Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 1:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಸುಳ್ಳಾಡದ ದೇವರು, ಅನಾದಿಕಾಲದಲ್ಲಿಯೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು, ತಾನು ಆರಿಸಿಕೊಂಡವರ ನಂಬಿಕೆಯನ್ನು ಮತ್ತು ದೈವ ಭಕ್ತಿಯನ್ನು ಸತ್ಯದ ಜ್ಞಾನಕ್ಕನುಸಾರವಾಗಿ ದೃಢಪಡಿಸಲು ನಾನು ಕಾರ್ಯ ನಿರ್ವಹಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ತಕ್ಕಕಾಲ ಬಂದಾಗ ದೇವರು ಆ ನಿತ್ಯಜೀವವನ್ನು ಲೋಕಕ್ಕೆ ಪ್ರಕಟಿಸಿದನು. ನನಗೊಪ್ಪಿಸಿರುವ ಈ ಸಂದೇಶವನ್ನು ನಮ್ಮ ರಕ್ಷಕನಾದ ದೇವರ ಆಜ್ಞೆಗನುಸಾರವಾಗಿ ಸಾರುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ತಮ್ಮ ವಾಕ್ಯ ಸಾರುವುದರ ಮೂಲಕ ತಕ್ಕ ಕಾಲದಲ್ಲಿ ಪ್ರಕಟಿಸಿ ನಮ್ಮ ರಕ್ಷಕರಾದ ದೇವರ ಆಜ್ಞೆಗನುಸಾರವಾಗಿ ನನಗೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅನಿ ಸಮಾ ಎಳಾರ್ ದೆವಾನ್ ಅಪ್ನಾಚಿ ಬರಿ ಖಬರ್ ಪರ್ಗಟ್ ಕರ್ಲ್ಯಾನ್, ರಾಕನ್ ಕರ್‍ತಲ್ಯಾ ದೆವಾಚ್ಯಾ ಆಜ್ಞಾ ಸರ್ಕೆ ಹಿ ಖಬರ್ ಮಾಜ್ಯಾ ಹಾತಿತ್ ಒಪ್ಸುನ್ ದಿಲ್ಲ್ಯಾನ್ ಅನಿ ತೆ ಮಿಯಾ ದೆವಾ ಅಮ್ಚ್ಯಾ ಸುಟ್ಕಾ ದಿನಾರ್‍ಯಾಚ್ಯಾ ಹುಕುಮಾ ಸರ್ಕೆ ಪರ್ಗಟ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 1:3
39 ತಿಳಿವುಗಳ ಹೋಲಿಕೆ  

ಈ ಬೋಧನೆಯು ಭಾಗ್ಯವಂತನಾದ ದೇವರ ಮಹಿಮೆಯನ್ನು ಪ್ರದರ್ಶಿಸುವ ಸುವಾರ್ತೆಗೆ ಅನುಸಾರವಾಗಿದೆ. ಈ ಸುವಾರ್ತೆಯ ಸೇವೆಯು ನನಗೆ ಕೊಡಲ್ಪಟ್ಟಿತು.


ನಮ್ಮ ರಕ್ಷಕನಾದ ದೇವರ ನಮ್ಮ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತ ಯೇಸುವಿನ ಆಜ್ಞೆಯ ಮೇರೆಗೆ ನೇಮಿಸಲ್ಪಟ್ಟ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು


ಯಾವುದನ್ನೂ ಕದ್ದಿಟ್ಟುಕೊಳ್ಳದೆ ಒಳ್ಳೆಯ ನಂಬಿಗಸ್ತರೆಂದು ಹೆಸರನ್ನು ಹೊಂದಲು, ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯಗಳಲ್ಲಿ ಗೌರವ ತರುವಂತೆ ವರ್ತಿಸಬೇಕೆಂದು ಅವರಿಗೆ ಉಪದೇಶಿಸು.


ಅಂದರೆ ಮಹಾ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮಹಿಮೆಪೂರ್ಣವಾದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ, ನೀತಿವಂತರಾಗಿಯೂ, ಭಕ್ತಿಯುಳ್ಳವರಾಗಿಯೂ ಜೀವಿಸಬೇಕೆಂದು ನಮಗೆ ಬೋಧಿಸುತ್ತದೆ.


ಇದಕ್ಕಾಗಿ ನಾವು ಕಷ್ಟಪಡುತ್ತಿದ್ದೇವೆ, ಪ್ರಯಾಸಪಡುತ್ತಿದ್ದೇವೆ, ಯಾಕೆಂದರೆ ಎಲ್ಲಾ ಮನುಷ್ಯರಿಗೂ, ವಿಶೇಷವಾಗಿ ನಂಬುವವರಿಗೆ, ರಕ್ಷಕನಾಗಿರುವ ಜೀವವುಳ್ಳ ದೇವರ ಮೇಲೆ ನಾವು ನಿರೀಕ್ಷೆಯನ್ನಿಟ್ಟುಕೊಂಡವರಾಗಿದ್ದೇವೆ.


ಹಾಗೆ ಮಾಡುವುದು ನಮ್ಮ ರಕ್ಷಕನಾದ ದೇವರ ಸನ್ನಿಧಿಯಲ್ಲಿ ಒಳ್ಳೆಯದು, ಮೆಚ್ಚಿಕೆಯಾಗಿಯೂ ಇದೆ.


ದೇವರು ನಮ್ಮನ್ನು ಯೋಗ್ಯರೆಂದೆಣಿಸಿ, ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನು. ಆದುದರಿಂದ ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿಯಲ್ಲ ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತಿದ್ದೇವೆ.


ಆಕಾಶದ ಕೆಳಗಿರುವ ಸರ್ವ ಸೃಷ್ಟಿಗೂ ಸಾರಲ್ಪಟ್ಟಂತಹ ಮತ್ತು ನೀವು ಕೇಳಿದಂತಹ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯಿಂದ ಕದಲಿಹೋಗದಂತೆ ನಂಬಿಕೆಯಲ್ಲಿ ದೃಢವಾಗಿರಿ ಮತ್ತು ನೆಲೆಗೊಂಡಿರಿ. ಇದೇ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾಗಿದ್ದೇನೆ.


ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳಿದುಕೊಂಡ ದಿನದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ನಿಮ್ಮಲ್ಲಿ ಫಲಕೊಟ್ಟಂತೆ ಲೋಕದಲ್ಲೆಲ್ಲಾ ಫಲಕೊಟ್ಟು ವೃದ್ಧಿಯಾಗುತ್ತಿದೆ.


ಇದಲ್ಲದೆ ಆತನು ಬಂದು ದೂರವಾಗಿದ್ದ ನಿಮಗೂ ಮತ್ತು ಸಮೀಪವಾಗಿದ್ದವರಿಗೂ ಸಮಾಧಾನವನ್ನು ಸಾರಿದನು.


ಆದರೆ ಸೂಕ್ತಸಮಯ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡಿಸಬೇಕೆಂತಲೂ, ಪುತ್ರರ ಬಾಧ್ಯತೆಯ ಪದವಿಯನ್ನು ನಮಗೆ ದೊರಕಿಸಿಕೊಡಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ, ಧರ್ಮಶಾಸ್ತ್ರಾಧೀನನಾಗಿಯೂ ಬಂದನು.


ನಾನು ಸ್ವಂತ ಇಷ್ಟದಿಂದ ಈ ಕೆಲಸವನ್ನು ಮಾಡಿದರೆ ನನಗೆ ಪ್ರತಿಫಲ ದೊರೆಯುವುದು; ಇಲ್ಲದಿದ್ದರೂ ಈ ಕರ್ತವ್ಯ ನನ್ನ ವಶಕ್ಕೆ ಒಪ್ಪಿಸಿಕೊಡಲ್ಪಟ್ಟಿದೆ.


ಹೇಳಿರಿ, ನಿಮ್ಮ ನ್ಯಾಯಗಳನ್ನು ಮುಂದಕ್ಕೆ ತನ್ನಿರಿ, ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಆಲೋಚಿಸಿಕೊಳ್ಳಲಿ. ಪೂರ್ವದಿಂದಲೂ ಈ ಸಂಗತಿಯನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮೊದಲೇ ಯಾರು ತಿಳಿಸಿದರು? ಯೆಹೋವನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ಸತ್ಯಸ್ವರೂಪನೂ, ರಕ್ಷಕನಾದ ದೇವರು ಇಲ್ಲವೇ ಇಲ್ಲ.


ಹೇಗೆಂದರೆ ನನ್ನ ಸೆರೆವಾಸವು ಕ್ರಿಸ್ತನ ನಿಮಿತ್ತವೇ ಎಂದು ಅರಮನೆಯ ಕಾವಲುಗಾರರೆಲ್ಲರಿಗೂ ಹಾಗೂ ಉಳಿದವರೆಲ್ಲರಿಗೂ ತಿಳಿಯಲ್ಪಟ್ಟಿತು.


ನಾನು ಯೆರೂಸಲೇಮ್ ಮೊದಲುಗೊಂಡು ಇಲ್ಲುರಿಕ ಸೀಮೆಯ ಸುತ್ತಮುತ್ತ ಪ್ರಯಾಣಿಸಿ ಕ್ರಿಸ್ತನ ಸುವಾರ್ತೆಯ ಸಾರೋಣವನ್ನು ಪೂರೈಸಿದ್ದೇನೆ.


ನಾವು ಬಲಹೀನರಾಗಿದ್ದಾಗಲೇ ಕ್ರಿಸ್ತನು ನಿಯಮಿತ ಕಾಲದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.


ದೇವರು ಒಬ್ಬ ಮನುಷ್ಯನಿಂದ ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ, ಅವರವರು ಇರತಕ್ಕ ಕಾಲಗಳನ್ನೂ ಹಾಗು ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ಅವರನ್ನು ಇರಿಸಿ,


ಎಲ್ಲಾ ಜನರಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನದ ಶುಭಸಮಾಚಾರವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ಅನುಗ್ರಹಿಸಿದ ವಾಕ್ಯವು ನಿಮಗೇ ತಿಳಿದಿದೆ.


ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ.


ಆ ಮೇಲೆ ಅವರಿಗೆ, “ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ.


ಆದರೆ ಮೊದಲು ಎಲ್ಲಾ ಜನಾಂಗಗಳಿಗೆ ಸುವಾರ್ತೆಯು ಸಾರಲ್ಪಡಬೇಕು.


ಸೂಕ್ತ ಹಾಗು ನಿಯಮಿತ ಕಾಲದಲ್ಲಿ ಆ ದರ್ಶನದಲ್ಲಿ ಕಂಡದ್ದು ನೆರವೇರುವುದು, ಅದರ ಅಂತಿಮ ಪರಿಣಾಮ ಶೀಘ್ರದಲ್ಲೇ ಗೊತ್ತಾಗುವುದು. ತಡವಾದರೂ ಅದಕ್ಕೆ ಕಾದಿರು; ಅದು ಖಂಡಿತವಾಗಿ ಕೈಗೂಡುವುದು.


ಆ ಇಬ್ಬರು ರಾಜರು ಒಬ್ಬರಿಗೊಬ್ಬರು ಕೇಡಿನ ಮನಸುಳ್ಳವರಾಗಿ ಸಹ ಪಂಕ್ತಿಯಲ್ಲಿ ಸುಳ್ಳುಸುಳ್ಳು ಮಾತನಾಡಿಕೊಳ್ಳುವರು. ಆದರೆ ಏನೂ ಸಾಗದು, ಪರಿಣಾಮವು ನಿಶ್ಚಿತ ಕಾಲದಲ್ಲೇ ತಲೆದೋರುವುದು.


ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ಆ ರಾಜ್ಯಗಳ ಕಡೆಯ ಕಾಲದಲ್ಲಿ, ಅಧರ್ಮಿಗಳ ಅಧರ್ಮವು ಪೂರ್ತಿಯಾದಾಗ ಕಠಿಣಮುಖನೂ, ತಂತ್ರವುಳ್ಳವನೂ ಆದ ಒಬ್ಬ ರಾಜನು ತಲೆದೋರುವನು.


ಇಸ್ರಾಯೇಲರ ದೇವರೇ, ರಕ್ಷಕನೇ, ನಿಶ್ಚಯವಾಗಿಯೂ ನೀನು ಮರೆಮಾಡಿಕೊಳ್ಳುವ ದೇವರಾಗಿದ್ದೀ.


ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.”


ಮೇಘದ ಮೇಲೆ ಕುಳಿತಿದ್ದಾತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಹಾಕಿದನು. ಆಗ ಭೂಮಿಯ ಪೈರು ಕೊಯ್ಯಲ್ಪಟ್ಟಿತು.


ಕಾಲವು ಪರಿಪೂರ್ಣವಾದಾಗ, ಆತನು ಭೂಪರಲೋಕಗಳಲ್ಲಿರುವ ಸಮಸ್ತವನ್ನು ಕ್ರಿಸ್ತನಲ್ಲಿ ಒಂದುಗೂಡಿಸುವುದೇ ಆ ಸಂಕಲ್ಪವಾಗಿತ್ತು.


“ಕಾಲವು ಪರಿಪೂರ್ಣವಾಯಿತು, ದೇವರ ರಾಜ್ಯವು ಸಮೀಪಿಸಿತು; ಪಶ್ಚಾತ್ತಾಪಪಟ್ಟು ಸುವಾರ್ತೆಯನ್ನು ನಂಬಿರಿ.”


ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಶಾಸ್ತ್ರಗಳ ಮೂಲಕ ಅನ್ಯಜನರೆಲ್ಲರಿಗೂ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವುದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪೂರ್ವಕಾಲಗಳಲ್ಲಿ ಮರೆಯಾಗಿದ್ದು ಈಗ ಬೆಳಕಿಗೆ ಬಂದಿರುವಂತಹದ್ದೂ, ಈ ಮರ್ಮಕ್ಕೆ ಅನುಸಾರ ಎಂದರೆ ಯೇಸು ಕ್ರಿಸ್ತನ ವಿಷಯವಾದಂಥ ಹಾಗೂ ನಾನು ಸಾರುವಂಥ ಸುವಾರ್ತೆಗನುಸಾರವಾಗಿ ನಿಮ್ಮನ್ನು ಸ್ಥಿರಪಡಿಸುವುದಕ್ಕೆ ಶಕ್ತನಾಗಿರುವ,


ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು