರ ಮಹತ್ತುಗಳ ವಿಷಯವಾಗಿ ಹೇಳುವುದನ್ನು ಕೇಳುತ್ತಿದ್ದೇವಲ್ಲಾ” ಎಂದು ಅಂದುಕೊಂಡರು.


ಅನೇಕ ದಿನಗಳ ಕಾಲ ನಿಧಾನವಾಗಿ ಸಾಗುತ್ತಾ ಎಷ್ಟೋ ಪ್ರಯಾಸದಿಂದ ಕ್ನೀದಕ್ಕೆ ಸಮೀಪವಾಗಿ ಬಂದಾಗ ಗಾಳಿಯು ನಮ್ಮನ್ನು ಅಲ್ಲಿಗೆ ಮುಟ್ಟಗೊಡಿಸದೆ ಇದ್ದುದರಿಂದ ಕ್ರೇತ ದ್ವೀಪದ ಮರೆಯಲ್ಲಿ ಸಾಗಿ ಸಲ್ಮೋನೆಗೆ ಸಮೀಪವಾಗಿ ಬಂದು,


ಆ ಬಂದರು ಪ್ರದೇಶ; ಚಳಿಗಾಲವನ್ನು ಕಳೆಯುವುದಕ್ಕೆ ಅನುಕೂಲವಲ್ಲವಾದುದರಿಂದ, ಅಲ್ಲಿಂದ ಹೊರಟು ಸಾಧ್ಯವಾದರೆ ಹೇಗೂ ಫೊಯಿನಿಕ್ಸ ಊರನ್ನು ಸೇರಿ, ಅಲ್ಲೇ ಆ ಚಳಿಗಾಲವನ್ನು ಕಳೆಯಬೇಕೆಂದು ಹೆಚ್ಚು ಜನರು ತಮ್ಮ ಅಭಿಪ್ರಾಯಗಳನ್ನು ಹೇಳಿದರು. ಫೊಯಿನಿಕ್ಸವು ಕ್ರೇತ ದ್ವೀಪದ ಒಂದು ಬಂದರು ಪ್ರದೇಶ, ಈಶಾನ್ಯ ದಿಕ್ಕಿಗೂ, ಆಗ್ನೇಯ ದಿಕ್ಕಿಗೂ ಅಭಿಮುಖವಾಗಿದೆ.


ತೆಂಕಣ ಗಾಳಿ ಮೆಲ್ಲಗೆ ಬೀಸಲಾಗಿ ತಮ್ಮ ಉದ್ದೇಶವು ಸಾರ್ಥಕವಾಯಿತೆಂದು ಭಾವಿಸಿ ಲಂಗರುಗಳನ್ನು ತೆಗೆದು ಕ್ರೇತ ದ್ವೀಪವನ್ನು ಅನುಸರಿಸಿ ತೀರದ ಮಗ್ಗುಲಲ್ಲೇ ಹೋಗುತ್ತಿದ್ದರು.


ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕೆಲಸಗಳಲ್ಲಿಯೇ ಅವರಿಗೆ ಘನತೆ, ಅವರು ಪ್ರಪಂಚದ ಕಾರ್ಯಗಳ ಕುರಿತು ಚಿಂತಿಸುವವರು.


ಕ್ರೇತ್ ದ್ವೀಪದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವ ಕಾರ್ಯಗಳನ್ನು ಕ್ರಮಪಡಿಸಿ, ಪಟ್ಟಣ ಪಟ್ಟಣಗಳಲ್ಲಿ ಹಿರಿಯರನ್ನು ನೇಮಿಸಬೇಕೆಂದು ನಾನು ನಿನಗೆ ಅಪ್ಪಣೆಕೊಟ್ಟು ನಿನ್ನನ್ನು ಅಲ್ಲಿ ಬಿಟ್ಟು ಬಂದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು