Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 1:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಅವರು ಅಸಹ್ಯ ಕೃತ್ಯಗಳಲ್ಲಿ ಭಾಗವಹಿಸುವವರೂ, ದೇವರಿಗೆ ಅವಿಧೇಯರೂ ಆಗಿರುವುದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುತ್ತಾರೆ ಹಾಗು ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆಂದು ಸಾಬಿತುಪಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ತಾವು ದೇವರನ್ನು ಬಲ್ಲವರೆಂದು ಹೇಳಿಕೊಳ್ಳುತ್ತಾರೆ. ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಇಂಥವರು ಅವಿಧೇಯರೂ ಅಸಹ್ಯರೂ ಆಗಿರುವುದರಿಂದ ಯಾವುದೇ ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯರೂ ಸತ್ಕಾರ್ಯಗಳಿಗೆಲ್ಲಾ ಅಪ್ರಯೋಜಕರೂ ಆಗಿರುವದರಿಂದ ದೇವರನ್ನು ಅರಿಯೆವೆಂದು ತಮ್ಮ ಕಾರ್ಯಗಳಿಂದಲೇ ಹೇಳಿದಂತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ದೇವರ ಬಗ್ಗೆ ತಮಗೆ ತಿಳಿದಿದೆಯೆಂದು ಅವರು ಹೇಳಿದರೂ ಅವರು ದೇವರನ್ನು ತಿಳಿದಿಲ್ಲವೆಂದು ಅವರ ಕೆಟ್ಟಕಾರ್ಯಗಳೇ ಸ್ಪಷ್ಟಪಡಿಸುತ್ತವೆ. ಅವರು ಭಯಂಕರವಾದ ಜನರು ಮತ್ತು ಅವಿಧೇಯರು. ಯಾವ ಸತ್ಕಾರ್ಯಗಳನ್ನು ಮಾಡುವುದಕ್ಕೂ ಅವರು ಯೋಗ್ಯರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ತಾವು ದೇವರನ್ನು ತಿಳಿದವರೆಂದು ಅವರು ವಾದಿಸುತ್ತಾರೆ. ಆದರೆ ತಮ್ಮ ಕೃತ್ಯಗಳಿಂದ ದೇವರನ್ನೇ ಅಲ್ಲಗಳೆಯುವರಾಗಿದ್ದಾರೆ. ಅವರು ಅಸಹ್ಯರೂ ಅವಿಧೇಯರೂ ಯಾವ ಸತ್ಕಾರ್ಯಗಳನ್ನು ಮಾಡುವುದಕ್ಕೆ ಅಯೋಗ್ಯರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಅಪ್ನಿ ದೆವಾಕ್ ವಳಕ್ತಾಂವ್ ಮನುನ್ ತೆನಿ ಸಾಂಗುನ್ ಘೆತಾತ್, ಖರೆ ತೆನಿ ಕರ್‍ತಲ್ಯಾ ಕಾಮಾನಿ ತೆನಿ ದೆವಾಕ್ ತಿರಸ್ಕಾರ್ ಕರ್‍ತಾತ್ ತೆನಿ ಬುರ್ಶೆ ಹೊಲ್ಯಾತ್ ಅನಿ ದೆವಾಕ್ ಮಾನುನ್ ಘೆಯ್‌ನ್ಯಾತ್ ಬರಿ ಕಾಮಾ ಕರುಕ್ ಯೊಗ್ಯ್ ನಾತ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 1:16
27 ತಿಳಿವುಗಳ ಹೋಲಿಕೆ  

ಒಬ್ಬನು, “ನಾನು ಆತನನ್ನು ಬಲ್ಲೆನು” ಎಂದು ಹೇಳಿ ಆತನ ಆಜ್ಞೆಗಳಂತೆ ನಡೆಯದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ. ಸತ್ಯವೆಂಬುದು ಅವನಲ್ಲಿ ಇಲ್ಲ.


ಯೆಹೋವನು ಹೇಳುವುದೇನೆಂದರೆ, “ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ, ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು, ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.


ಹುರುಳಿಲ್ಲದ ಮಾತುಗಳಿಂದ ಯಾರು ನಿಮ್ಮನ್ನು ವಂಚಿಸದಿರಲಿ, ಇಂಥ ಕೃತ್ಯಗಳ ನಿಮಿತ್ತ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ.


ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು, ನಿನ್ನ ಮುಂದೆ ಕುಳಿತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೋ ತಾವು ದೋಚಿಕೊಂಡದರ ಮೇಲೆ ಇರುತ್ತದೆ.


ಏಕೆಂದರೆ ಭಕ್ತಿಹೀನರೂ, ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಕಾಮಾಭಿಲಾಷೆಯ ಕೃತ್ಯಗಳನ್ನು ನಡಿಸುವವರೂ, ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಕೆಲವು ಜನರು ರಹಸ್ಯವಾಗಿ ಸಭೆಯ ಒಳಗೆ ಹೊಕ್ಕಿದ್ದಾರೆ. ಇವರು ದಂಡನೆಗಾಗಿ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ ಎಂದು ಬರೆದದೆ.


ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು.


ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.


ಅದಕ್ಕೆ ಸಮುವೇಲನು, “ಯೆಹೋವನು ವಿಧೇಯತ್ವವನ್ನು ಮೆಚ್ಚುವಷ್ಟು ಯಜ್ಞಹೋಮಗಳಿಗೆ ಮೆಚ್ಚುತ್ತಾನೋ? ಯಜ್ಞವನ್ನರ್ಪಿಸುವುದಕ್ಕಿಂತ ಆತನ ಆಜ್ಞಾಪಾಲನೆ ಉತ್ತಮವಾಗಿದೆ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟವಾದುದು.


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.


ಯಾವನಾದರೂ ಸ್ವಂತ ಜನರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ಕ್ರಿಸ್ತ ನಂಬಿಕೆಯನ್ನು ತಿರಸ್ಕರಿಸಿದವನೂ ನಂಬದವನಿಗಿಂತ ಕೀಳಾದವನೂ ಆಗಿದ್ದಾನೆ.


ಅವರಂತು ದಿನದಿನವೂ ನನ್ನ ದರ್ಶನಕ್ಕಾಗಿ ಬಂದು, ನನ್ನ ಮಾರ್ಗವನ್ನು ತಿಳಿದುಕೊಳ್ಳುವುದರಲ್ಲಿ ಹೆಚ್ಚಳಪಡುತ್ತಾರೆ; ತನ್ನ ದೇವರ ನಿಯಮಗಳನ್ನು ಬಿಡದೆ ಧರ್ಮವನ್ನಾಚರಿಸುವ ಜನಾಂಗವೋ ಎಂಬಂತೆ, ಧೈರ್ಯವಾಗಿ ನನ್ನಿಂದ ನ್ಯಾಯವಿಧಿಗಳನ್ನು ಕೇಳಿಕೊಂಡು ದೇವದರ್ಶನದಲ್ಲಿ ಆನಂದಿಸುತ್ತಾರೆ.


ಇಸ್ರಾಯೇಲೆಂಬ ಹೆಸರಿನವರೂ, ಯೆಹೂದ ವಂಶೋತ್ಪನ್ನರೂ ಆದ ಯಾಕೋಬನ ಮನೆತನದವರೇ, ನೀವು ಯೆಹೋವನ ನಾಮದ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ, ನಿಜ. ಆದರೆ ಈ ನಿಮ್ಮ ಕಾರ್ಯಗಳು ಸತ್ಯಕ್ಕೂ, ಧರ್ಮಕ್ಕೂ ಅನುಸಾರವಾಗಿಲ್ಲ.


ಸೌಲನು ಸಮುವೇಲನಿಗೆ, “ನಾನು ಯೆಹೋವನ ಮತ್ತು ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿದ್ದೇನೆ; ಜನರಿಗೆ ಹೆದರಿ ಅವರ ಮಾತನ್ನು ಕೇಳಿದೆನು.


ಹೀಗಿರಲು ಅಧರ್ಮವನ್ನು ನೀರಿನಂತೆ ಕುಡಿಯುತ್ತಾ ಅಸಹ್ಯನೂ, ಕೆಟ್ಟವನೂ ಆದ ನರಜನ್ಮದವನು ಮತ್ತೂ ಅಶುದ್ಧನಲ್ಲವೇ!


ಧರ್ಮಶಾಸ್ತ್ರವು ನೀತಿವಂತರಿಗೋಸ್ಕರ ಅಲ್ಲ, ಆದರೆ ಅಕ್ರಮಗಾರರು, ಅವಿಧೇಯರು, ಭಕ್ತಿಹೀನರು, ಪಾಪಿಷ್ಠರು, ಅಪವಿತ್ರರು, ಪ್ರಾಪಂಚಿಕರು, ತಂದೆತಾಯಿಗಳನ್ನು ಕೊಲ್ಲುವವರು, ನರಹತ್ಯಮಾಡುವವರು,


ದೇವರ ಮಾತುಗಳನ್ನು ಕೇಳುವವನೂ, ಪರಾತ್ಪರನಾದ ದೇವರ ಜ್ಞಾನವನ್ನು ಪಡೆದವನೂ, ಪರವಶವಾಗಿ ಕಣ್ಣುತೆರೆದು, ಸರ್ವಶಕ್ತನ ದರ್ಶನವನ್ನು ಹೊಂದುವವನೂ ಆಗಿರುವ ಪುರುಷನು ನುಡಿದದ್ದು.


ಯೆಹೋವನಾದ ನಾನು ಇವರನ್ನು ನೂಕಿಬಿಟ್ಟಿದ್ದರಿಂದ ಇವರು ‘ಕಂದು ಬೆಳ್ಳಿ’ ಎನಿಸಿಕೊಳ್ಳುವರು” ಎಂದು ಹೇಳಿದ್ದಾನೆ.


ತಮ್ಮ ಕೊಳೆಯನ್ನು ತೊಳಕೊಳ್ಳದೆ ತಾವೇ ಶುದ್ಧರೆಂದು, ಎಣಿಸಿಕೊಳ್ಳುವ ಬೇರೊಂದು ತರದವರು ಉಂಟು.


ಹೌದು, ಯೆಹೋವನಿಗೆ ತಪ್ಪಿ ನಡೆದು ಆತನನ್ನು ಅಲ್ಲಗಳೆದಿದ್ದೇವೆ, ನಮ್ಮ ದೇವರನ್ನು ಹಿಂಬಾಲಿಸುವುದನ್ನು ಬಿಟ್ಟು ಅವನಿಂದ ದೂರವಾಗಿದ್ದೇವೆ. ಅನ್ಯಾಯವನ್ನೂ ದ್ರೋಹವನ್ನೂ ನುಡಿದಿದ್ದೇವೆ, ಹೃದಯಪೂರ್ವಕವಾಗಿ ಸುಳ್ಳುಮಾತುಗಳನ್ನು ಕಲ್ಪಿಸಿ ಆಡಿದ್ದೇವೆ.


ಜನರು, “ಯೆಹೋವನ ಜೀವದಾಣೆ” ಎಂದರೂ ಆ ಆಣೆಯು ಸುಳ್ಳೇ ಸುಳ್ಳು ಎಂದು ಯೆಹೋವನು ನುಡಿಯುತ್ತಾನೆ.


ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವುದೇಕೆ? ನೀನು ಅವರನ್ನು ನೆಟ್ಟಿದ್ದಿ, ಅವರು ಬೇರೂರಿ ಬೆಳೆದು ಹಣ್ಣು ಬಿಟ್ಟಿದ್ದಾರೆ. ನೀನು ಅವರ ಬಾಯಿಗೆ ಸಮೀಪ, ಅಂತರಿಂದ್ರಿಯಕ್ಕೆ ದೂರ.


ಆದ್ದರಿಂದ ದೇವರ ಮನುಷ್ಯನು ಎಲ್ಲವನ್ನೂ ಬಲ್ಲವನಾಗಿದ್ದು ಸಕಲಸತ್ಕಾರ್ಯಗಳಿಗೆ ಸನ್ನದ್ಧನಾಗುವನು.


ಅಧಿಪತಿಗಳಿಗೂ, ಅಧಿಕಾರಿಗಳಿಗೂ ಅಧೀನರಾಗಿ ವಿಧೇಯರಾಗಿರಬೇಕಂತಲೂ, ಸಕಲಸತ್ಕಾರ್ಯಗಳನ್ನು ಮಾಡುವುದಕ್ಕೆ ಸಿದ್ಧರಾಗಿರಬೇಕೆಂತಲೂ,


ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು