ದಾನಿಯೇಲ 1:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಹೀಗಿರಲು ದೇವರು ಆ ನಾಲ್ಕು ಮಂದಿ ಯುವಕರಿಗೆ ಸಕಲ ಶಾಸ್ತ್ರಗಳಲ್ಲಿಯೂ, ವಿದ್ಯೆಗಳಲ್ಲಿಯೂ, ಜ್ಞಾನವಿವೇಕಗಳನ್ನು ದಯಪಾಲಿಸಿದನು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ, ದಿವ್ಯದರ್ಶನಗಳನ್ನೂ ಗ್ರಹಿಸುವುದರಲ್ಲಿ ಪ್ರವೀಣನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಹೀಗಿರಲು ದೇವರು ಆ ನಾಲ್ಕುಮಂದಿ ಯುವಕರಿಗೆ ಸಕಲ ಶಾಸ್ತ್ರಗಳಲ್ಲೂ ವಿದ್ಯೆಗಳಲ್ಲೂ ಜ್ಞಾನ ವಿವೇಕಗಳನ್ನು ದಯಪಾಲಿಸಿದರು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ ದಿವ್ಯದರ್ಶನಗಳನ್ನೂ ಅರ್ಥೈಸುವುದರಲ್ಲಿ ಪ್ರವೀಣನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಹೀಗಿರಲು ದೇವರು ಆ ನಾಲ್ಕು ಮಂದಿ ಯುವಕರಿಗೆ ಸಕಲಶಾಸ್ತ್ರಗಳಲ್ಲಿಯೂ ವಿದ್ಯೆಗಳಲ್ಲಿಯೂ ಜ್ಞಾನ ವಿವೇಕಗಳನ್ನು ದಯಪಾಲಿಸಿದನು; ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ ದಿವ್ಯದರ್ಶನಗಳನ್ನೂ ಗ್ರಹಿಸುವದರಲ್ಲಿ ಪ್ರವೀಣನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ದೇವರು ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರುಗಳಿಗೆ ಅನೇಕ ಶಾಸ್ತ್ರಗಳನ್ನೂ ವಿಜ್ಞಾನವನ್ನೂ ಕಲಿಯುವ ಬುದ್ಧಿಸಾಮರ್ಥ್ಯಗಳನ್ನು ದಯಪಾಲಿಸಿದನು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ ದಿವ್ಯದರ್ಶನಗಳನ್ನೂ ಗ್ರಹಿಸಬಲ್ಲವನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಈ ನಾಲ್ಕು ಯೌವನಸ್ಥರಿಗೆ ದೇವರು ಎಲ್ಲಾ ವಿದ್ಯೆಯಲ್ಲಿಯೂ, ಜ್ಞಾನದಲ್ಲಿಯೂ, ತಿಳುವಳಿಕೆಯನ್ನೂ, ವಿವೇಕವನ್ನೂ ಕೊಟ್ಟರು. ದಾನಿಯೇಲನು ಸಕಲ ದರ್ಶನಗಳಲ್ಲಿಯೂ, ಕನಸುಗಳಲ್ಲಿಯೂ ತಿಳುವಳಿಕೆಯುಳ್ಳವನಾಗಿದ್ದನು. ಅಧ್ಯಾಯವನ್ನು ನೋಡಿ |