Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 10:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆ ಮೇಲೆ ಆ ಪುರುಷನು ನನಗೆ, “ಅತಿಪ್ರಿಯನೇ, ಭಯಪಡಬೇಡ; ನಿನಗೆ ಸಮಾಧಾನವಿರಲಿ, ಬಲಗೊಳ್ಳು, ಬಲಗೊಳ್ಳು” ಎಂದು ಹೇಳಿದನು. ಅವನು ಈ ಮಾತನ್ನು ಹೇಳಿದ ಕೂಡಲೆ ನಾನು ಬಲಗೊಂಡು, “ಎನ್ನೊಡೆಯನೇ, ಮಾತನಾಡು; ನನ್ನನ್ನು ಬಲಗೊಳಿಸಿದ್ದೀ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಬಳಿಕ ಆ ವ್ಯಕ್ತಿ ನನಗೆ, “ಅತಿಪ್ರಿಯನೇ, ಭಯಪಡಬೇಡ. ನಿನಗೆ ಶಾಂತಿಸಮಾಧಾನವಿರಲಿ! ಧೈರ್ಯತಂದುಕೊ! ಧೈರ್ಯತಂದುಕೊ!” ಎಂದು ಹೇಳಿದ. ಅವನ ಈ ಮಾತನ್ನು ಕೇಳಿದ ಕೂಡಲೆ ನಾನು ಧೈರ್ಯದಿಂದ, “ಎನ್ನೊಡೆಯಾ, ಮಾತಾಡು. ನನಗೆ ಧೈರ್ಯತುಂಬಿರುವೆ,” ಎಂದು ಅರಿಕೆಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆಮೇಲೆ ಆ ಪುರುಷನು ನನಗೆ - ಅತಿಪ್ರಿಯನೇ, ಭಯಪಡಬೇಡ; ನಿನಗೆ ಸಮಾಧಾನವಿರಲಿ, ಬಲಗೊಳ್ಳು, ಬಲಗೊಳ್ಳು ಎಂದು ಹೇಳಿದನು. ಅವನು ಆ ಮಾತನ್ನು ಹೇಳಿದ ಕೂಡಲೆ ನಾನು ಬಲಗೊಂಡು - ಎನ್ನೊಡೆಯನೇ, ಮಾತಾಡು; ನನ್ನನ್ನು ಬಲಗೊಳಿಸಿದ್ದೀ ಎಂದರಿಕೆಮಾಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆಗ ಆತನು “ದಾನಿಯೇಲನೇ, ಭಯಪಡಬೇಡ. ದೇವರು ನಿನ್ನನ್ನು ತುಂಬ ಪ್ರೀತಿಸುತ್ತಾನೆ. ಸಮಾಧಾನ ತಂದುಕೊ. ಈಗ ನೀನು ಬಲಗೊಳ್ಳು, ಬಲಗೊಳ್ಳು” ಎಂದು ಹೇಳಿದನು. ಆತನು ನನ್ನೊಂದಿಗೆ ಮಾತನಾಡಿದ ಮೇಲೆ ನನಗೆ ಬಲಬಂದಿತು. ಆಗ ನಾನು, “ಸ್ವಾಮೀ, ನೀವು ನನಗೆ ಬಲವನ್ನು ನೀಡಿದಿರಿ. ಈಗ ನೀವು ಮಾತನಾಡಬಹುದು” ಎಂದು ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಅತಿ ಪ್ರಿಯನೇ, ಭಯಪಡಬೇಡ, ನಿನಗೆ ಸಮಾಧಾನವಾಗಲಿ, ಬಲವಾಗಿರು, ಈಗ ಬಲಶಾಲಿಯಾಗಿರು,” ಎಂದನು. ಅವನು ನನ್ನ ಸಂಗಡ ಮಾತನಾಡಿದಾಗ ನಾನು ಬಲವನ್ನು ಹೊಂದಿ, “ನನ್ನ ಒಡೆಯನೇ ಮಾತನಾಡು, ನೀನು ನನ್ನನ್ನು ಬಲಪಡಿಸಿದ್ದೀ,” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 10:19
29 ತಿಳಿವುಗಳ ಹೋಲಿಕೆ  

ಭಯಭ್ರಾಂತ ಹೃದಯದವರಿಗೆ, “ಬಲಗೊಳ್ಳಿರಿ, ಹೆದರಬೇಡಿರಿ! ಇಗೋ, ನಿಮ್ಮ ದೇವರು ಮುಯ್ಯಿತೀರಿಸುವುದಕ್ಕೂ, ದೈವಿಕ ಪ್ರತಿಫಲವನ್ನು ಕೊಡುವುದಕ್ಕೂ ಬರುವನು. ತಾನೇ ಬಂದು ನಿಮ್ಮನ್ನು ರಕ್ಷಿಸುವನು” ಎಂದು ಹೇಳಿರಿ.


ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು” ಎಂದು ಹೇಳಿದನು.


ಆದರೆ ಯೆಹೋವನು ಅವನಿಗೆ, “ಸಮಾಧಾನದಿಂದಿರು, ಹೆದರಬೇಡ; ನೀನು ಸಾಯುವುದಿಲ್ಲ” ಅಂದನು.


ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ದೇವರ ಅಪ್ಪಣೆಯಾಯಿತು; ಅದನ್ನು ನಿನಗೆ ತಿಳಿಸಲು ಇಲ್ಲಿಗೆ ಬಂದಿದ್ದೇನೆ; ನೀನು ದೇವರಿಗೆ ಅತಿಪ್ರಿಯನು. ಈ ದೈವೋಕ್ತಿಯನ್ನು ಯೋಚಿಸು, ಈ ದರ್ಶನವನ್ನು ಗ್ರಹಿಸಿಕೋ.


ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ, ನಾನು ಮೊದಲನೆಯವನೂ, ಕಡೆಯವನೂ,


ಅದಕ್ಕಾತನು, “ನನ್ನ ಕೃಪೆಯೇ ನಿನಗೆ ಸಾಕು, ಬಲಹೀನತೆಯಲ್ಲಿಯೇ ನನ್ನ ಬಲವು ಪೂರ್ಣಸಾಧಕವಾಗುತ್ತದೆ” ಎಂದು ನನಗೆ ಹೇಳಿದನು. ಹೀಗಿರಲಾಗಿ, ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿರಬೇಕೆಂದು ನನಗುಂಟಾಗುವ ಬಲಹೀನತೆಯಲ್ಲಿಯೂ ಬಹು ಸಂತೋಷವಾಗಿ ಹೆಚ್ಚಳಪಡುವೆನು.


“ನಾನು ನನ್ನ ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.


ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಿಂದ ಬಲಹೊಂದಿದವನಾಗು.


ಯೇಸು ತನ್ನ ತಾಯಿಯನ್ನೂ ಹತ್ತಿರದಲ್ಲಿ ನಿಂತಿದ್ದ ತನ್ನ ಪ್ರೀತಿಯ ಶಿಷ್ಯನನ್ನೂ ನೋಡಿ ತನ್ನ ತಾಯಿಗೆ, “ಸ್ತ್ರೀಯೇ, ಇಗೋ, ನಿನ್ನ ಮಗನು” ಎಂದು ಹೇಳಿದನು.


ಪೇತ್ರನು ಹಿಂತಿರುಗಿ ನೋಡಿದಾಗ, ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಹಿಂದೆ ಬರುವುದನ್ನು ಕಂಡನು. ಆ ಶಿಷ್ಯನು ಊಟದ ಸಮಯದಲ್ಲಿ ಯೇಸುವಿನ ಎದೆಗೆ ಒರಗಿಕೊಂಡು, “ಕರ್ತನೇ, ನಿನ್ನನ್ನು ಹಿಡಿದುಕೊಡುವವನು ಯಾರು?” ಎಂದು ಕೇಳಿದವನೇ.


ಅದಕ್ಕೆ ಯೆಹೂದ್ಯರು, “ಆಹಾ! ಈತನು ಅವನ ಮೇಲೆ ಎಷ್ಟೋ ಮಮತೆ ಇಟ್ಟಿದ್ದಾನೆ” ಎಂದರು.


ಮಾರ್ಥಳನ್ನು ಆಕೆಯ ತಂಗಿಯನ್ನು ಮತ್ತು ಲಾಜರನನ್ನು ಯೇಸು ಪ್ರೀತಿಸುತ್ತಿದ್ದನು.


ಹೀಗಿರಲಾಗಿ ಅವನ ಸಹೋದರಿಯರು, “ಕರ್ತನೇ ಇಗೋ, ನೀನು ಪ್ರೀತಿಸುವವನು ಅಸ್ವಸ್ಥನಾಗಿದ್ದಾನೆ” ಎಂಬುದಾಗಿ ಯೇಸುವಿನ ಬಳಿಗೆ ಹೇಳಿ ಕಳುಹಿಸಿದರು.


ಎಚ್ಚರವಾಗಿರಿ, ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಲ್ಲಿರಿ. ಧೈರ್ಯವಂತರಾಗಿರಿ, ಬಲಗೊಳ್ಳಿರಿ.


ಯೆಹೋವನು ಇಂತೆನ್ನುತ್ತಾನೆ, ‘ಜೆರುಬ್ಬಾಬೆಲನೇ ಈಗ ಧೈರ್ಯವಾಗಿರು; ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವನೇ, ಧೈರ್ಯವಾಗಿರು; ದೇಶೀಯರೇ, ನೀವೆಲ್ಲರೂ ಧೈರ್ಯಗೊಂಡು ಕೆಲಸ ನಡಿಸಿರಿ’ ಇದು ಯೆಹೋವನ ನುಡಿ; ‘ನಾನು ನಿಮ್ಮೊಂದಿಗೆ ಇದ್ದೇನೆ’ ಎಂದು ಸೇನಾಧೀಶ್ವರ ಯೆಹೋವನು ನುಡಿಯುತ್ತಾನೆ.


ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ” ಎಂದು ಹೇಳಿದನು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ದೇವಾಲಯವನ್ನು ಕಟ್ಟುವ ಉದ್ದೇಶದಿಂದ ಸೇನಾಧೀಶ್ವರ ಯೆಹೋವನ ಆ ಮಂದಿರದ ಅಸ್ತಿವಾರವನ್ನು ಹಾಕಿದ ಕಾಲದಲ್ಲಿಯೂ ಇದ್ದ ಪ್ರವಾದಿಗಳ ಬಾಯಿಂದ ಈ ಮಾತುಗಳನ್ನು ಈಗ ಕೇಳುವವರೇ, ನಿಮ್ಮ ಕೈಗಳು ಬಲಗೊಳ್ಳಲಿ!


ಮನುಷ್ಯ ಸದೃಶನು ಪುನಃ ನನ್ನನ್ನು ಮುಟ್ಟಿ ಬಲಪಡಿಸಿದನು.


ಕ್ರಿಮಿಪ್ರಾಯದವನಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ, ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾಮಿಯು ನಿನಗೆ ವಿಮೋಚಕನು” ಎಂದು ಯೆಹೋವನು ಹೇಳುತ್ತಾನೆ.


ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ನಾನು ಮೊರೆಯಿಟ್ಟಾಗ ಸದುತ್ತರವನ್ನು ದಯಪಾಲಿಸಿದಿ; ನನ್ನ ಆತ್ಮಕ್ಕೆ ಬಲಕೊಟ್ಟು ನನ್ನನ್ನು ಧೈರ್ಯಪಡಿಸಿದ್ದೀ.


ಕಡೆಯದಾಗಿ, ನೀವು ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.


ಯೆಹೂದ ಕುಲವೇ, ಇಸ್ರಾಯೇಲ್ ವಂಶವೇ, ನಿಮ್ಮ ಹೆಸರು ಹೇಗೆ ಜನಾಂಗಗಳಲ್ಲಿ ಶಾಪದ ಮಾತಾಗಿ ಸಲ್ಲುತ್ತಿತ್ತೋ, ಹಾಗೆಯೇ ನಾನು ನಿಮ್ಮನ್ನು ರಕ್ಷಿಸಿ ಆಶೀರ್ವದಿಸುವೆನು; ಹೆದರಬೇಡಿರಿ, ನಿಮ್ಮ ಕೈಗಳು ಬಲಗೊಳ್ಳಲಿ!”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು