Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 1:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದೇವರು ಕಂಚುಕಿಯರ ಅಧ್ಯಕ್ಷನ ಮನಸ್ಸಿನಲ್ಲಿ ದಾನಿಯೇಲನ ಮೇಲೆ ಕನಿಕರವನ್ನೂ, ದಯೆಯನ್ನೂ ಹುಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಕಂಚುಕಿಯರ ನಾಯಕನು ದಾನಿಯೇಲನ ಮೇಲೆ ಕನಿಕರ ಮತ್ತು ದಯೆತೋರುವಂತೆ ದೇವರು ಅನುಗ್ರಹಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ದೇವರು ಕಂಚುಕಿಯರ ಅಧ್ಯಕ್ಷನ ಮನಸ್ಸಿನಲ್ಲಿ ದಾನಿಯೇಲನ ಮೇಲೆ ಕನಿಕರವನ್ನೂ ದಯೆಯನ್ನೂ ಹುಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೇವರು ಅಶ್ಪೆನಜನ ಮನಸ್ಸಿನಲ್ಲಿ ದಾನಿಯೇಲನ ಮೇಲೆ ಕನಿಕರವನ್ನೂ ದಯೆಯನ್ನೂ ಹುಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ದೇವರು ದಾನಿಯೇಲನ ಮೇಲೆ ಕಂಚುಕಿಯರ ಯಜಮಾನನ ದಯೆ, ಕನಿಕರ ತೋರುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 1:9
14 ತಿಳಿವುಗಳ ಹೋಲಿಕೆ  

ಆದರೆ ಯೆಹೋವನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯನ್ನಿಟ್ಟು ಸೆರೆಮನೆಯ ಯಜಮಾನನಿಂದ ದಯೆ ದೊರಕುವಂತೆ ಮಾಡಿದನು.


ಯೆಹೋವನು ಒಬ್ಬನ ನಡತೆಗೆ ಮೆಚ್ಚಿದರೆ, ಅವನ ಶತ್ರುಗಳನ್ನೂ ಮಿತ್ರರನ್ನಾಗಿ ಮಾಡುವನು.


ಸೆರೆಯೊಯ್ದವರ ದಯೆಗೆ ಅವರು ಪಾತ್ರರಾಗುವಂತೆ ಮಾಡಿದನು.


ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನೀನು ಬಿಡಿಸಿದ ಈ ಜನರು ನಿನ್ನ ಸ್ವಕೀಯ ಜನರಾಗಿದ್ದಾರೆಂಬುದನ್ನು ನೆನಪುಮಾಡಿಕೊ.


ಆಗ ಅರಸನು, “ನಿನ್ನ ಅಪೇಕ್ಷೆಯೇನು” ಎಂದು ನನ್ನನ್ನು ಕೇಳಿದನು. ಆಗ ನಾನು ಪರಲೋಕದ ದೇವರನ್ನು ಪ್ರಾರ್ಥಿಸಿ,


ಅವನಿಗೆ ಬಂದ ಎಲ್ಲಾ ಕಷ್ಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯೆಗೆ ಪಾತ್ರನೂ, ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ, ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಮಾಡಿದನು.


ಯೆಹೋವನು ತನ್ನ ಭಕ್ತನನ್ನು ತನಗೋಸ್ಕರ ಪ್ರತ್ಯೇಕಿಸಿಕೊಂಡಿದ್ದಾನೆ ಎಂದು ತಿಳಿದುಕೊಳ್ಳಿರಿ. ನಾನು ಆತನಿಗೆ ಮೊರೆಯಿಡುವಾಗೆಲ್ಲಾ ಆತನು ಕೇಳುತ್ತಾನೆ.


ಯೆಹೋವನೇ, ಕೃಪೆಮಾಡು; ನಿನ್ನ ಸೇವಕನಾದ ನನ್ನ ಪ್ರಾರ್ಥನೆಗೂ, ನಿನ್ನ ನಾಮ ಸ್ಮರಣೆಯಲ್ಲಿ ಆನಂದಿಸುವ ನಿನ್ನ ಭಕ್ತರ ಪ್ರಾರ್ಥನೆಗೂ ಕಿವಿಗೊಡು. ನಿನ್ನ ಸೇವಕನು ಈಹೊತ್ತು ಈ ಮನುಷ್ಯನ ದಯೆಗೆ ಪಾತ್ರನಾಗಿ ಸಫಲನಾಗುವಂತೆ ಅನುಗ್ರಹಿಸಬೇಕು” ಎಂದು ಪ್ರಾರ್ಥಿಸಿದೆನು.


ಅವನು ಯಾಕೋಬನಿಗೆ, “ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಲ್ಪಡುವುದಿಲ್ಲ; ನೀನು ದೇವರ ಸಂಗಡಲೂ, ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದುದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರಾಗುವುದು” ಎಂದು ಹೇಳಿದನು.


ಇಂಥವರ ಬಾಯೆಂಬ ಕತ್ತಿಯಿಂದಲೂ, ಬಲಿಷ್ಠರ ಕೈಯಿಂದಲೂ ದಿಕ್ಕಿಲ್ಲದವರನ್ನು ರಕ್ಷಿಸುತ್ತಾನೆ.


ಹೀಗೆ ಬಡವನಿಗೆ ನಿರೀಕ್ಷೆಯುಂಟಾಗುವುದು, ಅನ್ಯಾಯವು ಬಾಯಿ ಮುಚ್ಚಿಕೊಳ್ಳುವುದು.


ಆ ವಿಜ್ಞಾಪನೆಯನ್ನು ಕೇಳಿ ಕಂಚುಕಿಯರ ಅಧ್ಯಕ್ಷನು ದಾನಿಯೇಲನಿಗೆ, “ನಿಮಗೆ ಆಹಾರ ಮತ್ತು ಪಾನಗಳನ್ನು ಏರ್ಪಡಿಸಿದ್ದ ನನ್ನ ಒಡೆಯನಾದ ರಾಜನು ನಿಮ್ಮಂತೆ ಆರಿಸಲ್ಪಟ್ಟ ಯುವಕರ ಮುಖಕ್ಕಿಂತ ನಿಮ್ಮ ಮುಖವು ಬಾಡಿರುವುದನ್ನು ನೋಡಿ, ರಾಜನು ನನ್ನ ತಲೆಯನ್ನು ತೆಗೆಯಿಸಲು ನೀವು ಕಾರಣರಾಗುವಿರಿ” ಎಂದು ಭಯ ವ್ಯಕ್ತಪಡಿಸಿದನು.


ಹೇಗೈಯು ಆಕೆಯನ್ನು ಮೆಚ್ಚಿ, ತನ್ನ ದಯೆಗೆ ಪಾತ್ರಳಾದ ಆಕೆಗೋಸ್ಕರ ತಕ್ಕ ಲೇಪನದ್ರವ್ಯಗಳನ್ನೂ ಮತ್ತು ಭೋಜನವನ್ನು ಒದಗಿಸಿದನು. ಅವನು ಆಕೆಗೊಸ್ಕರ ಏಳು ಮಂದಿ ಸೇವಕಿಯರನ್ನೂ ಅರಮನೆಯಿಂದ ಆರಿಸಿಕೊಂಡು ಆಕೆಯನ್ನೂ ಮತ್ತು ಆಕೆಯ ಸೇವಕಿಯರನ್ನೂ ಅಂತಃಪುರದ ಉತ್ತಮ ಭಾಗದಲ್ಲಿರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು