Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 2:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನೀನಾದರೋ ಸ್ವಸ್ಥ ಬೋಧನೆಗೆ ಅನುಗುಣವಾಗಿ ಉಪದೇಶಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನೀನಾದರೋ ಸದ್ಬೋಧನೆಗೆ ತಕ್ಕಂತೆ ಉಪದೇಶಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನೀನಾದರೋ ಸ್ವಸ್ಥಬೋಧನೆಗೆ ಅನುಗುಣವಾಗಿ ಉಪದೇಶಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸತ್ಯಬೋಧನೆಯನ್ನು ಅನುಸರಿಸಲು ಜನರು ಮಾಡಬೇಕಾದ ಕಾರ್ಯಗಳನ್ನು ಅವರಿಗೆ ನೀನು ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನೀನಾದರೋ ಸ್ವಸ್ಥಬೋಧನೆಗೆ ಅನುಗುಣವಾಗಿ ಉಪದೇಶಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಖರೆ ತಿಯಾ ಖರ್‍ಯಾ ಪಾನಾಚ್ಯಾ ಶಿಕಾಪಾಚ್ಯಾ ಸರ್ಕೆ ಹೆ ಶಿಕ್ವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 2:1
7 ತಿಳಿವುಗಳ ಹೋಲಿಕೆ  

ನೀನು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ, ನನ್ನಿಂದ ಕೇಳಿದ ಸ್ವಸ್ಥಬೋಧನಾ ವಾಕ್ಯಗಳನ್ನು ಮಾದರಿಯಾಗಿಟ್ಟುಕೊಂಡು ಅನುಸರಿಸು.


ಯಾವನಾದರೂ ಭಿನ್ನವಾದ ಉಪದೇಶವನ್ನು ಮಾಡಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ, ಭಕ್ತಾನುಸಾರವಾದ ಉಪದೇಶಗಳಿಗೂ ಸಮ್ಮತಿಸದೆ ಹೋದರೆ,


ತಾನು ಸ್ವಸ್ಥಬೋಧನೆಯಿಂದ ಜನರನ್ನು ಎಚ್ಚರಿಸುವುದಕ್ಕೂ, ಸುವಾರ್ತಾ ವಿರೋಧಿಗಳ ಬಾಯಿ ಕಟ್ಟುವುದಕ್ಕೂ ಶಕ್ತನಾಗಿರುವಂತೆ, ಕ್ರಿಸ್ತನ ಉಪದೇಶಕ್ಕೆ ಅನುಸಾರವಾಗಿ ನಂಬತಕ್ಕ ವಚನಗಳನ್ನು, ದೃಢವಾಗಿ ಅವಲಂಬಿಸಿದವನಾಗಿರಬೇಕು.


ಇದು ನಂಬತಕ್ಕ ಮಾತಾಗಿದೆ; ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವುದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಎಲ್ಲಾ ಮಾತುಗಳನ್ನು ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಅದು ಉತ್ತಮವೂ, ಮನುಷ್ಯರಿಗೆ ಪ್ರಯೋಜನಕಾರಿಯೂ ಆಗಿವೆ.


ಜಾರರು, ಸಲಿಂಗಕಾಮಿಗಳು, ನರಚೋರರು, ಸುಳ್ಳುಗಾರರು, ಅಸತ್ಯವಾದಿಗಳು, ಸ್ವಸ್ಥಬೋಧನೆಗೆ ವಿರುದ್ಧವಾಗಿರುವಂಥವುಗಳನ್ನು ಮಾಡುವವರು, ಈ ಮೊದಲಾದ ಅನೀತಿವಂತರಿಗಾಗಿ ನೇಮಕವಾಗಿದೆ ಎಂದು ನಮಗೆ ತಿಳಿದಿದೆ.


ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು. ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು