Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 1:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವರು ಹತ್ತು ದಿನಗಳ ನಂತರ ರಾಜನ ಆಹಾರವನ್ನು ಉಣ್ಣುತ್ತಿದ್ದ ಸಕಲ ಯುವಕರಿಗಿಂತ ಸುಂದರರಾಗಿಯೂ, ಪುಷ್ಟರಾಗಿಯೂ ಕಾಣಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಹತ್ತು ದಿನಗಳಾದ ಮೇಲೆ ರಾಜಭೋಜನ ಉಣ್ಣುತ್ತಿದ್ದ ಎಲ್ಲ ಯುವಕರಿಗಿಂತ ಇವರು ಸುಂದರವಾಗಿಯೂ ಪುಷ್ಟರಾಗಿಯೂ ಕಾಣಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವರು ಹತ್ತು ದಿನಗಳ ಮೇಲೆ ರಾಜನ ಆಹಾರವನ್ನು ಉಣ್ಣುತ್ತಿದ್ದ ಸಕಲ ಯುವಕರಿಗಿಂತ ಸುಂದರರಾಗಿಯೂ ಪುಷ್ಟರಾಗಿಯೂ ಕಾಣಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಹತ್ತು ದಿನಗಳ ತರುವಾಯ ದಾನಿಯೇಲ ಮತ್ತು ಅವನ ಸ್ನೇಹಿತರು ಅರಸನ ಆಹಾರವನ್ನು ಊಟಮಾಡಿದ ಇತರ ಎಲ್ಲ ತರುಣರಿಗಿಂತ ಆರೋಗ್ಯವಂತರಾಗಿ ಕಾಣಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಹತ್ತು ದಿವಸಗಳಾದ ಮೇಲೆ ಅರಸನ ಭೋಜನದ ಪಾಲನ್ನು ತಿನ್ನುವ ಯೌವನಸ್ಥರೆಲ್ಲರಿಗಿಂತ ಇವರು ಆರೋಗ್ಯಕರವಾಗಿಯೂ, ಶರೀರದಲ್ಲಿ ಪುಷ್ಟರಾಗಿಯೂ ಕಾಣಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 1:15
11 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನೊಬ್ಬನನ್ನೇ ಆರಾಧಿಸಬೇಕು. ಆಗ ಆತನು ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವನು. ನಿಮ್ಮಲ್ಲಿರುವ ವ್ಯಾಧಿಯನ್ನು ತೆಗೆದುಹಾಕುವನು.


ಯೇಸು, “‘ಮನುಷ್ಯನು ರೊಟ್ಟಿ ತಿಂದ ಮಾತ್ರದಿಂದ ಬದುಕುವುದಿಲ್ಲ, ಆದರೆ ದೇವರ ಬಾಯಿಂದ ಬರುವ ಪ್ರತಿಯೊಂದು ನುಡಿಯಿಂದಲೂ ಬದುಕುವನು’ ಎಂದು ಬರೆದಿದೆ” ಅಂದನು.


ಯೆಹೋವನ ಆಶೀರ್ವಾದವು ಭಾಗ್ಯದಾಯಕವು, ಅದು ವ್ಯಸನವನ್ನು ಸೇರಿಸದು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ನಾಮವನ್ನು ಘನಪಡಿಸಬೇಕೆಂಬ ಆಜ್ಞೆಯನ್ನು ನೀವು ಆಲಿಸಿ ಮನನಮಾಡಿ ಅರ್ಥಮಾಡಿಕೊಳ್ಳದಿದ್ದರೆ, ನಾನು ನಿಮಗೆ ಶಾಪವನ್ನು ಬರಮಾಡುವೆನು, ನಿಮಗೆ ಆಶೀರ್ವಾದವಾಗಿ ದಯಪಾಲಿಸಿದವುಗಳೆಲ್ಲವನ್ನೂ ಶಪಿಸುವೆನು; ಹೌದು, ಈ ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮನದಟ್ಟು ಮಾಡಿಕೊಳ್ಳದ ಕಾರಣ ನಾನು ನಿಮ್ಮನ್ನು ಶಪಿಸುತ್ತೇನೆ.


ನೀವು ಬಹು ಬೆಳೆಯನ್ನು ನಿರೀಕ್ಷಿಸಿದಿರಿ, ಆದರೆ, ಸ್ವಲ್ಪ ಮಾತ್ರ ಮನೆಗೆ ಸಾಗಿಸಲು ಸಾಧ್ಯವಾಯಿತು; ಯಾಕೆಂದರೆ ನಾನು ಅದನ್ನು ಫಲಿಸಲು ಬಿಡಲಿಲ್ಲ. ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇದಕ್ಕೆಲ್ಲಾ ಕಾರಣವೇನು? ನನ್ನ ಆಲಯವು ಪಾಳು ಬಿದ್ದಿದೆ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಮನೆಯ ಕೆಲಸಕ್ಕೆ ತವಕಪಡುತ್ತಿದ್ದಾನೆ, ಇದೇ ಕಾರಣ.”


ನೀವು ಬಿತ್ತಿದ ಬೀಜವು ಬಹಳ, ತಂದ ಫಲವು ಸ್ವಲ್ಪ; ಅದನ್ನು ಸೇವಿಸುವಿರಿ ತೃಪ್ತಿಯಾಗದು, ಕುಡಿಯುತ್ತೀರಿ ಆನಂದವಾಗದು; ಹೊದ್ದುಕೊಳ್ಳುವಿರಿ ಬೆಚ್ಚಗಾಗದು; ಸಂಬಳಗಾರನು ಸಂಬಳಹಾಕುವ ಚೀಲವು ತೂತಾಗಿದೆ.”


ದುಷ್ಟರ ಮಹಾಸಮೃದ್ಧಿಗಿಂತಲೂ ನೀತಿವಂತನ ಬಡತನವೇ ಲೇಸು.


ಅವನು ಅವರ ಬಿನ್ನಹಕ್ಕೆ ಒಪ್ಪಿ ಹತ್ತು ದಿನ ಪರೀಕ್ಷಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು