Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 3:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾವು ಮಾಡಿದ ಪುಣ್ಯಕಾರ್ಯಗಳ ನಿಮಿತ್ತದಿಂದಲ್ಲ ಪುನರ್ಜನ್ಮವನ್ನು ಸೂಚಿಸುವ ದೀಕ್ಷಾಸ್ನಾನದ ಮೂಲಕವಾಗಿಯೂ, ಪವಿತ್ರಾತ್ಮನ ನವೀಕರಣದ ಮೂಲಕವಾಗಿಯೂ ಆತನು ತನ್ನ ಕರುಣೆಯಿಂದಲೇ ನಮ್ಮನ್ನು ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ಅವರೇ ನಮ್ಮನ್ನು ಉದ್ಧರಿಸಿದರು. ನಮ್ಮ ಸ್ವಂತ ಪುಣ್ಯಕಾರ್ಯಗಳು ನಮಗೆ ಈ ಉದ್ಧಾರವನ್ನು ತರಲಿಲ್ಲ. ಪುನರ್ಜನ್ಮವನ್ನು ಸೂಚಿಸುವ ಸ್ನಾನ ಹಾಗೂ ನೂತನ ಜೀವವನ್ನೀಯುವ ಪವಿತ್ರಾತ್ಮ ಈ ಮೂಲಕ ಅವರೇ ನಮ್ಮನ್ನು ಕರುಣೆಯಿಂದ ಉದ್ಧಾರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾವು ಮಾಡಿದ ಪುಣ್ಯಕ್ರಿಯೆಗಳ ನಿವಿುತ್ತದಿಂದಲ್ಲ ಆತನ ಕರುಣೆಯಲ್ಲಿಯೇ ಪುನರ್ಜನ್ಮವನ್ನು ಸೂಚಿಸುವ ಸ್ನಾನದ ಮೂಲಕವಾಗಿಯೂ ಪವಿತ್ರಾತ್ಮನು ನಮ್ಮಲ್ಲಿ ನೂತನಸ್ವಭಾವವನ್ನು ಉಂಟುಮಾಡುವದರ ಮೂಲಕವಾಗಿಯೂ ಆತನು ನಮ್ಮನ್ನು ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆತನು ನಮ್ಮನ್ನು ರಕ್ಷಿಸಿದ್ದು ತನ್ನ ಕರುಣೆಯಿಂದಲೇ ಹೊರತು ನೀತಿವಂತರಾಗಲು ನಾವು ಮಾಡಿದ ಒಳ್ಳೆಯ ಕಾರ್ಯಗಳಿಂದಲ್ಲ. ಆತನು ನಮ್ಮನ್ನು ಸ್ನಾನದ ಮೂಲಕವಾಗಿಯೂ ಪವಿತ್ರಾತ್ಮನ ಮೂಲಕವಾಗಿಯೂ ಹೊಸಬರನ್ನಾಗಿ ಮಾಡಿ ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರು ನಮ್ಮನ್ನು ರಕ್ಷಿಸಿದರು. ಹೇಗೆಂದರೆ, ನಾವು ಮಾಡಿದ ಪುಣ್ಯ ಕ್ರಿಯೆಗಳಿಂದಲ್ಲ, ಅವರ ಕರುಣೆಗೆ ಅನುಸಾರವಾಗಿ ಆತ್ಮಿಕವಾಗಿ ಹುಟ್ಟುವಂತೆ ಮಾಡಿ, ನಮ್ಮನ್ನು ತೊಳೆದೂ ಪವಿತ್ರಾತ್ಮ ದೇವರು ನೂತನ ಜೀವನವನ್ನು ಕೊಡುವುದರ ಮೂಲಕವೇ ಅವರು ನಮ್ಮನ್ನು ರಕ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತೆನಿ ಅಮ್ಕಾ ಹುರ್ವುಲ್ಯಾನ್ ಹೆ ಅಮಿ ಅಮ್ಚ್ಯಾ ಬರ್‍ಯಾಪಾನಾಚ್ಯಾ ವೈನಾ ನ್ಹಯ್, ಅಪ್ನಾಚ್ಯಾ ಸ್ವತಾಚ್ಯಾ ದಯೆನ್ ತೆನಿ ಅಮ್ಕಾ ಹುರ್ವುಲ್ಯಾನ್. ಅಮ್ಕಾ ನ್ಹವೊ ಜಲಮ್ ಅನಿ ನ್ಹವೊ ಜಿವ್ ದಿತಲ್ಯಾ ಪವಿತ್ರ್ ಆತ್ಮ್ಯಾನಿ ತೆನಿ ಧುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 3:5
46 ತಿಳಿವುಗಳ ಹೋಲಿಕೆ  

ಆತನು ನಮ್ಮಲ್ಲಿರುವ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವುದಕ್ಕೆ ಕರೆದನು. ಆತನು ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ,


ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.


ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ದೇಹದ ಮೇಲಿನ ಕೊಳೆಯನ್ನು ಹೊಗಲಾಡಿಸುವಂಥದ್ದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದಾಗಿದೆ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,


ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.


ಆದರೆ ಕರುಣಾನಿಧಿಯಾಗಿರುವ ದೇವರು ನಮ್ಮನ್ನು ಪ್ರೀತಿಸಿದ ಮಹಾ ಪ್ರೀತಿಯ ನಿಮಿತ್ತ,


ಆತನು ಅದನ್ನು ಪಾವನಗೊಳಿಸುವುದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು.


ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು; ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನಪಡಿಸು.


ಕೃಪೆಯಿಂದ ಆರಿಸಿಕೊಂಡನು ಅಂದ ಮೇಲೆ ಒಳ್ಳೆಯ ಕಾರ್ಯದಿಂದಲ್ಲ. ಹಾಗಲ್ಲದ ಪಕ್ಷಕ್ಕೆ ಕೃಪೆಯನ್ನು ಇನ್ನು ಕೃಪೆಯನ್ನುವುದಕ್ಕಾಗುವುದಿಲ್ಲ.


ಆದುದರಿಂದ ನಾವು ತಕ್ಕ ಸಮಯದಲ್ಲಿ ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಆತನ ಕೃಪಾಸನದ ಮುಂದೆ ಬರೋಣ.


ಈ ನೂತನ ಸ್ವಭಾವವು ಸೃಷ್ಟಿಸಿದಾತನ ಹೋಲಿಕೆಯ ಜ್ಞಾನದ ಮೇರೆಗೆ ಅದು ನೂತನವಾಗುತ್ತಾ ಬರುತ್ತದೆ.


ಕರ್ತನೇ, ನೀನು ಕನಿಕರವೂ, ದಯೆಯೂ ಉಳ್ಳ ದೇವರು; ದೀರ್ಘಶಾಂತನು, ಬಹಳ ಪ್ರೀತಿಯೂ, ನಂಬಿಕೆಯೂ ಉಳ್ಳವನು.


ಯಾವನಾದರೂ ಯೇಸು ಕ್ರಿಸ್ತನ ಮೇಲೆ ನಂಬಿಕೆ ಇಡುವುದರಿಂದಲೇ ಹೊರತು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸುವುದರಿಂದ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲವೆಂಬುದು ನಮಗೆ ತಿಳಿದಿರುವುದರಿಂದ ನಾವು ಸಹ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು. ಏಕೆಂದರೆ ಯಾರೂ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ.


ಯಾಕೆಂದರೆ ಯಾವ ಮನುಷ್ಯನಾದರೂ ನೇಮನಿಷ್ಠೆಗಳನ್ನು ಅನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. ಧರ್ಮಶಾಸ್ತ್ರದಿಂದ ಪಾಪದ ಅರಿವು ಉಂಟಾಗುತ್ತದಷ್ಟೆ.


ಮೊದಲು ನೀವು ಪ್ರಜೆಯಾಗಿರಲಿಲ್ಲ. ಈಗಲಾದರೂ ದೇವರ ಸ್ವಕೀಯಪ್ರಜೆಯಾಗಿದ್ದೀರಿ. ಮೊದಲು ನೀವು ಕರುಣೆ ಹೊಂದಿದವರಾಗಿರಲಿಲ್ಲ. ಈಗಲಾದರೂ ಕರುಣೆ ಹೊಂದಿದವರಾಗಿದ್ದೀರಿ.


ನೀವು ನಿಮ್ಮ ಹೃನ್ಮನಗಳನ್ನು ನವೀಕರಿಸಿ, ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ.


ಧರ್ಮಶಾಸ್ತ್ರ ಸಂಬಂಧವಾದ ಕರ್ಮಗಳಿಲ್ಲದೆ ನಂಬಿಕೆಯಿಂದಲೇ ಮನುಷ್ಯರು ನೀತಿವಂತರೆಂದು ನಿರ್ಣಯಿಸಲ್ಪಡುವರೆಂಬುದಾಗಿ ನಿಶ್ಚಯಮಾಡಿಕೊಂಡಿದ್ದೇವಲ್ಲಾ


ಆ ಮಕ್ಕಳು ಒಬ್ಬ ತಂದೆಯ ಮಕ್ಕಳಾಗಿದ್ದರೂ ಅವರು ಇನ್ನು ಹುಟ್ಟದೆಯೂ, ಒಳ್ಳೆದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾಡುವ ಮೊದಲೇ “ಹಿರಿಯನು ಕಿರಿಯನಿಗೆ ಸೇವೆಮಾಡುವನೆಂಬುದಾಗಿ” ಆಕೆಗೆ ಹೇಳಲ್ಪಟ್ಟಿತು. ಇದರಿಂದ ದೇವರು ತನಗೆ ಮನಸ್ಸಿದ್ದವರನ್ನು ಆರಿಸಿಕೊಳ್ಳುತ್ತಾನೆಂಬ ಸಂಕಲ್ಪವು ಒಳ್ಳೆಯ ಕಾರ್ಯಗಳ ಮೇಲೆ ಆಧಾರಗೊಳ್ಳದೆ ಕರೆಯುವಾತನ ಚಿತ್ತದ ಮೇಲೆಯೇ ಆಧಾರಗೊಂಡಿದೆ.


ಆತನು ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂತೆ ಅಬ್ರಹಾಮನಿಗೂ ಅವನ ವಂಶದವರಿಗೂ ಯಾವಾಗಲೂ ದಯೆ ತೋರಿಸಬೇಕೆಂಬುದನ್ನು ನೆನಪಿಸಿಕೊಂಡು, ತನ್ನ ಸೇವಕನಾದ ಇಸ್ರಾಯೇಲನಿಗೆ ನೆರವಾಗಿದ್ದಾನೆ” ಎಂದಳು.


ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ದಯೆಯು ತಲತಲಾಂತರದ ವರೆಗೂ ಇರುವುದು.


ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ, ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ. ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ. ಕರುಣೆಯೇ ಆತನಿಗೆ ಇಷ್ಟ.


ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ; ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ.


ಇಸ್ರಾಯೇಲೇ, ಯೆಹೋವನನ್ನು ಎದುರುನೋಡುತ್ತಿರು; ಯೆಹೋವನು ಕೃಪಾಸಂಪನ್ನನು; ಪೂರ್ಣವಿಮೋಚನೆಯು ಆತನಿಂದಲೇ ದೊರಕುವುದು.


ಮನುಷ್ಯನು ದೇವರ ಎಣಿಕೆಯಲ್ಲಿ ನೀತಿವಂತನಾಗಿರುವುದು ಹೇಗೆ? ಮಾನವನಾಗಿ ಹುಟ್ಟಿದವನು ಪರಿಶುದ್ಧನಾಗಿರುವುದು ಸಾಧ್ಯವೋ?


ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ, ಪ್ರೀತಿಯೂ, ಮನುಷ್ಯರಿಗೆ ಪ್ರತ್ಯಕ್ಷವಾದಾಗ,


ಹಾಗಾದರೆ ಏನು ಹೇಳೋಣ? ನೀತಿಯನ್ನು ಅನುಸರಿಸದ ಅನ್ಯಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾದ ನೀತಿಯು ದೊರಕಿತು.


ಆದ್ದರಿಂದ ದೇವರ ದಯೆಯು ಮನುಷ್ಯರಿಗೆ ಅಪೇಕ್ಷಿಸುವುದರಿಂದಾಗಲಿ, ಪ್ರಯತ್ನಿಸುವುದರಿಂದಾಗಲಿ ದೊರೆಯದೆ ದೇವರು ಕರುಣಿಸುವುದರಿಂದಲೇ ದೊರೆಯುತ್ತದೆ.


ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಪಾಪಾತ್ಮರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವುದು.


ಆತನು ನಮ್ಮ ಪೂರ್ವಿಕರಿಗೆ ದಯೆಯನ್ನು ತೋರಿಸುವುದರ ಮೂಲಕ ನಮ್ಮ ಮೂಲಪಿತೃವಾದ ಅಬ್ರಹಾಮನಿಗೆ ಪ್ರಮಾಣಮಾಡಿ ಕೊಟ್ಟ ತನ್ನ ಪರಿಶುದ್ಧವಾದ ಒಡಂಬಡಿಕೆಯನ್ನು ನೆನಪಿಸಿಕೊಳ್ಳುವವನಾಗಿದ್ದಾನೆ.


ನಾನು ನಿನ್ನ ಧರ್ಮವನ್ನು ಬಯಲಿಗೆ ತರುವೆನು, ನಿನ್ನ ಕಾರ್ಯಗಳು ನಿನಗೆ ನಿಷ್ಪ್ರಯೋಜನ.


ಅವರಲ್ಲಿ ತಿರುಗಿ ಮಾನಸಾಂತರವನ್ನು ಹುಟ್ಟಿಸುವುದು ಅಸಾಧ್ಯ, ಯಾಕೆಂದರೆ ಅವರು ತಾವಾಗಿಯೇ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗವಾಗಿ ಅವಮಾನಪಡಿಸುವವರೂ ಆಗಿರುತ್ತಾರೆ.


ಕರ್ತನೇ, ನೀನು ಒಳ್ಳೆಯವನೂ, ಕ್ಷಮಿಸುವವನೂ, ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದಿಯಲ್ಲಾ.


ಕರ್ತನೇ, ನೀನು ಪ್ರೀತಿಸ್ವರೂಪನಾಗಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವಂಥವನಲ್ಲವೇ.


ನರನು ಎಷ್ಟರವನು! ಅವನು ಪರಿಶುದ್ಧನಾಗಿರುವುದು ಸಾಧ್ಯವೋ? ಮಾನವನಾಗಿ ಹುಟ್ಟಿದವನು ನೀತಿವಂತನಾಗಿರಬಹುದೇ?


ನಾನು ನೀತಿವಂತನಾಗಿದ್ದರೂ ನನ್ನ ಬಾಯೇ ನನ್ನನ್ನು ಅಪರಾಧಿಯೆಂದು ತೋರ್ಪಡಿಸುವುದು. ನಾನು ನಿರ್ದೋಷಿಯಾಗಿದ್ದರೂ ಆತನು ನನ್ನನ್ನು ದುರ್ಮಾರ್ಗಿಯೆಂದು ನಿರೂಪಿಸುವನು.


ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ನಿಮ್ಮ ಸದಾಚಾರವಾಗಲಿ, ನಿಮ್ಮ ಒಳ್ಳೆಯ ಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ.


ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ನಾನಂತೂ ಮಾನಸಾಂತರಕ್ಕಾಗಿ ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನ್ನ ನಂತರ ಬರುವವನು ನನಗಿಂತ ಶಕ್ತನು; ಆತನ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ದೀಕ್ಷಾಸ್ನಾನಮಾಡಿಸುವನು.


ಇದರಿಂದಾಗಿ ಸ್ವಜನರಲ್ಲಿ ಅಸೂಯೆಯನ್ನು ಕೆರಳಿಸಿ ಅವರಲ್ಲಿ ಕೆಲವರನ್ನು ರಕ್ಷಣೆಯ ಮಾರ್ಗಕ್ಕೆ ತಂದೇನು.


ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, ತಿಳಿನೀರಿನಿಂದ ತೊಳೆದ ದೇಹದಿಂದಲೂ, ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು