Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 2:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದು ಭಕ್ತಿಹೀನತೆಯನ್ನೂ, ಲೋಕದ ಆಸೆಗಳನ್ನೂ ತ್ಯಜಿಸಿ ಭಾಗ್ಯಕರವಾದ ನಿರೀಕ್ಷೆಯನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12-13 ನಾವು ಭಕ್ತಿಹೀನ ನಡತೆಯನ್ನೂ ಪ್ರಾಪಂಚಿಕ ವ್ಯಾಮೋಹಗಳನ್ನೂ ವಿಸರ್ಜಿಸಿ, ಈ ಲೋಕದಲ್ಲಿ ವಿವೇಕಿಗಳಾಗಿಯೂ ಪ್ರಾಮಾಣಿಕರಾಗಿಯೂ ಭಕ್ತರಾಗಿಯೂ ಜೀವಿಸಬೇಕೆಂದು ಅದು ನಮಗೆ ಬೋಧಿಸುತ್ತದೆ. ಅಲ್ಲದೆ, ಮಹೋನ್ನತ ದೇವರು ಮತ್ತು ನಮ್ಮ ಉದ್ಧಾರಕ ಯೇಸುಕ್ರಿಸ್ತರು ಮಹಿಮಾರೂಪದಲ್ಲಿ ನಮಗೆ ಪ್ರತ್ಯಕ್ಷವಾಗುವ ಸೌಭಾಗ್ಯವನ್ನು ನಾವು ಎದುರುನೋಡಬೇಕೆಂದು ಅದು ಕಲಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12-13 ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ವಿಸರ್ಜಿಸಿ ಭಾಗ್ಯಕರವಾದ ನಿರೀಕ್ಷೆಯನ್ನು ಅಂದರೆ ಮಹಾದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕಬೇಕೆಂದು ಅದು ನಮಗೆ ಬೋಧಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಾವು ದೇವರಿಗೆ ವಿರುದ್ಧವಾಗಿ ಜೀವಿಸದಂತೆಯೂ ಲೋಕದ ಜನರು ಮಾಡಲಪೇಕ್ಷಿಸುವ ಕೆಟ್ಟಕಾರ್ಯಗಳನ್ನು ಮಾಡದಂತೆಯೂ ಅದು ತಡೆಯುತ್ತದೆ. ನಾವು ದೇವರ ಸೇವೆಯನ್ನು ಮಾಡುತ್ತಿದ್ದೇವೆ ಎಂಬುದನ್ನು ತೋರಿಸುವುದಕ್ಕಾಗಿ ನೀತಿವಂತರಾಗಿಯೂ ಜ್ಞಾನಿಗಳಾಗಿಯೂ ಲೋಕದಲ್ಲಿ ಈಗ ಬಾಳಬೇಕೆಂದು ಅದು ಬೋಧಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು, ಈಗಿನ ಲೋಕದಲ್ಲಿ ಸ್ವಶಿಸ್ತನ್ನು ಹೊಂದಿದವವರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕಬೇಕೆಂತಲೂ ದೇವರ ಕೃಪೆಯು ನಮಗೆ ಬೋಧಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಅಮಿ ದೆವಸ್ಪಾನ್ಸಲ್ಯಾ ಜಗಾಚ್ಯಾ ಆಶಾಕ್ನಿ ಸೊಡುನ್ ದಿವ್ಚೆ ಅನಿ ಖರೆ ಪಾನಾಚ್ಯಾ ದೆವಸ್ಪಾನಾನ್ ಭರುನ್ ಹೊತ್ತೊ ಅನಿ ಅಪ್ನಾಕುಚ್ ಸಂಬಾಳುನ್ ಘೆವ್ನ್ ಹೊತ್ತ್ಯಾ ಜಗಾತ್ ಜಿವನ್ ಕರ್ತಲ್ಯಾ ಸರ್ಕೆ ಹೊವ್ನ್ ರ್‍ಹಾವ್ಚೆ ಮನುನ್ ಹಿ ಕುರ್ಪಾ ಅಮ್ಕಾ ದಾಕ್ವುನ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 2:12
59 ತಿಳಿವುಗಳ ಹೋಲಿಕೆ  

ನನ್ನ ಆತ್ಮವನ್ನು ನಿಮ್ಮಲ್ಲಿ ನೆಲಸಿರುವಂತೆ ಅನುಗ್ರಹಿಸಿ, ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವಿರಿ.


ಅನಂತರ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ “ಯಾವನಾದರೂ ನನ್ನನ್ನು ಹಿಂಬಾಲಿಸುವುದಕ್ಕೆ ಬಯಸಿದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ನಿಮ್ಮ ಶರೀರ ಭಾವದ ಬಲಹೀನತೆಯ ದೆಸೆಯಿಂದ ನಾನು ಲೋಕದ ರೀತಿಯಾಗಿ ಮಾತನಾಡುತ್ತೇನೆ. ದುಷ್ಟತನವನ್ನು ಮಾಡುವುದಕ್ಕಾಗಿ ನಿಮ್ಮ ಅಂಗಗಳನ್ನು ಬಂಡುತನಕ್ಕೂ, ದುಷ್ಟತನಕ್ಕೂ ದಾಸರನ್ನಾಗಿ ಒಪ್ಪಿಸಿ ಕೊಟ್ಟಿದ್ದಂತೆಯೇ ಈಗ ಪರಿಶುದ್ಧರಾಗುವುದಕ್ಕಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಪ್ಪಿಸಿಕೊಡಿರಿ.


ಯೆಹೋವನು ತನ್ನ ಭಕ್ತನನ್ನು ತನಗೋಸ್ಕರ ಪ್ರತ್ಯೇಕಿಸಿಕೊಂಡಿದ್ದಾನೆ ಎಂದು ತಿಳಿದುಕೊಳ್ಳಿರಿ. ನಾನು ಆತನಿಗೆ ಮೊರೆಯಿಡುವಾಗೆಲ್ಲಾ ಆತನು ಕೇಳುತ್ತಾನೆ.


ಕರ್ತನು ಭಕ್ತರನ್ನು ಕಷ್ಟಗಳಿಂದ ರಕ್ಷಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವನಾಗಿದ್ದಾನೆ.


ಆತನಲ್ಲಿ ನೆಲೆಗೊಂಡವನಾಗಿದ್ದೇನೆಂದು ಹೇಳುವವನು ಕ್ರಿಸ್ತನು ನಡೆದಂತೆಯೇ ತಾನೂ ನಡೆಯುವುದಕ್ಕೆ ಬದ್ಧನಾಗಿದ್ದಾನೆ.


ಕ್ರಿಸ್ತ ಯೇಸುವಿನಲ್ಲಿ ಸದ್ಭಕ್ತರಾಗಿ ಜೀವಿಸುವುದಕ್ಕೆ ಮನಸ್ಸು ಮಾಡುವವರೆಲ್ಲರೂ ಹಿಂಸೆಗೊಳಗಾಗುವರು.


ಇದರಲ್ಲಿ ದೇವರ ಆಜ್ಞೆಗಳನ್ನೂ, ಯೇಸುವಿನ ಬಗ್ಗೆ ನಂಬಿಕೆಯನ್ನೂ ಕೈಕೊಂಡು ನಡೆಯುತ್ತಿರುವ ದೇವಜನರ ತಾಳ್ಮೆಯು ಇಲ್ಲಿ ತೋರಿಬರಬೇಕಾಗಿದೆ.


ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಶುದ್ಧರಾಗಿರುವುದಕ್ಕೆ ಕರೆದನು.


ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.


ಸಹೋದರ ಸ್ನೇಹದ ವಿಷಯದಲ್ಲಿ ನಿಮಗೆ ಬರೆಯುವ ಅವಶ್ಯಕತೆಯಿಲ್ಲ, ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದೀರಿ.


ಪೂರ್ವದಲ್ಲಿ ನೀವು ಇಹಲೋಕದ ಪದ್ಧತಿಗೆ ಅನುಸಾರವಾಗಿಯೂ, ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡೆಸುವ ಆತ್ಮನಿಗನುಸಾರವಾಗಿ ಜೀವನ ನಡಿಸಿದ್ದೀರಿ.


ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.


ಹೀಗಿರುವುದರಿಂದ ಸಾವಿಗೆ ಒಳಗಾಗುವ ಈ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ದೇಹದ ದುರಾಶೆಗಳಿಗೆ ಒಳಪಡಬೇಡಿರಿ.


ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.


ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದ ಯಾರೂ ನಿಮಗೆ ಬೋಧನೆ ಮಾಡುವುದು ಅಗತ್ಯವಿಲ್ಲ. ಆತನು ನಿಮಗೆ ಮಾಡಿರುವ ಅಭಿಷೇಕವೇ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿ ಬೋಧನೆ ಮಾಡುವಂಥದ್ದಾಗಿದೆ ಅದು ಸುಳ್ಳಲ್ಲ ಸತ್ಯವಾಗಿದೆ. ಅದು ನಿಮಗೆ ಬೋಧನೆ ಮಾಡಿದ ಪ್ರಕಾರವೇ ಆತನಲ್ಲಿ ನೆಲೆಗೊಂಡಿರುವಿರಿ.


ಇವೆಲ್ಲವುಗಳು ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿರಬೇಕು? ಪರಿಶುದ್ಧವಾಗಿಯೂ ಭಕ್ತಿಯುಳ್ಳವರಾಗಿಯೂ ಜೀವಿಸಬೇಕು.


ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದರನಿಗೂ “ಕರ್ತನನ್ನು ತಿಳಿದುಕೊಳ್ಳಿರಿ” ಎಂದು ಬೋಧಿಸಬೇಕಾಗಿರುವುದಿಲ್ಲ. ಏಕೆಂದರೆ ಹೀನರಾದವರು ಮೊದಲುಗೊಂಡು ಉನ್ನತರಾದವರ ತನಕ ಎಲ್ಲರೂ ನನ್ನನ್ನು ತಿಳಿದುಕೊಂಡಿರುವರು.


ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ, ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕು.


ನಿನ್ನ ಯೌವನವನ್ನು ಅಸಡ್ಡೆಮಾಡುವುದಕ್ಕೆ ಯಾರಿಗೂ ಆಸ್ಪದಮಾಡಿಕೊಡದೆ, ನಂಬುವವರಿಗೆ ನಡೆ, ನುಡಿ, ಪ್ರೀತಿ, ನಂಬಿಕೆ, ಶುದ್ಧತ್ವ ಇವುಗಳ ವಿಷಯದಲ್ಲಿ ನೀನೇ ಮಾದರಿಯಾಗಿರು.


ಈಗಲಾದರೋ ದೇವರು ನಿಮ್ಮನ್ನು ಯೇಸುಕ್ರಿಸ್ತನ ಶಾರೀರಿಕ ಮರಣದ ಮೂಲಕವಾಗಿ ಸಂಧಾನಪಡಿಸಿಕೊಂಡಿದ್ದಾನೆ. ದೇವರು ತನ್ನ ಸನ್ನಿಧಿಯಲ್ಲಿ ನಿಮ್ಮನ್ನು ಪರಿಶುದ್ಧರನ್ನಾಗಿಯೂ, ನಿರ್ದೋಷಿಗಳನ್ನಾಗಿಯೂ, ನಿರಪರಾಧಿಗಳನ್ನಾಗಿಯೂ ನಿಲ್ಲಿಸಬೇಕೆಂದು ಹೀಗೆ ಮಾಡಿದ್ದಾನೆ.


ಕ್ರಿಸ್ತ ಯೇಸುವಿನಲ್ಲಿರುವವರು ತಮ್ಮ ಶರೀರಭಾವವನ್ನು ಅದರ ವಿಷಯಾಭಿಲಾಷೆ, ಸ್ವೇಚ್ಛಾಭಿಲಾಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದವರಾಗಿದ್ದಾರೆ.


ಆತನು ನಮ್ಮನ್ನು ಈಗಿನ ದುಷ್ಟ ಯುಗದಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ, ನಮ್ಮ ಪಾಪಗಳ ದೆಸೆಯಿಂದ ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು.


ಪ್ರಿಯರೇ, ಈ ವಾಗ್ದಾನಗಳು ನಮಗಿರುವುದರಿಂದ, ನಾವು ದೇಹಾತ್ಮಗಳ ಕಲ್ಮಷವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತೆಯ ಸಂಪೂರ್ಣತೆಗೆ ಪ್ರಯತ್ನಿಸೋಣ.


ನಾವು ಕೇವಲ ಮನುಷ್ಯಜ್ಞಾನವನ್ನು ಬಳಸದೇ ದೇವರ ಕೃಪೆಯನ್ನು ಆಶ್ರಯಿಸಿ ಪರಿಶುದ್ಧರಾಗಿಯೂ, ಪ್ರಾಮಾಣಿಕರಾಗಿಯೂ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡೆದುಕೊಂಡೆವೆಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಇದೇ ನಮಗಿರುವ ಹೆಮ್ಮೆ.


ನೀವು ಶರೀರಭಾವವನ್ನು ಅನುಸರಿಸಿ ಬದುಕಿದರೆ ಸಾಯುವುದು ನಿಶ್ಚಯ; ನೀವು ಪವಿತ್ರಾತ್ಮನಿಂದ ದೇಹದ ದುರಭ್ಯಾಸಗಳನ್ನು ನಾಶ ಮಾಡುವುದಾದರೆ ಜೀವಿಸುವಿರಿ.


ಪೌಲನು ನೀತಿ, ಶಮೆದಮೆ, ಹಾಗೂ ಮುಂದಣ ನ್ಯಾಯವಿಚಾರಣೆ ಇವುಗಳ ವಿಷಯವಾಗಿ ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ಭಯಗ್ರಸ್ತನಾಗಿ ಅವನಿಗೆ; “ಸದ್ಯಕ್ಕೆ ಹೋಗು; ಸಮಯ ದೊರಕಿದಾಗ ನಿನ್ನನ್ನು ಕರೆಯಿಸುವೆನು” ಎಂದು ಹೇಳಿದನು.


ಇದರ ದೆಸೆಯಿಂದ ದೇವರ ಮುಂದೆಯೂ, ಮನುಷ್ಯರ ಮುಂದೆಯೂ ನಿರ್ದೋಷವಾದ ಮನಸ್ಸಾಕ್ಷಿಯುಳ್ಳವನಾಗಿರಬೇಕೆಂದು ನಾನು ಯಾವಾಗಲೂ ಪ್ರಯತ್ನಿಸುತ್ತೇನೆ.


ಇಡೀ ಲೋಕವು ಕೆಡುಕನ ವಶದಲ್ಲಿ ಇದ್ದರು ಸಹ ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂಬುದು ನಮಗೆ ತಿಳಿದಿದೆ.


ನಾವು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ದೋಷವಿಲ್ಲದವರೂ ಆಗಿರಬೇಕೆಂದು, ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು ಕ್ರಿಸ್ತನಲ್ಲಿ ನಮ್ಮನ್ನು ಆರಿಸಿಕೊಂಡನು.


ಇನ್ನು ಮೇಲೆ ನಾನು ನಿಮ್ಮ ಜೊತೆ ಹೆಚ್ಚು ವಿಷಯಗಳನ್ನು ಮಾತನಾಡುವುದಿಲ್ಲ. ಏಕೆಂದರೆ ಇಹಲೋಕಾಧಿಪತಿಯು ಬರಲಿದ್ದಾನೆ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ.


ಮತ್ತು ಸಮುದ್ರದ ಆಚೆಕಡೆಯಲ್ಲಿ ಆತನನ್ನು ಕಂಡು “ಗುರುವೇ, ಯಾವಾಗ ಇಲ್ಲಿಗೆ ಬಂದಿ?” ಎಂದು ಕೇಳಿದರು.


ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ, ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡೆದುಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.


ಅವರು ತನ್ನ ವಿಧಿಗಳನ್ನು ಕೈಕೊಂಡು, ತನ್ನ ಧರ್ಮಶಾಸ್ತ್ರವನ್ನು ಅನುಸರಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು. ಯೆಹೋವನಿಗೆ ಸ್ತೋತ್ರ!


“ಭಕ್ತಿಗೆ ವಿರುದ್ಧವಾದ ತಮ್ಮ ಆಸೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಬರುವರೆಂದು” ಅವರು ನಿಮಗೆ ಹೇಳಿದರು.


ಯಾಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ, ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು.


ಯಾವನಾದರೂ ಮನುಷ್ಯಕುಮಾರನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವುದು, ಪವಿತ್ರಾತ್ಮನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಈ ಲೋಕದಲ್ಲಾಗಲಿ ಮುಂಬರುವ ಲೋಕದಲ್ಲಾಗಲಿ ಕ್ಷಮಿಸಲ್ಪಡುವುದಿಲ್ಲ.


ಐಶ್ವರ್ಯವಂತರಾಗಬೇಕೆಂದು ಮನಸ್ಸುಮಾಡುವವರು ದುಷ್ಟ್ರೇರಣೆಯೆಂಬ ಬಲೆಯಲ್ಲಿ ಸಿಕ್ಕಿಕೊಂಡು, ಬುದ್ಧಿಗೆ ವಿರುದ್ಧವಾಗಿಯೂ ಹಾನಿಕರವಾಗಿಯೂ ಇರುವ ಅನೇಕ ಆಸೆಗಳಲ್ಲಿ ಬೀಳುತ್ತಾರೆ. ಇಂಥ ಆಸೆಗಳು ಮನುಷ್ಯರನ್ನು ಸಂಹಾರ ವಿನಾಶಗಳಲ್ಲಿ ಸಿಕ್ಕಿಸುತ್ತವೆ.


ಸಂಕಟದಲ್ಲಿ ಬಿದ್ದಿರುವ ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಪರಾಂಬರಿಸಿ ತನಗೆ ಇಹಲೋಕದ ದೋಷವು ಹತ್ತದಂತೆ ತನ್ನನ್ನು ತಾನು ಕಾಪಾಡಿಕೊಳ್ಳುವುದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ, ನಿರ್ಮಲವೂ ಆಗಿರುವ ಭಕ್ತಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು