ದಾನಿಯೇಲ 11:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆ ಮೇಲೆ ಅವನ ಮಕ್ಕಳು ಯುದ್ಧ ಸನ್ನಾಹ ಮಾಡಿ ಮಹಾವ್ಯೂಹವಾದ ದೊಡ್ಡ ಸೈನ್ಯವನ್ನು ಕೂಡಿಸುವರು. ಆ ಸೈನ್ಯವು ಮುಂದುವರೆದು ತುಂಬಿತುಳುಕಿ ಹಬ್ಬಿಕೊಳ್ಳುವುದು. ಅವರು ಪುನಃ ಯುದ್ಧಕ್ಕೆ ಹೊರಟು ದಕ್ಷಿಣ ದಿಕ್ಕಿನ ರಾಜನ ದುರ್ಗದವರೆಗೆ ನುಗ್ಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆಮೇಲೆ ಉತ್ತರರಾಜನ ಮಕ್ಕಳು ಯುದ್ಧಸನ್ನಾಹ ಮಾಡಿ ಮಹಾವ್ಯೂಹವಾದ ದೊಡ್ಡ ಸೈನ್ಯವನ್ನು ಕೂಡಿಸುವರು. ಆ ಸೈನ್ಯ ಬೆಳೆದು ತುಂಬಿತುಳುಕುವ ಪ್ರವಾಹದಂತೆ ಹಬ್ಬಿಕೊಳ್ಳುವುದು. ಅವರು ಮತ್ತೆ ಯುದ್ಧಕ್ಕೆ ಹೊರಟು ದಕ್ಷಿಣರಾಜನ ದುರ್ಗದವರೆಗೆ ನುಗ್ಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆಮೇಲೆ ಅವನ ಮಕ್ಕಳು ಯುದ್ಧಸನ್ನಾಹಮಾಡಿ ವ್ಯೂಹವ್ಯೂಹವಾದ ದೊಡ್ಡ ಸೈನ್ಯವನ್ನು ಕೂಡಿಸುವರು; ಆ ಸೈನ್ಯವು ಮುಂದರಿದು ತುಂಬಿ ತುಳುಕಿ ಹಬ್ಬಿಕೊಳ್ಳುವದು; ಅವರು ಪುನಃ ಯುದ್ಧಕ್ಕೆ ಹೊರಟು ದಕ್ಷಿಣರಾಜನ ದುರ್ಗದವರೆಗೆ ನುಗ್ಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 “ಉತ್ತರದ ರಾಜನ ಮಗನು ಯುದ್ಧದ ಸಿದ್ಧತೆಯನ್ನು ಮಾಡುವನು. ಅವರಿಬ್ಬರೂ ಸೇರಿ ಒಂದು ದೊಡ್ಡ ಸೈನ್ಯವನ್ನು ಕೂಡಿಸುವರು. ಆ ಸೈನ್ಯವು ರಭಸದಿಂದ ಬಂದ ಪ್ರವಾಹದಂತೆ ದೇಶದಲ್ಲೆಲ್ಲ ಸಂಚರಿಸಿ ಯುದ್ಧ ಮಾಡುತ್ತಾ ದಕ್ಷಿಣ ರಾಜನ ದುರ್ಗದವರೆಗೆ ನುಗ್ಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವನ ಮಕ್ಕಳು ಯುದ್ಧಕ್ಕೆ ಸಿದ್ಧರಾಗಿ ದೊಡ್ಡ ಸೈನ್ಯ ಕೂಡಿಸುವರು. ಆ ಸೈನ್ಯವು ನಿಬಂಧಿಸಲಾಗದ ಪ್ರವಾಹದಂತೆ ಹರಿದುಬಂದು, ಯುದ್ಧವನ್ನು ಅವನ ಕೋಟೆಯವರೆಗೆ ನಡೆಸುವರು. ಅಧ್ಯಾಯವನ್ನು ನೋಡಿ |