Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 1:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕ್ರೇತ್ ದ್ವೀಪದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವ ಕಾರ್ಯಗಳನ್ನು ಕ್ರಮಪಡಿಸಿ, ಪಟ್ಟಣ ಪಟ್ಟಣಗಳಲ್ಲಿ ಹಿರಿಯರನ್ನು ನೇಮಿಸಬೇಕೆಂದು ನಾನು ನಿನಗೆ ಅಪ್ಪಣೆಕೊಟ್ಟು ನಿನ್ನನ್ನು ಅಲ್ಲಿ ಬಿಟ್ಟು ಬಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನೀನು ಕ್ರೇಟ್ ದ್ವೀಪದಲ್ಲಿ ಇನ್ನೂ ಸರಿಪಡಿಸಬೇಕಾದ ಕೆಲಸಗಳನ್ನು ಕ್ರಮಪಡಿಸಿ, ಅಲ್ಲಿಯ ಪ್ರತಿಯೊಂದು ಪಟ್ಟಣಕ್ಕೂ ಸಭೆಯ ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀನು ಕ್ರೇತದ್ವೀಪದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವ ಕಾರ್ಯಗಳನ್ನು ಕ್ರಮಪಡಿಸಿ ಪಟ್ಟಣಪಟ್ಟಣಗಳಲ್ಲೂ ಸಭೆಯ ಹಿರಿಯರನ್ನು ನೇವಿುಸಬೇಕೆಂದು ನಾನು ನಿನಗೆ ಅಪ್ಪಣೆ ಕೊಟ್ಟು ನಿನ್ನನ್ನು ಅಲ್ಲೇ ಬಿಟ್ಟು ಬಂದೆನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇನ್ನೂ ಪೂರ್ಣವಾಗಿಲ್ಲದ ಕಾರ್ಯಗಳನ್ನು ಪೂರ್ಣಗೊಳಿಸುವುದಕ್ಕಾಗಿಯೂ ಪ್ರತಿಯೊಂದು ಪಟ್ಟಣದಲ್ಲಿ ಸಭಾಹಿರಿಯರನ್ನು ಆರಿಸುವುದಕ್ಕಾಗಿಯೂ ನಾನು ನಿನ್ನನ್ನು ಕ್ರೇತದಲ್ಲಿ ಬಿಟ್ಟು ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಕ್ರೇತದ್ವೀಪದಲ್ಲಿ ಪೂರ್ಣಗೊಳಿಸದ ಕಾರ್ಯಗಳನ್ನು ನೀನು ಕ್ರಮಪಡಿಸಿ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಪ್ರತಿಯೊಂದು ಪಟ್ಟಣದಲ್ಲಿ ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಮಿಯಾ ತುಕಾ ಕ್ರೆತಾತ್ ಕಶ್ಯಾಕ್ ಸೊಡುನ್ ಯೆಲೊ, ಮಟ್ಲ್ಯಾರ್, ಅಜುನ್ ಥೈ ಸಮಾ ಕರ್‍ತಲಿ ಕಾಮಾ ಹಾತ್, ತಿ ಪುರಾ ಕರುಕ್ ಅನಿ ಹರ್ ಗಾಂವಾಂಚ್ಯಾ ತಾಂಡ್ಯಾಚ್ಯಾ ವಡ್ಲಾಕ್ನಿ ನೆಮ್ಸುನ್ ಕಾಡುಕ್ ಮಿಯಾ ತುಕಾ ಸಾಂಗಲ್ಲ್ಯಾ ಗೊಸ್ಟಿಯಾ ಯಾದ್ ಥವ್ನ್ ಘೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 1:5
18 ತಿಳಿವುಗಳ ಹೋಲಿಕೆ  

ಇದಲ್ಲದೆ ಪ್ರತಿ ಕ್ರೈಸ್ತ ಸಭೆಗೂ ಹಿರಿಯರನ್ನು ನೇಮಿಸಿದರು. ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರು ನಂಬಿದ್ದ ಕರ್ತನಿಗೆ ಅವರನ್ನು ಒಪ್ಪಿಸಿದರು.


ನಾನು ಮಕೆದೋನ್ಯಕ್ಕೆ ಹೋಗುತ್ತಿದ್ದಾಗ ನೀನು ಎಫೆಸದಲ್ಲೇ ಇದ್ದುಕೊಂಡು ಅಲ್ಲಿರುವ ಕೆಲವರಿಗೆ, ನೀವು ಬೇರೆ ಉಪದೇಶವನ್ನು ಮಾಡಬಾರದೆಂತಲೂ,


ಪ್ರಸಂಗಿಯು ಜ್ಞಾನಿಯಾಗಿದ್ದು, ಜನರಿಗೆ ತಿಳಿವಳಿಕೆಯನ್ನು ಬೋಧಿಸುತ್ತಾ ಬಂದನು, ಅನೇಕಾನೇಕ ಜ್ಞಾನೋಕ್ತಿಗಳನ್ನು ಧ್ಯಾನಿಸಿ, ಪರೀಕ್ಷಿಸಿ ಕ್ರಮಪಡಿಸಿದನು.


ಆದರೆ ಎಲ್ಲವೂ ಯೋಗ್ಯವಾಗಿಯೂ ಹಾಗೂ ಕ್ರಮದಿಂದಲೂ ನಡೆಯಲಿ.


ನೀನು ಅನೇಕ ಸಾಕ್ಷಿಗಳ ಮುಂದೆ ನನ್ನಿಂದ ಕೇಳಿದ ಉಪದೇಶವನ್ನು ಇತರರಿಗೆ ಬೋಧಿಸಲು ಶಕ್ತರಾದ, ನಂಬಿಗಸ್ತರಾದ ಜನರಿಗೆ ಅದನ್ನು ಒಪ್ಪಿಸಿಕೊಡು.


ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟಮಾಡಲಿ ನೀವು ಸೇರಿಬಂದದ್ದು ನ್ಯಾಯ ತೀರ್ಪಿಗೊಳಗಾಗುವುದಕ್ಕೆ ಕಾರಣವಾಗಬಾರದು. ಇನ್ನುಳಿದಿರುವ ಸಂಗತಿಗಳನ್ನು ನಾನು ಬಂದ ನಂತರ ಆದೇಶಿಸುತ್ತೇನೆ.


ಅವರು ಬಹುಕಾಲ ಊಟವಿಲ್ಲದೆ ಇದ್ದ ಮೇಲೆ, ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು; “ಎಲೈ ಜನರೇ, ನೀವು ಕ್ರೇತದಿಂದ ಹೊರಟು ಈ ಕಷ್ಟನಷ್ಟಗಳಿಗೆ ಗುರಿಯಾಗದಂತೆ ನನ್ನ ಮಾತನ್ನು ಕೇಳಬೇಕಾಗಿತ್ತು.


ಆ ಬಂದರು ಪ್ರದೇಶ; ಚಳಿಗಾಲವನ್ನು ಕಳೆಯುವುದಕ್ಕೆ ಅನುಕೂಲವಲ್ಲವಾದುದರಿಂದ, ಅಲ್ಲಿಂದ ಹೊರಟು ಸಾಧ್ಯವಾದರೆ ಹೇಗೂ ಫೊಯಿನಿಕ್ಸ ಊರನ್ನು ಸೇರಿ, ಅಲ್ಲೇ ಆ ಚಳಿಗಾಲವನ್ನು ಕಳೆಯಬೇಕೆಂದು ಹೆಚ್ಚು ಜನರು ತಮ್ಮ ಅಭಿಪ್ರಾಯಗಳನ್ನು ಹೇಳಿದರು. ಫೊಯಿನಿಕ್ಸವು ಕ್ರೇತ ದ್ವೀಪದ ಒಂದು ಬಂದರು ಪ್ರದೇಶ, ಈಶಾನ್ಯ ದಿಕ್ಕಿಗೂ, ಆಗ್ನೇಯ ದಿಕ್ಕಿಗೂ ಅಭಿಮುಖವಾಗಿದೆ.


ಅನೇಕ ದಿನಗಳ ಕಾಲ ನಿಧಾನವಾಗಿ ಸಾಗುತ್ತಾ ಎಷ್ಟೋ ಪ್ರಯಾಸದಿಂದ ಕ್ನೀದಕ್ಕೆ ಸಮೀಪವಾಗಿ ಬಂದಾಗ ಗಾಳಿಯು ನಮ್ಮನ್ನು ಅಲ್ಲಿಗೆ ಮುಟ್ಟಗೊಡಿಸದೆ ಇದ್ದುದರಿಂದ ಕ್ರೇತ ದ್ವೀಪದ ಮರೆಯಲ್ಲಿ ಸಾಗಿ ಸಲ್ಮೋನೆಗೆ ಸಮೀಪವಾಗಿ ಬಂದು,


ಹಾಗೆಯೇ ಮಾಡಿ, ಅದನ್ನು ಬಾರ್ನಬನ ಮತ್ತು ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿಕೊಟ್ಟರು.


ನಾನು ಪುರಾತನ ಕಾಲದವರನ್ನು ಸೃಷ್ಟಿಸಿದಂದಿನಿಂದ ನನ್ನ ಹಾಗೆ ಯಾರು ಪ್ರಕಟಿಸಿಕೊಂಡಿದ್ದಾರೆ? ಅಂಥವರಿದ್ದರೆ ನನ್ನೆದುರಿಗೆ ಹೇಳಿ ಸ್ಥಾಪಿಸಲಿ. ಇಲ್ಲವೆ ಮುಂದಿನವುಗಳನ್ನು ಈಗ ತಿಳಿಸಲಿ, ಭವಿಷ್ಯತ್ತುಗಳನ್ನು ಹೇಳಲಿ.


ನಾನು ಶರೀರದಿಂದ ನಿಮ್ಮ ಬಳಿಯಲ್ಲಿ ಇಲ್ಲದಿದ್ದರೂ ಆತ್ಮನಿಂದ ನಿಮ್ಮೊಂದಿಗಿದ್ದು ನೀವು ಕ್ರಮಬದ್ಧವಾಗಿ ನಡೆಯುವುದನ್ನು ಮತ್ತು ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಂತಿರುವುದನ್ನೂ ನೋಡಿ ಸಂತೋಷಪಡುತ್ತೇನೆ.


ಆಗಿರುವ ನಾವು ನಮ್ಮ ನಮ್ಮ ಭಾಷೆಗಳಲ್ಲಿ ಇವರು ದೇವರ ಮಹತ್ತುಗಳ ವಿಷಯವಾಗಿ ಹೇಳುವುದನ್ನು ಕೇಳುತ್ತಿದ್ದೇವಲ್ಲಾ” ಎಂದು ಅಂದುಕೊಂಡರು.


ಸೊಲೊಮೋನನು ಯೆರೂಸಲೇಮಿನಲ್ಲಿ ಯೆಹೋವನ ಆಲಯವನ್ನು ಕಟ್ಟುವ ತನಕ ಅವರು ದೇವದರ್ಶನದ ಗುಡಾರವೆಂಬ ಆಲಯದ ಮುಂದೆ ತಮ್ಮ ಕ್ರಮಾನುಸಾರವಾಗಿ ವಾದ್ಯ ಸೇವೆಯನ್ನು ನಡೆಸುತ್ತಿದ್ದರು.


ತೆಂಕಣ ಗಾಳಿ ಮೆಲ್ಲಗೆ ಬೀಸಲಾಗಿ ತಮ್ಮ ಉದ್ದೇಶವು ಸಾರ್ಥಕವಾಯಿತೆಂದು ಭಾವಿಸಿ ಲಂಗರುಗಳನ್ನು ತೆಗೆದು ಕ್ರೇತ ದ್ವೀಪವನ್ನು ಅನುಸರಿಸಿ ತೀರದ ಮಗ್ಗುಲಲ್ಲೇ ಹೋಗುತ್ತಿದ್ದರು.


ಈ ಕಾರಣದಿಂದ ಕರ್ತನಲ್ಲಿ ನನ್ನ ಪ್ರಿಯ ಮತ್ತು ನಂಬಿಗಸ್ತ ಮಗನಾದ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೇನೆ. ನಾನು ಪ್ರತಿಯೊಂದು ಸಭೆಗಳಲ್ಲಿಯೂ, ಎಲ್ಲೆಲ್ಲಿಯೂ ಬೋಧಿಸುವ ಹಾಗೆ ಕ್ರಿಸ್ತನಲ್ಲಿರುವ ನನ್ನ ನಡವಳಿಕೆಗಳನ್ನು ಅವನು ನಿಮ್ಮ ನೆನಪಿಗೆ ತರುವನು.


“ಕ್ರೇತ್ ದ್ವೀಪದವರು ಯಾವಾಗಲೂ ಸುಳ್ಳುಗಾರರೂ, ದುಷ್ಟಮೃಗಗಳೂ, ಸೋಮಾರಿಗಳಾದ ಹೊಟ್ಟೆಬಾಕರೂ” ಆಗಿದ್ದಾರೆಂದು ಅವರ ಸ್ವಂತ ಪ್ರವಾದಿಗಳಲ್ಲಿಯೇ ಒಬ್ಬ ಪ್ರವಾದಿಯು ಹೇಳಿದ್ದಾನೆ.


ಆಗ ಅವರು ಬೇರೆ ಕಲ್ಲುಗಳನ್ನು ತರಿಸಿ ಮೊದಲಿದ್ದ ಕಲ್ಲುಗಳ ಸ್ಥಳದಲ್ಲಿ ಹಾಕಿಸಿ, ಹೊಸ ಮಣ್ಣನ್ನು ತರಿಸಿ ಆ ಗೋಡೆಗಳಿಗೆ ಗಿಲಾವು ಮಾಡಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು