Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 1:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ರಾಜನು ಅವರ ಸಂಗಡ ಮಾತನಾಡುವಾಗ ಆ ಸಮಸ್ತ ಯುವಕರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರ ಹಾಗೆ ಯಾರೂ ಕಂಡುಬರಲಿಲ್ಲ; ಆದಕಾರಣ ಅವರು ರಾಜನ ಸನ್ನಿಧಿಸೇವಕರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ರಾಜನು ಅವರ ಸಂಗಡ ಮಾತಾಡುವಾಗ ಅಲ್ಲಿದ್ದ ಯುವಕರಲ್ಲೆಲ್ಲ ದಾನಿಯೇಲನಿಗೆ, ಹನನ್ಯನಿಗೆ, ಮೀಶಾಯೇಲನಿಗೆ, ಅಜರ್ಯನಿಗೆ, ಸಮಾನರು ಯಾರೂ ಕಂಡುಬರಲಿಲ್ಲ. ಆದಕಾರಣ ಆ ನಾಲ್ವರು ಸನ್ನಿಧಿಸೇವಕರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ರಾಜನು ಅವರ ಸಂಗಡ ಮಾತಾಡುವಾಗ ಆ ಸಮಸ್ತ ಯುವಕರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ, ಇವರ ಹಾಗೆ ಯಾರೂ ಕಂಡುಬರಲಿಲ್ಲ; ಆದಕಾರಣ ಅವರು ರಾಜನ ಸನ್ನಿಧಿಸೇವಕರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ರಾಜನು ಅವರ ಸಂಗಡ ಮಾತಾಡಿದನು. ಅರಸನಿಗೆ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರಷ್ಟು ಯೊಗ್ಯರಾದವರು ಆ ಸಮಸ್ತ ಯುವಕರಲ್ಲಿ ಮತ್ತಾರೂ ಕಂಡು ಬರಲಿಲ್ಲ. ಆದ್ದರಿಂದ ಆ ನಾಲ್ಕು ಜನ ಯುವಕರು ರಾಜನ ಸೇವಕರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅರಸನು ಅವರ ಸಂಗಡ ಮಾತನಾಡಿದನು. ಅವರೆಲ್ಲರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ್ ಮತ್ತು ಅಜರ್ಯ ಇವರ ಹಾಗೆ ಒಬ್ಬನೂ ಸಿಗಲಿಲ್ಲ. ಆದ್ದರಿಂದಲೇ ಇವರು ಅರಸನ ಸನ್ನಿಧಿಯ ಸೇವಕರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 1:19
11 ತಿಳಿವುಗಳ ಹೋಲಿಕೆ  

ಇದಲ್ಲದೆ, “ಇನ್ನು ಮುಂದೆ ಅವರು ಸನ್ನಿಧಿಸೇವಕರಾಗಲೆಂದು ತನ್ನ ಭೋಜನ ಪದಾರ್ಥಗಳನ್ನೂ, ರಾಜನು ಕುಡಿಯುವ ದ್ರಾಕ್ಷಾರಸವನ್ನೂ ಅವರಿಗೆ ಪ್ರತಿದಿನ ಬಡಿಸುವ ಏರ್ಪಾಡುಮಾಡಿ ಅವರನ್ನು ಮೂರು ವರ್ಷ ಪೋಷಿಸಬೇಕು” ಎಂದು ಆಜ್ಞಾಪಿಸಿದನು.


ತನ್ನ ಕೆಲಸದಲ್ಲಿ ಚಾತುರ್ಯವುಳ್ಳವನನ್ನು ನೋಡು, ಇಂಥವನು ರಾಜನ ಸನ್ನಿಧಿಯಲ್ಲಿ ನಿಲ್ಲುವನೇ ಹೊರತು, ಸಾಮಾನ್ಯ ಜನರ ಮುಂದೆ ಅಲ್ಲ.


ಯೋಸೇಫನು ಐಗುಪ್ತ ದೇಶದ ಅರಸನಾದ ಫರೋಹನ ಸನ್ನಿಧಿಯಲ್ಲಿ ನಿಂತಾಗ ಮೂವತ್ತು ವರ್ಷದವನಾಗಿದ್ದನು. ಅವನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶದಲ್ಲೆಲ್ಲಾ ಸಂಚಾರಮಾಡಿದನು.


ಇದರಿಂದ ಯೆಹೋವನು, “ನೀನು ನನ್ನ ಕಡೆಗೆ ಹಿಂದಿರುಗಿದರೆ ನನ್ನ ಸಮ್ಮುಖದಲ್ಲಿ ನಿಲ್ಲುವಂತೆ ನಾನು ನಿನ್ನನ್ನು ತಿರುಗಿ ಸೇರಿಸಿಕೊಳ್ಳುವೆನು. ನೀನು ತುಚ್ಛವಾದದ್ದನ್ನು ನಿರಾಕರಿಸಿ, ಅಮೂಲ್ಯವಾದದ್ದನ್ನು ಪ್ರಕಾಶಪಡಿಸಿದರೆ ನೀನು ನನ್ನ ಬಾಯಂತಿರುವಿ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು, ನೀನು ಅವರ ಕಡೆಗೆ ತಿರುಗದಿರುವಿ.


ಗಿಲ್ಯಾದಿನ ತಿಷ್ಬೀಯ ಊರಿನವನಾದ ಎಲೀಯ ಎಂಬುವವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಾಣೆ,


ಆರಿಸಲ್ಪಟ್ಟ ಯುವಕರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಎಂಬ ಯೆಹೂದ್ಯರು ಸೇರಿದ್ದರು.


ಕಂಚುಕಿಯರ ಅಧ್ಯಕ್ಷನು ಇವರಿಗೆ ನಾಮಕರಣಮಾಡಿ ದಾನಿಯೇಲನಿಗೆ ಬೇಲ್ತೆಶಚ್ಚರ್, ಹನನ್ಯನಿಗೆ ಶದ್ರಕ್, ಮೀಶಾಯೇಲನಿಗೆ ಮೇಶಕ್, ಅಜರ್ಯನಿಗೆ ಅಬೇದ್ನೆಗೋ ಎಂಬ ಹೆಸರಿಟ್ಟನು.


ರಾಜನು ನೇಮಿಸಿದ ಕಾಲವು ಕಳೆದು ಯುವಕರನ್ನು ಸನ್ನಿಧಿಗೆ ತರತಕ್ಕ ಸಮಯವು ಬಂದಾಗ, ಕಂಚುಕಿಯರ ಅಧ್ಯಕ್ಷನು ಅವರನ್ನು ನೆಬೂಕದ್ನೆಚ್ಚರನ ಸಮ್ಮುಖಕ್ಕೆ ಕರೆದು ತಂದನು.


ಕೂಡಲೆ ಆ ಆಜ್ಞೆಯು ಪ್ರಕಟವಾಯಿತು. ವಿದ್ವಾಂಸರು ಪ್ರಾಣಾಪಾಯಕ್ಕೆ ಗುರಿಯಾದರು; ದಾನಿಯೇಲನನ್ನೂ, ಅವನ ಸ್ನೇಹಿತರನ್ನೂ ಕೊಲ್ಲುವುದಕ್ಕೆ ಹುಡುಕಿದರು.


ಸಕಲ ಜನಾಂಗ, ಕುಲ, ಭಾಷೆಗಳವರಲ್ಲಿ ಯಾರಾದರೂ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರ ವಿಷಯದಲ್ಲಿ ಅಲ್ಲ ಸಲ್ಲದ ಮಾತುಗಳನ್ನಾಡಿದರೆ ಅವರನ್ನು ತುಂಡುತುಂಡಾಗಿ ಕತ್ತರಿಸಿ, ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ; ಹೀಗೆ ಉದ್ಧರಿಸಲು ಸಮರ್ಥನಾದ ಇನ್ಯಾವ ದೇವರೂ ಇಲ್ಲವಲ್ಲಾ” ಎಂದು ಹೇಳಿದನು.


ಮತ್ತು ಪ್ರಧಾನರಲ್ಲಿ ಅಂಗದೋಷವಿಲ್ಲದವರೂ, ಸುಂದರರೂ, ಸಮಸ್ತ ಶಾಸ್ತ್ರಜ್ಞರೂ, ಪಂಡಿತರೂ, ವಿದ್ಯಾನಿಪುಣರೂ, ರಾಜಾಲಯದಲ್ಲಿ ಸನ್ನಿಧಿ ಸೇವೆಮಾಡಲು ಸಮರ್ಥರೂ ಆದ ಕೆಲವು ಯುವಕರನ್ನು ಇಲ್ಲಿಗೆ ಕರೆದುತಂದು ಅವರಿಗೆ ಕಸ್ದೀಯ ಪಂಡಿತರ ಭಾಷೆಯನ್ನೂ, ಶಾಸ್ತ್ರಗಳನ್ನೂ ಕಲಿಸಬೇಕು” ಎಂಬುದಾಗಿ ಅಪ್ಪಣೆಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು