Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 10:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದರೂ ಅವನು ಮಾತನಾಡುವ ಶಬ್ದವನ್ನು ಕೇಳಿದೆನು; ಅವನ ಮಾತಿನ ಶಬ್ದವು ನನ್ನ ಕಿವಿಗೆ ಬಿದ್ದಾಗ ನಾನು ಮೈಮರೆತು ಬೋರಲು ಬಿದ್ದಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆದರೂ ಅವನು ಮಾತಾಡುವ ಶಬ್ದ ಕೇಳಿಸಿತು. ಅದು ನನ್ನ ಕಿವಿಗೆ ಬಿದ್ದಾಗ ನಾನು ಮೈಮರೆತು ಅಧೋಮುಖವಾಗಿ ಅಡ್ಡಬಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆದರೂ ಅವನು ಮಾತಾಡುವ ಸದ್ದನ್ನು ಕೇಳಿದೆನು; ಅವನ ಮಾತಿನ ಶಬ್ದವು ನನ್ನ ಕಿವಿಗೆ ಬಿದ್ದಾಗ ನಾನು ಮೈಮರೆತು ಅಡಿಮೊಗವಾಗಿ ಅಡ್ಡಬಿದ್ದಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು ಮಾತನಾಡುವದನ್ನು ನಾನು ಕೇಳಿದೆ. ಅವನ ಧ್ವನಿಯನ್ನು ಕೇಳಿದ ಕೂಡಲೇ ನಾನು ಬೋರಲುಬಿದ್ದು ಗಾಢವಾದ ನಿದ್ರೆಯಲ್ಲಿ ಮುಳುಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೂ ನಾನು ಆತನ ಮಾತುಗಳ ಧ್ವನಿಯನ್ನು ಕೇಳಿದೆನು. ಆತನ ಮಾತುಗಳ ಧ್ವನಿಯನ್ನು ಕೇಳಿದಾಗ, ಮುಖ ಕೆಳಗೆಮಾಡಿ ಗಾಢನಿದ್ರೆಯಲ್ಲಿದ್ದೆನು. ನನ್ನ ಮುಖ ನೆಲದ ಕಡೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 10:9
11 ತಿಳಿವುಗಳ ಹೋಲಿಕೆ  

ಅವನು ನನ್ನೊಡನೆ ಮಾತನಾಡುತ್ತಿರುವಲ್ಲಿ ನಾನು ಮೈಮರೆತು ಬೋರಲು ಬಿದ್ದಿದ್ದೆನು. ಆಗ ಅವನು ನನ್ನನ್ನು ಮುಟ್ಟಿ ನಿಲ್ಲಿಸಿ ನನಗೆ,


ಮನುಷ್ಯರಿಗೆ ಗಾಢನಿದ್ರೆ ಹತ್ತುವ ಸಮಯದಲ್ಲಿ, ರಾತ್ರಿಯ ಕನಸುಗಳಿಂದ ಯೋಚನೆಗಳಲ್ಲಿರುವಾಗ


ಹೊತ್ತು ಮುಣುಗುತ್ತಿರುವಾಗ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು; ಕಾರ್ಗತ್ತಲು ಅವನ ಮೇಲೆ ಕವಿಯಿತು; ಅವನು ಮಹಾಭೀತಿಯಿಂದ ಭಯಭ್ರಾಂತನಾದನು.


ಆತನು ಪ್ರಾರ್ಥನೆ ಮುಗಿಸಿ ಎದ್ದು ಶಿಷ್ಯರ ಬಳಿಗೆ ಬಂದು, ಅವರು ದುಃಖದಿಂದ ಬಳಲಿಹೋದವರಾಗಿ ನಿದ್ರೆಹತ್ತಿರುವುದನ್ನು ಕಂಡು,


ಇಷ್ಟರಲ್ಲಿ ಪೇತ್ರನಿಗೂ ಅವನ ಸಂಗಡ ಇದ್ದವರಿಗೂ ನಿದ್ರೆಯಿಂದ ಮೈಭಾರವಾಗಿತ್ತು. ಆದರೆ ಎಚ್ಚರವಾದ ಮೇಲೆ ಅವರು ಆತನ ಮಹಿಮೆಯನ್ನೂ ಆತನ ಸಂಗಡ ನಿಂತಿದ್ದ ಆ ಇಬ್ಬರು ಪುರುಷರನ್ನೂ ಕಂಡರು.


ನಾನು ನಿದ್ರೆಗೊಂಡಿದ್ದರೂ ನನ್ನ ಹೃದಯವು ಎಚ್ಚರಗೊಂಡಿತ್ತು. ಇಗೋ, ಎನ್ನಿನಿಯನು ಕದ ತಟ್ಟಿ, “ಪ್ರಿಯಳೇ, ಕಾಂತಳೇ, ಪಾರಿವಾಳವೇ, ನಿರ್ಮಲೆಯೇ, ಬಾಗಿಲು ತೆಗೆ! ನನ್ನ ತಲೆಯ ಮೇಲೆಲ್ಲಾ ಇಬ್ಬನಿಯು ಬಿದ್ದಿದೆ, ನನ್ನ ಕೂದಲು ರಾತ್ರಿ ಬೀಳುವ ಹನಿಗಳಿಂದ ತುಂಬಿದೆ” ಅಂದನು.


ಮನುಷ್ಯರಿಗೆ ಗಾಢನಿದ್ರೆಯು ಉಂಟಾದಾಗಲೂ, ಹಾಸಿಗೆಯ ಮೇಲೆ ಮಲಗಿದಾಗ ಜೊಂಪುಹತ್ತಿದಾಗಲೂ ಆತನು ಸ್ವಪ್ನದಲ್ಲಿ ರಾತ್ರಿಯ ಕನಸಿನಲ್ಲಿ,


ಹೀಗಿರುವಲ್ಲಿ ಯೆಹೋವನಾದ ದೇವರು ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ತುಂಬಿದನು.


ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ, ನಾನು ಮೊದಲನೆಯವನೂ, ಕಡೆಯವನೂ,


ಇಗೋ, ನರರೂಪ ಸದೃಶನೊಬ್ಬನು ನನ್ನ ತುಟಿಗಳನ್ನು ಮುಟ್ಟಲು ನಾನು ಬಾಯಿಬಿಟ್ಟು ನನ್ನ ಮುಂದೆ ನಿಂತಿರುವವನಿಗೆ, “ಎನ್ನೊಡೆಯನೇ, ಈ ದರ್ಶನದಿಂದ ವೇದನೆಗಳು ನನ್ನನ್ನು ಆಕ್ರಮಿಸಿವೆ, ನಿತ್ರಾಣನಾಗಿದ್ದೇನೆ.


ಅದು ನನಗೆ ಕೇಳಿಸಲು ನನ್ನ ಒಡಲು ನಡುಗಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು. ಕ್ಷಯವು ನನ್ನ ಎಲುಬುಗಳಲ್ಲಿ ಸೇರಿತು. ನಾನು ನಿಂತ ಹಾಗೆಯೇ ನಡುಗಿದೆನು. ವಿಪತ್ಕಾಲವು ನಮ್ಮನ್ನು ಹಿಂಸಿಸುವ ಜನರನ್ನು ಎದುರಾಯಿಸಿ ಅವರ ಮೇಲೆ ಬೀಳುವವರೆಗೂ ನಾನು ಅದಕ್ಕಾಗಿ ತಾಳ್ಮೆಯಿಂದ ಎದುರುನೋಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು