Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 1:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇದಲ್ಲದೆ, “ಇನ್ನು ಮುಂದೆ ಅವರು ಸನ್ನಿಧಿಸೇವಕರಾಗಲೆಂದು ತನ್ನ ಭೋಜನ ಪದಾರ್ಥಗಳನ್ನೂ, ರಾಜನು ಕುಡಿಯುವ ದ್ರಾಕ್ಷಾರಸವನ್ನೂ ಅವರಿಗೆ ಪ್ರತಿದಿನ ಬಡಿಸುವ ಏರ್ಪಾಡುಮಾಡಿ ಅವರನ್ನು ಮೂರು ವರ್ಷ ಪೋಷಿಸಬೇಕು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇದಲ್ಲದೆ, “ಇನ್ನು ಮುಂದಕ್ಕೆ ಅವರು ಸನ್ನಿಧಿಸೇವಕರಾಗುವಂತೆ, ನನ್ನ ಭೋಜನಪದಾರ್ಥಗಳನ್ನು ಹಾಗೂ ನಾನು ಕುಡಿಯುವ ದ್ರಾಕ್ಷಾರಸವನ್ನು ಅವರಿಗೆ ಪ್ರತಿದಿನ ಬಡಿಸುವ ಏರ್ಪಾಡುಮಾಡಿ ಅವರನ್ನು ಮೂರು ವರ್ಷ ಪೋಷಿಸಬೇಕು,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇದಲ್ಲದೆ ಇನ್ನು ಮುಂದೆ ಅವರು ಸನ್ನಿಧಿಸೇವಕರಾಗಲೆಂದು ತನ್ನ ಭೋಜನಪದಾರ್ಥಗಳನ್ನೂ ತಾನು ಕುಡಿಯುವ ದ್ರಾಕ್ಷಾರಸವನ್ನೂ ಅವರಿಗೆ ದಿನವಹಿ ಬಡಿಸುವ ಏರ್ಪಾಡುಮಾಡಿ ಅವರನ್ನು ಮೂರು ವರುಷ ಪೋಷಿಸಬೇಕು ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅರಸನಾದ ನೆಬೂಕದ್ನೆಚ್ಚರನು ದಿನಾಲು ಆ ತರುಣರಿಗೆ ತಾನು ಸೇವಿಸುವ ಆಹಾರವನ್ನು ಮತ್ತು ದ್ರಾಕ್ಷಾರಸವನ್ನು ಕೊಡುತ್ತಿದ್ದನು. ಅವರನ್ನು ತನ್ನ ಸೇವಕರನ್ನಾಗಿ ಮಾಡಿಕೊಳ್ಳುವ ಉದ್ದೇಶದಿಂದ ಮೂರು ವರ್ಷಗಳ ತರಬೇತಿ ಕೊಡಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅರಸನು ರಾಜಭೋಜನದಲ್ಲಿಯೂ, ತಾನು ಕುಡಿಯುವ ದ್ರಾಕ್ಷಾರಸದಲ್ಲಿಯೂ ಪ್ರತಿದಿನವೂ ಅವರಿಗೆ ಪಾಲನ್ನು ನೇಮಿಸಿದನು. ಹೀಗೆ ಅವರು ಮೂರು ವರ್ಷಗಳ ಕಾಲ ಪೋಷಿಸಲಾದ ಮೇಲೆ ಅರಸನ ಸನ್ನಿಧಿಯ ಸೇವಕರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 1:5
14 ತಿಳಿವುಗಳ ಹೋಲಿಕೆ  

ರಾಜನು ಅವರ ಸಂಗಡ ಮಾತನಾಡುವಾಗ ಆ ಸಮಸ್ತ ಯುವಕರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರ ಹಾಗೆ ಯಾರೂ ಕಂಡುಬರಲಿಲ್ಲ; ಆದಕಾರಣ ಅವರು ರಾಜನ ಸನ್ನಿಧಿಸೇವಕರಾದರು.


ಆದರೆ ದಾನಿಯೇಲನು ರಾಜನ ಭೋಜನ ಪದಾರ್ಥಗಳನ್ನು ತಿಂದು ರಾಜನು ಕುಡಿಯುವ ದ್ರಾಕ್ಷಾರಸವನ್ನು ಕುಡಿದು ತನ್ನನ್ನು ಅಶುದ್ಧ ಮಾಡಿಕೊಳ್ಳಬಾರದೆಂದು ನಿಶ್ಚಯಿಸಿ ಕಂಚುಕಿಯರ ಅಧ್ಯಕ್ಷನಿಗೆ, “ನಾನು ಅಶುದ್ಧನಾಗಲಾರೆ, ಕ್ಷಮಿಸು” ಎಂದು ವಿಜ್ಞಾಪಿಸಿದನು.


ನಿನ್ನ ಪ್ರಜೆಗಳು ಸದಾ ನಿನ್ನ ಮುಂದೆ ನಿಂತುಕೊಂಡು ನಿನ್ನ ಜ್ಞಾನವಾಕ್ಯಗಳನ್ನು ಕೇಳುವ ನಿನ್ನ ಸೇವಕರು ಧನ್ಯರು.


ಆದರೆ ಅಂದು ಬರುವುದಕ್ಕಿರುವ ಇವೆಲ್ಲವುಗಳಿಂದ ತಪ್ಪಿಸಿಕೊಳ್ಳುವುದಕ್ಕೂ, ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವುದಕ್ಕೂ, ನೀವು ಪೂರ್ಣ ಶಕ್ತರಾಗುವಂತೆ, ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆಮಾಡಿಕೊಳ್ಳುತ್ತಾ ಎಚ್ಚರವಾಗಿರಿ” ಅಂದನು.


ನಮ್ಮ ಅನುದಿನದ ಆಹಾರವನ್ನು ಪ್ರತಿದಿನವೂ ದಯಪಾಲಿಸು.


ನಮ್ಮ ಅನುದಿನದ ಆಹಾರವನ್ನು ಈ ಹೊತ್ತು ನಮಗೆ ದಯಪಾಲಿಸು.


ಇದರಿಂದ ಯೆಹೋವನು, “ನೀನು ನನ್ನ ಕಡೆಗೆ ಹಿಂದಿರುಗಿದರೆ ನನ್ನ ಸಮ್ಮುಖದಲ್ಲಿ ನಿಲ್ಲುವಂತೆ ನಾನು ನಿನ್ನನ್ನು ತಿರುಗಿ ಸೇರಿಸಿಕೊಳ್ಳುವೆನು. ನೀನು ತುಚ್ಛವಾದದ್ದನ್ನು ನಿರಾಕರಿಸಿ, ಅಮೂಲ್ಯವಾದದ್ದನ್ನು ಪ್ರಕಾಶಪಡಿಸಿದರೆ ನೀನು ನನ್ನ ಬಾಯಂತಿರುವಿ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು, ನೀನು ಅವರ ಕಡೆಗೆ ತಿರುಗದಿರುವಿ.


ನಿನ್ನ ಪ್ರಜೆಗಳೂ, ಸದಾ ನಿನ್ನ ಮುಂದೆ ನಿಂತುಕೊಂಡು ನಿನ್ನ ಜ್ಞಾನವಾಕ್ಯಗಳನ್ನು ಕೇಳುವ ನಿನ್ನ ಸೇವಕರೂ ಧನ್ಯರು.


ಅವನು ಬದುಕಿರುವವರೆಗೂ ಅವನಿಗೆ ಬೇಕಾಗುವ ಎಲ್ಲಾ ಪದಾರ್ಥಗಳು ಪ್ರತಿನಿತ್ಯವೂ ಅರಸನಿಂದಲೇ ಅವನಿಗೆ ಕೊಡಲಾಗುತ್ತಿತ್ತು.


ತರುವಾಯ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ದಾವೀದನನ್ನು ಮೆಚ್ಚಿದ್ದೇನೆ; ಅವನು ನನ್ನ ಸನ್ನಿಧಿಯಲ್ಲಿ ಸೇವೆಮಾಡಲಿ” ಎಂದು ತಿಳಿಸಿದನು.


ಯೋಸೇಫನು ಐಗುಪ್ತ ದೇಶದ ಅರಸನಾದ ಫರೋಹನ ಸನ್ನಿಧಿಯಲ್ಲಿ ನಿಂತಾಗ ಮೂವತ್ತು ವರ್ಷದವನಾಗಿದ್ದನು. ಅವನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶದಲ್ಲೆಲ್ಲಾ ಸಂಚಾರಮಾಡಿದನು.


ಅದಕ್ಕೆ ಆ ದೂತನು, “ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು; ನಿನ್ನೊಂದಿಗೆ ಮಾತನಾಡಿ ಈ ಶುಭವಾರ್ತೆಯನ್ನು ನಿನಗೆ ತಿಳಿಸುವುದಕ್ಕಾಗಿ ನಾನು ಕಳುಹಿಸಲ್ಪಟ್ಟಿದ್ದೇನೆ.


ಅವನ ರುಚಿಪದಾರ್ಥಗಳನ್ನು ಬಯಸಬೇಡ, ಅದು ಮೋಸದ ಆಹಾರವೇ ಸರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು