Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 10:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪಾರಸಿಯ ರಾಜನಾದ ಕೋರೆಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು; ಅದು ಮಹಾಹೊರಾಟದ ಸಂಗತಿ ಸತ್ಯವಾದ ಸಂಗತಿ; ಅವನು ಕಂಡ ಕನಸನ್ನು ಗಮನಿಸಿ ಆ ಸಂಗತಿಯನ್ನು ಮನದಟ್ಟು ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪರ್ಷಿಯದ ರಾಜನಾದ ಸೈರೆಷನ ಆಳ್ವಿಕೆಯ ಮೂರನೇ ವರ್ಷದಲ್ಲಿ ಬೇಲ್ತೆಶಚ್ಚೆರನೆಂಬ ದಾನಿಯೇಲನಿಗೆ ಒಂದು ಸಂಗತಿ ಪ್ರಕಟವಾಯಿತು. ಅದು ಮಹಾ ಹೋರಾಟದ ಸಂಗತಿ, ಸತ್ಯವಾದ ಸಂಗತಿ. ಅದರ ಅರ್ಥವನ್ನು ತಾನು ಕಂಡ ದರ್ಶನದಿಂದ ಮನದಟ್ಟು ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಪಾರಸಿಯ ರಾಜನಾದ ಕೋರೆಷನ ಆಳಿಕೆಯ ಮೂರನೆಯ ವರುಷದಲ್ಲಿ ಬೇಲ್ತೆಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು; ಬಹು ಕಷ್ಟದ ಗಡುವಿನ ಆ ಸಂಗತಿಯು ಸತ್ಯ; ಅವನು ಕಂಡ ಕನಸನ್ನು ಗಮನಿಸಿ ಆ ಸಂಗತಿಯನ್ನು ಮಂದಟ್ಟುಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಕೋರೆಷನು ಪಾರಸಿಯ ರಾಜನಾಗಿದ್ದನು. ಕೋರೆಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು. (ದಾನಿಯೇಲನ ಇನ್ನೊಂದು ಹೆಸರು ಬೇಲ್ತೆಶಚ್ಚರ.) ಈ ಸಂಗತಿ ಸತ್ಯವಾದುದು; ಆದರೆ ತಿಳಿದುಕೊಳ್ಳಲು ಬಹಳ ಕಷ್ಟಕರವಾಗಿತ್ತು. ದಾನಿಯೇಲನು ಈ ಸಂಗತಿಯನ್ನು ತಿಳಿದುಕೊಂಡನು. ಒಂದು ದರ್ಶನದಲ್ಲಿ ಅದರ ಬಗ್ಗೆ ಅವನಿಗೆ ವಿವರಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪಾರಸಿಯ ಅರಸ ಕೋರೆಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆಶಚ್ಚರನೆಂಬ ದಾನಿಯೇಲನಿಗೆ ಒಂದು ಪ್ರಕಟಣೆಯಾಯಿತು. ಅದರ ಸಂದೇಶವು ಸತ್ಯವಾದದ್ದು. ಅದು ಮಹಾ ಯುದ್ಧ ವಿಷಯವಾಗಿದೆ. ಸಂದೇಶದ ಅರ್ಥವು ಅವನಿಗೆ ಒಂದು ದರ್ಶನದಲ್ಲಿ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 10:1
28 ತಿಳಿವುಗಳ ಹೋಲಿಕೆ  

ಕನಸಿನಲ್ಲಿ ತಿಳಿಸಲ್ಪಟ್ಟ ಉದಯಾಸ್ತಮಾನಗಳ ವಿಷಯವು ನಿಜವೇ ಸರಿ. ಆದರೆ ಆ ಕನಸು ಗುಟ್ಟಾಗಿರಲಿ. ಅದು ಬಹು ದಿನಗಳ ನಂತರ ನಡೆಯುವಂಥದು” ಎಂದು ಹೇಳಿದನು.


ಈ ದಾನಿಯೇಲನು ದಾರ್ಯಾವೆಷನ ಆಳ್ವಿಕೆಯಲ್ಲಿಯೂ, ಪಾರಸಿಯನಾದ ಕೋರೆಷನ ಆಳ್ವಿಕೆಯಲ್ಲಿಯೂ ಸನ್ಮಾನ, ಗೌರವಗಳಿಂದ ಬಾಳಿದನು.


ದಾನಿಯೇಲನು ರಾಜನಾದ ಕೋರೆಷನ ಆಳ್ವಿಕೆಯ ಮೊದಲನೆಯ ವರ್ಷದ ತನಕ ಸನ್ನಿಧಿ ಸೇವಕನಾಗಿಯೇ ಇದ್ದನು.


ಕಂಚುಕಿಯರ ಅಧ್ಯಕ್ಷನು ಇವರಿಗೆ ನಾಮಕರಣಮಾಡಿ ದಾನಿಯೇಲನಿಗೆ ಬೇಲ್ತೆಶಚ್ಚರ್, ಹನನ್ಯನಿಗೆ ಶದ್ರಕ್, ಮೀಶಾಯೇಲನಿಗೆ ಮೇಶಕ್, ಅಜರ್ಯನಿಗೆ ಅಬೇದ್ನೆಗೋ ಎಂಬ ಹೆಸರಿಟ್ಟನು.


ಹೀಗಿರಲು ದೇವರು ಆ ನಾಲ್ಕು ಮಂದಿ ಯುವಕರಿಗೆ ಸಕಲ ಶಾಸ್ತ್ರಗಳಲ್ಲಿಯೂ, ವಿದ್ಯೆಗಳಲ್ಲಿಯೂ, ಜ್ಞಾನವಿವೇಕಗಳನ್ನು ದಯಪಾಲಿಸಿದನು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ, ದಿವ್ಯದರ್ಶನಗಳನ್ನೂ ಗ್ರಹಿಸುವುದರಲ್ಲಿ ಪ್ರವೀಣನಾದನು.


ಇದಲ್ಲದೆ ಅವನು ನನ್ನ ಸಂಗಡ ಮಾತನಾಡುತ್ತಾ, “ಯಜ್ಞದ ಕುರಿಮರಿಯಾದಾತನ ವಿವಾಹದ ಔತಣಕ್ಕೆ ಆಹ್ವಾನಿಸಲ್ಪಟ್ಟವರು ಧನ್ಯರು ಎಂಬುದಾಗಿ ಬರೆ” ಎಂದು ನನಗೆ ಹೇಳಿ, “ಈ ಮಾತುಗಳು ದೇವರ ಸತ್ಯವಚನಗಳಾಗಿವೆ” ಅಂದನು.


ಅವನು, “ದಾನಿಯೇಲನೇ, ಈ ಮಾತುಗಳು ಅಂತ್ಯಕಾಲದ ವರೆಗೆ ಮುಚ್ಚಲ್ಪಟ್ಟು ಮುದ್ರಿತವಾಗಿವೆ, ಹೋಗು.


ದಾನಿಯೇಲನೇ, ನೀನು ಈ ಮಾತುಗಳನ್ನು ಮುಚ್ಚಿಡು, ಅವುಗಳನ್ನು ಬರೆಯುವ ಗ್ರಂಥಕ್ಕೆ ಮುದ್ರೆ ಹಾಕು. ಅಂತ್ಯಕಾಲದ ವರೆಗೆ ಮರೆಯಾಗಿರಲಿ. ಬಹಳ ಜನರು ಅತ್ತಿತ್ತ ತಿರುಗುವರು, ತಿಳಿವಳಿಕೆಯು ಹೆಚ್ಚುವುದು.”


ಉಳಿದು ಅಂತ್ಯಕಾಲದಲ್ಲಿ ನಿನ್ನ ಜನರಿಗಾಗುವ ಗತಿಯನ್ನು ನಿನಗೆ ತಿಳಿಸುವುದಕ್ಕೋಸ್ಕರ ಬಂದೆನು; ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವುಂಟು” ಎಂದು ಹೇಳಿದನು.


ಆಗ ದಾನಿಯೇಲನು ರಾಜನ ಬಳಿ, “ನಿನ್ನ ದಾನಗಳು ನಿನಗೇ ಇರಲಿ, ನಿನ್ನ ಬಹುಮಾನಗಳು ಮತ್ತೊಬ್ಬನಿಗಾಗಲಿ. ಆದರೆ ನಾನು ಈ ಬರಹವನ್ನು ಓದಿ ಇದರ ಅರ್ಥವನ್ನು ರಾಜನಿಗೆ ತಿಳಿಸುವೆನು.


ಕಾಲ ಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ಕಡೆಗಣಿಸುತ್ತಾನೆ, ನೆಲೆಸುವಂತೆ ಮಾಡುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ.


ಕೋರೆಷನ ವಿಷಯವಾಗಿ, ‘ಅವನು ನನ್ನ ಮಂದೆಯನ್ನು ಕಾಯುವವನು, ಯೆರೂಸಲೇಮು ಕಟ್ಟಲ್ಪಡಲಿ, ದೇವಸ್ಥಾನದ ಅಸ್ತಿವಾರವು ಹಾಕಲ್ಪಡಲಿ’ ಎಂದು ಹೇಳಿ, ‘ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸತಕ್ಕವನು’” ಎಂಬುದಾಗಿ ಮಾತನಾಡುವವನು ನಾನೇ.


ಯೆಹೂದ್ಯರ ಹಿರಿಯರು, ಪ್ರವಾದಿಯಾದ ಹಗ್ಗೈ, ಇದ್ದೋವಿನ ಮಗನಾದ ಜೆಕರೀಯ ಇವರ ಪ್ರವಾದನೆಯಿಂದ ಪ್ರೇರಿತರಾಗಿ ಕಟ್ಟುವ ಕೆಲಸವನ್ನು ಮುಂದುವರಿಸಿದರು. ಇಸ್ರಾಯೇಲ್ ದೇವರ ಆಜ್ಞಾನುಸಾರವಾಗಿಯೂ ಪರ್ಷಿಯ ರಾಜರಾದ ಕೋರೆಷ್, ದಾರ್ಯಾವೆಷ್, ಅರ್ತಷಸ್ತ ಇವರ ಅಪ್ಪಣೆಯ ಆಧಾರದಿಂದಲೂ ಕಟ್ಟಡವನ್ನು ಮುಗಿಸಿದರು.


ಅದರಲ್ಲಿ, “ಅರಸನಾದ ಕೋರೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಅರಸನಾದ ಕೋರೆಷನು ಯೆರೂಸಲೇಮಿನ ದೇವಾಲಯದ ವಿಷಯವಾಗಿ ಕೊಟ್ಟ ಅಪ್ಪಣೆ, ‘ಬಲವಾದ ಅಸ್ತಿವಾರವನ್ನು ಹಾಕಿ, ಯಜ್ಞಸಮರ್ಪಣೆಗಾಗಿ ಆಲಯವನ್ನು ಪುನಃ ಕಟ್ಟಬೇಕು. ಅದರ ಎತ್ತರ ಅರುವತ್ತು ಮೊಳವು, ಅಗಲ ಅರುವತ್ತು ಮೊಳವು ಇರಬೇಕು.


ಪರ್ಷಿಯ ರಾಜನಾದ ಕೋರೆಷನ ಕಾಲದಿಂದ ಪರ್ಷಿಯ ರಾಜನಾದ ದಾರ್ಯಾವೆಷನ ಆಳ್ವಿಕೆಯವರೆಗೂ ಇದು ಮುಂದುವರಿಯಿತು.


ಆಗ ಜೆರುಬ್ಬಾಬೆಲ್, ಯೇಷೂವ ಮತ್ತು ಬೇರೆ ಇಸ್ರಾಯೇಲ್ ಗೋತ್ರಪ್ರಧಾನರೂ ಅವರಿಗೆ, “ನೀವು ನಮ್ಮ ದೇವರ ಆಲಯ ಕಟ್ಟುವುದರಲ್ಲಿ ನಮ್ಮೊಡನೆ ಸೇರಲೇ ಕೂಡದು. ಪರ್ಷಿಯ ದೇಶದ ರಾಜನಾದ ಕೋರೆಷನಿಂದ ನಮಗಾದ ಅಪ್ಪಣೆಯ ಮೇರೆಗೆ ನಾವೇ ಇಸ್ರಾಯೇಲ್ ದೇವರಾದ ಯೆಹೋವನ ಆಲಯವನ್ನು ಕಟ್ಟುತ್ತೇವೆ” ಎಂದು ಉತ್ತರ ಕೊಟ್ಟರು.


ಪಾರಸಿಯ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಆ ಪಾರಸಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ,


ಫರೋಹನಿಗೆ ಕನಸು ಎರಡು ರೀತಿಯಾಗಿ ಬಿದ್ದಿದ್ದರಿಂದ ದೇವರು ಈ ಕಾರ್ಯವನ್ನು ನಿಶ್ಚಯಿಸಿ ಇದನ್ನು ಬೇಗ ಮಾಡುವನು ಎಂಬುದಾಗಿ ತಿಳಿದುಕೊಳ್ಳಬೇಕು.


ಇಗೋ, ಈ ನನ್ನ ಮಾತು ತಕ್ಕ ಸಮಯದಲ್ಲಿ ನೆರವೇರುವುದು; ಆದರೆ ನೀನು ಇದನ್ನು ನಂಬದೆಹೋದುದರಿಂದ ಅದೆಲ್ಲಾ ಸಂಭವಿಸುವ ದಿನದ ವರೆಗೂ ಮಾತನಾಡಲಾರದೆ ಮೂಕನಾಗಿರುವೆ” ಎಂದು ಅವನಿಗೆ ಉತ್ತರಕೊಟ್ಟನು.


ನಾನು ಈಗ ಸತ್ಯಾಂಶವನ್ನು ನಿನಗೆ ತಿಳಿಸುವೆನು, “ಇಗೋ, ಪಾರಸಿಯ ದೇಶದಲ್ಲಿ ಇನ್ನು ಮೂವರು ರಾಜರು ಏಳುವರು; ನಾಲ್ಕನೆಯ ರಾಜನು ಎಲ್ಲರಿಗಿಂತಲೂ ಅಧಿಕ ಧನವಂತನಾಗಿರುವನು; ಅವನು ತನ್ನ ಧನದಿಂದ ಪ್ರಬಲನಾಗಿ ಗ್ರೀಕ್ ರಾಜ್ಯಕ್ಕೆ ವಿರುದ್ಧವಾಗಿ ತನ್ನ ಬಲವನ್ನೆಲ್ಲಾ ಎಬ್ಬಿಸುವನು.


ಆಗ, “ಗಬ್ರಿಯೇಲನೇ, ಕನಸಿನ ಅರ್ಥವನ್ನು ಇವನಿಗೆ ತಿಳಿಯಪಡಿಸು” ಎಂದು ಮನುಷ್ಯ ಧ್ವನಿಯಂತಹ ಒಂದು ವಾಣಿಯು ಊಲಾ ಕಾಲುವೆಯ ದಡಗಳ ನಡುವೆ ನನಗೆ ಕೇಳಿಸಿತು.


ಹೌದು, ಬೇಲ್ತೆಶಚ್ಚರನೆಂಬ ಅಡ್ಡ ಹೆಸರನ್ನು ರಾಜನಿಂದ ಹೊಂದಿದ ಈ ದಾನಿಯೇಲನಲ್ಲಿ ಪರಮಬುದ್ಧಿಯೂ, ಜ್ಞಾನವೂ, ವಿವೇಕವೂ, ಕನಸುಗಳ ಅರ್ಥವನ್ನು ತಿಳಿಸುವ ಜಾಣತನವೂ, ಒಗಟುಬಿಡಿಸುವ ಚಮತ್ಕಾರವೂ, ಕಠಿಣವಾದ ಸಂಗತಿಗಳನ್ನು ತಿಳಿಸುವ ಚಾತುರ್ಯವೂ ತೋರಿಬಂದವು. ಆದುದರಿಂದಲೇ ಆತನನ್ನು ಹಾಗೆ ನೇಮಿಸಿದನು. ಈಗ ಆ ದಾನಿಯೇಲನನ್ನು ಕರೆಯಿಸಿದರೆ ಅವನು ಬರಹದ ಅರ್ಥವನ್ನು ವಿವರಿಸುವನು” ಎಂದಳು.


ನನ್ನ ದೇವರ ಹೆಸರು ಸೇರಿರುವ ಬೇಲ್ತೆಶಚ್ಚರನೆಂಬ ಅಡ್ಡಹೆಸರನ್ನು ಹೊಂದಿದವನೂ, ಪರಿಶುದ್ಧದೇವರುಗಳ ಆತ್ಮವುಳ್ಳವನೂ ಆದ ದಾನಿಯೇಲನು ಕಟ್ಟಕಡೆಯಲ್ಲಿ ನನ್ನ ಬಳಿಗೆ ಬರಲು ನಾನು ಆ ಕನಸನ್ನು ಅವನಿಗೆ ಹೀಗೆ ತಿಳಿಸಿದೆನು,


ಆದರೆ ಪರ್ಷಿಯ ರಾಜನಾದ ಕೋರೆಷನಿಂದ ಪಡೆದುಕೊಂಡ ಅಪ್ಪಣೆಯ ಮೇರೆಗೆ ಅವರು ಕಲ್ಲುಕುಟಿಗರಿಗೆ ಮತ್ತು ಬಡಗಿಗಳಿಗೆ ಹಣವನ್ನೂ, ಲೆಬನೋನಿನಿಂದ ಸಮುದ್ರಮಾರ್ಗವಾಗಿ ಯೊಪ್ಪಕ್ಕೆ ದೇವದಾರು ಮರಗಳನ್ನು ತರುತ್ತಿದ್ದ ಚೀದೋನ್ಯರಿಗೆ ಮತ್ತು ತೂರ್ಯರಿಗೆ ಅನ್ನಪಾನಗಳನ್ನೂ ಮತ್ತು ಎಣ್ಣೆಯನ್ನೂ ಕೊಟ್ಟಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು