ದಾನಿಯೇಲ 10:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಗ ಅವರು ನನಗೆ, “ದಾನಿಯೇಲನೇ, ಅತಿಪ್ರಿಯನೇ, ನಾನು ನುಡಿಯುವ ಮಾತುಗಳನ್ನು ಗ್ರಹಿಸು; ನಿಂತುಕೋ, ಈಗ ನಿನ್ನ ಬಳಿಗೇ ಕಳುಹಿಸಲ್ಪಟ್ಟಿದ್ದೇನೆ” ಎಂದು ಹೇಳಿದನು. ಹೇಳಿದ ಕೂಡಲೆ ನಾನು ನಡುಗುತ್ತಾ ನಿಂತುಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆಗ ಅವನು ನನಗೆ, “ಅತಿಪ್ರಿಯ ದಾನಿಯೇಲನೇ, ನಾನು ನುಡಿಯುವ ಮಾತುಗಳನ್ನು ಗ್ರಹಿಸು. ಎದ್ದು ನಿಂತುಕೋ. ನಾನು ನಿನ್ನ ಬಳಿಗೆ ಕಳುಹಿಸಲ್ಪಟ್ಟವನು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆಗ ಅವನು ನನಗೆ - ದಾನಿಯೇಲನೇ, ಅತಿಪ್ರಿಯನೇ, ನಾನು ನುಡಿಯುವ ಮಾತುಗಳನ್ನು ಗ್ರಹಿಸು; ನಿಂತುಕೋ, ಈಗ ನಿನ್ನ ಬಳಿಗೇ ಕಳುಹಿಸಲ್ಪಟ್ಟಿದ್ದೇನೆ ಎಂದು ಹೇಳಿದನು; ಹೇಳಿದ ಕೂಡಲೆ ನಾನು ನಡುಗುತ್ತಾ ನಿಂತುಕೊಂಡೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು ನನಗೆ, “ದಾನಿಯೇಲನೇ, ದೇವರು ನಿನ್ನನ್ನು ತುಂಬ ಪ್ರೀತಿಸುತ್ತಾನೆ. ನಾನು ನಿನಗೆ ಈ ಮುಂದೆ ಹೇಳುವ ಮಾತುಗಳ ಬಗ್ಗೆ ಚೆನ್ನಾಗಿ ವಿಚಾರಮಾಡು. ಎದ್ದುನಿಲ್ಲು, ನನ್ನನ್ನು ನಿನ್ನ ಬಳಿಗೆ ಕಳುಹಿಸಲಾಗಿದೆ” ಎಂದು ಹೇಳಿದನು. ಆಗ ನಾನು ಎದ್ದುನಿಂತೆ. ನಾನು ಭಯದಿಂದ ಇನ್ನೂ ನಡುಗುತ್ತಿದ್ದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆತನು ನನಗೆ, “ದಾನಿಯೇಲನೇ, ಅತಿ ಪ್ರಿಯನಾದ ಮನುಷ್ಯನೇ, ನಾನು ನಿನಗೆ ಹೇಳುವ ಮಾತುಗಳನ್ನು ತಿಳಿದುಕೊಂಡು ಸ್ಥಿರವಾಗಿ ನಿಲ್ಲು. ಏಕೆಂದರೆ ನಾನು ಈಗ ನಿನ್ನ ಬಳಿಗೆ ಕಳುಹಿಸಲಾಗಿದ್ದೇನೆ,” ಎಂದು ಹೇಳಿದನು. ಅವನು ಈ ಮಾತನ್ನು ಹೇಳಿದ ಮೇಲೆ, ನಾನು ನಡುಗುತ್ತಲೇ ನಿಂತೆನು. ಅಧ್ಯಾಯವನ್ನು ನೋಡಿ |