Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 3:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದರೆ ಬುದ್ಧಿಯಿಲ್ಲದ ತರ್ಕಗಳಿಂದಲೂ, ವಂಶಾವಳಿಗಳಿಂದಲೂ, ಜಗಳಗಳಿಂದಲೂ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ವಾಗ್ವಾದಗಳಿಂದಲೂ ದೂರವಾಗಿರು; ಅವು ನಿಷ್ಪ್ರಯೋಜಕವೂ ವ್ಯರ್ಥವೂ ಆಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಹುರುಳಿಲ್ಲದ ತರ್ಕಗಳಿಂದಲೂ ಉದ್ದುದ್ದ ವಂಶಾವಳಿಗಳಿಂದಲೂ ಕಲಹ ಕಚ್ಚಾಟಗಳಿಂದಲೂ ಧರ್ಮಶಾಸ್ತ್ರವನ್ನು ಕುರಿತಾದ ವಾಗ್ವಾದಗಳಿಂದಲೂ ನೀನು ದೂರವಿರು. ಅವು ನಿಷ್ಪ್ರಯೋಜಕ ಹಾಗೂ ವ್ಯರ್ಥವಾದುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆದರೆ ಬುದ್ಧಿಯಿಲ್ಲದ ವಿತರ್ಕಗಳಿಗೂ ವಂಶಾವಳಿಗಳಿಗೂ ಜಗಳಗಳಿಗೂ ಧರ್ಮಶಾಸ್ತ್ರದ ವಿಷಯವಾದ ವಾಗ್ವಾದಗಳಿಗೂ ದೂರವಾಗಿರು; ಅವು ನಿಷ್ಪ್ರಯೋಜನವೂ ವ್ಯರ್ಥವೂ ಆಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಬುದ್ಧಿಯಿಲ್ಲದೆ ಕುತರ್ಕ ಮಾಡುವ ಜನರಿಂದ, ನಿರರ್ಥಕವಾದ ವಂಶಾವಳಿಗಳ ಚರಿತ್ರೆಯ ಬಗ್ಗೆ ಮಾತನಾಡುವ ಜನರಿಂದ, ಮೋಶೆಯು ಬರೆದಿರುವ ಧರ್ಮಶಾಸ್ತ್ರದಲ್ಲಿರುವ ನಿಯಮಗಳ ಬಗ್ಗೆ ತೊಂದರೆಯನ್ನು ಉಂಟುಮಾಡುವ ಮತ್ತು ವಾಗ್ವಾದ ಮಾಡುವ ಜನರಿಂದ ದೂರವಾಗಿರು. ಅವುಗಳಿಗೆ ಯಾವ ಬೆಲೆಯೂ ಇಲ್ಲ, ಅವುಗಳಿಂದ ಜನರಿಗೆ ಯಾವ ಪ್ರಯೋಜನವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ಬುದ್ಧಿಯಿಲ್ಲದ ವಿತರ್ಕಗಳಿಗೂ ವಂಶಾವಳಿಗಳಿಗೂ ಜಗಳಗಳಿಗೂ ನಿಯಮದ ವಿಷಯವಾಗಿರುವ ವಾಗ್ವಾದಗಳಿಗೂ ದೂರವಾಗಿರು. ಏಕೆಂದರೆ ಅವು ನಿಷ್ಪ್ರಯೋಜನವಾದವುಗಳೂ ವ್ಯರ್ಥವಾದವುಗಳೂ ಆಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಖರೆ ಘರಾನಾಂಚ್ಯಾ ಸಾಟ್ನಿ ಹೊತ್ತೊ ವಾದ್ ಮೊಯ್ಜೆಚ್ಯಾ ಕರಾರಾಂಚ್ಯಾ ವಿಶಯಾಚೊ ಝಗ್ಡೊ, ವಾದ್ ವಿವಾದ್ ಅನಿ ಪಿಶಾಪಾನಾಚ್ಯಾ ವಾದಾತ್ನಾ ಧುರ್ ರ್‍ಹಾ, ಕಶ್ಯಾಕ್ ಮಟ್ಲ್ಯಾರ್ ತೆಜಾ ವೈನಾ ಕಾಯ್ಬಿ ಫಾಯ್ದೊ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 3:9
10 ತಿಳಿವುಗಳ ಹೋಲಿಕೆ  

ಈ ಸಂಗತಿಗಳನ್ನು ಸಭೆಯವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವುದಲ್ಲದೇ, ಯಾವ ಪ್ರಯೋಜನಕ್ಕೂ ಬಾರದ ತರ್ಕ ವಾಗ್ವಾದಗಳನ್ನು ಮಾಡಬಾರದೆಂದು, ಅವರಿಗೆ ದೇವರ ಸನ್ನಿಧಿಯಲ್ಲಿ ಖಂಡಿತವಾಗಿ ಹೇಳು.


ಮೂಢರ ಬುದ್ಧಿಹೀನರ ವಿಚಾರಗಳು ಜಗಳಗಳಿಗೆ ಕಾರಣವಾಗುತ್ತವೆಯೆಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ.


ಅಜ್ಜಿ ಕಥೆಗಳನ್ನೂ ಪ್ರಾಪಂಚಿಕವಾದ ಆ ಕಥೆಗಳನ್ನೂ ತಳ್ಳಿಬಿಟ್ಟು, ನೀನು ದೇವಭಕ್ತಿಯ ವಿಷಯದಲ್ಲಿ ಸಾಧನೆಮಾಡಿಕೋ.


ಪ್ರಾಪಂಚಿಕವಾದ ವ್ಯರ್ಥ ಹರಟೆ ಮಾತುಗಳಿಂದ ದೂರವಾಗಿರು, ಅವುಗಳಿಗೆ ಮನಸ್ಸುಕೊಡುವವರು ಹೆಚ್ಚೆಚ್ಚಾಗಿ ಭಕ್ತಿಹೀನರಾಗುವರು.


ನಂಬಿಕೆಯಲ್ಲಿ ಸ್ವಸ್ಥಚಿತ್ತರಾಗಿರುವಂತೆ ಅವರನ್ನು ಕಠಿಣವಾಗಿ ಖಂಡಿಸಿ ತಿಳಿಸು.


ಪ್ರಯೋಜನವಿಲ್ಲದ ನುಡಿಯಿಂದಲೂ, ಫಲವಿಲ್ಲದ ವಾಕ್ಯಗಳಿಂದಲೂ ತರ್ಕಿಸುವುದು ಯುಕ್ತವೋ?


ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥಗಳ ವಿಷಯವನ್ನು ಕುರಿತಾದರೋ. “ನಮ್ಮೆಲ್ಲರಿಗೆ ಜ್ಞಾನವುಂಟೆಂದು” ನಾವು ಬಲ್ಲೆವು. ತಿಳಿವಳಿಕೆಯು ಉಬ್ಬಿಸುತ್ತದೆ, ಆದರೆ ಪ್ರೀತಿಯು ಭಕ್ತಿಯನ್ನು ಬೆಳೆಸುತ್ತದೆ.


ನನಗೆ ಪ್ರವಾದನ ವರವಿದ್ದರೂ, ಎಲ್ಲಾ ರಹಸ್ಯಗಳೂ, ಸಕಲ ವಿಧವಾದ ವಿದ್ಯೆಗಳನ್ನು ತಿಳಿದ್ದರೂ, ಬೆಟ್ಟಗಳನ್ನೂ ತೆಗೆದಿಡುವುಷ್ಟು ನಂಬಿಕೆಯಿದ್ದರೂ, ಪ್ರೀತಿಯಿಲ್ಲದವನಾಗಿದ್ದರೆ ನಾನು ಏನೂ ಅಲ್ಲದವನಾಗಿದ್ದೇನೆ.


ನಿಮ್ಮಲ್ಲಿ ಜಗಳಗಳೂ, ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯಗಳಲ್ಲಿ ಹೋರಾಡುವ ದುರಾಶೆಗಳಿಂದ ಬರುತ್ತವಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು