Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ತರುವಾಯ ಉತ್ತರ ದಿಕ್ಕಿನ ರಾಜನು ಹಿಂದಿನ ದಂಡಿಗಿಂತ ದೊಡ್ಡ ದಂಡನ್ನು ಮತ್ತೆ ಕೂಡಿಸಿ ಬಹಳ ವರ್ಷಗಳ ನಂತರ ಮಹಾ ಸೈನ್ಯದಿಂದಲೂ, ಅಧಿಕ ಆಯುಧಗಳ ಸಮೇತವಾಗಿಯೂ ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ತರುವಾಯ ಉತ್ತರರಾಜನು ಹಿಂದಿನ ದಂಡಿಗಿಂತ ದೊಡ್ಡ ದಂಡನ್ನು ಮತ್ತೆ ಕೂಡಿಸಿಕೊಂಡು ಬಹಳ ವರ್ಷಗಳು ಕಳೆದನಂತರ ಮಹಾಸೈನ್ಯ ಸಮೇತ ಅಧಿಕ ಸನ್ನಾಹದಿಂದ ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ತರುವಾಯ ಉತ್ತರರಾಜನು ಹಿಂದಿನ ದಂಡಿಗಿಂತ ದೊಡ್ಡ ದಂಡನ್ನು ಮತ್ತೆ ಕೂಡಿಸಿ ಬಹುವರುಷಗಳ ಕಾಲವಾದ ನಂತರ ಮಹಾಸೈನ್ಯದಿಂದಲೂ ಅಧಿಕಸನ್ನಾಹದಿಂದಲೂ ಸಮೇತನಾಗಿ ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಉತ್ತರದ ರಾಜನು ಇನ್ನೊಂದು ಸೈನ್ಯವನ್ನು ತೆಗೆದುಕೊಂಡು ಬರುವನು. ಈ ಸೈನ್ಯವು ಮೊದಲಿನ ಸೈನ್ಯಕ್ಕಿಂತ ದೊಡ್ಡದಾಗಿರುವದು. ಬಹಳ ವರ್ಷಗಳ ತರುವಾಯ ಅವನು ಧಾಳಿಮಾಡುವನು. ಆ ಸೈನ್ಯವು ಬಹಳ ದೊಡ್ಡದಾಗಿದ್ದು ಹಲವಾರು ಆಯುಧಗಳಿಂದ ಸುಸಜ್ಜಿತವಾಗಿರುವದು. ಆ ಸೈನ್ಯವು ಯುದ್ಧಕ್ಕೆ ಸಿದ್ಧವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಏಕೆಂದರೆ ಉತ್ತರದ ಅರಸನು ಪುನಃ ತಿರುಗಿಕೊಂಡು ಮೊದಲನೆಯದಕ್ಕಿಂತಲೂ ದೊಡ್ಡ ಸೈನ್ಯವನ್ನು ನಿಲ್ಲಿಸಿ, ಕೆಲವು ವರ್ಷಗಳಾದ ಮೇಲೆ ದೊಡ್ಡ ಸೈನ್ಯದ ಸಂಗಡವೂ, ಬಹಳ ಆಯುಧಗಳ ಸಂಗಡವೂ ನಿಶ್ಚಯವಾಗಿ ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:13
6 ತಿಳಿವುಗಳ ಹೋಲಿಕೆ  

ಅದಕ್ಕೆ ಮನುಷ್ಯನ ಹೃದಯವು ಹೋಗಿ ಮೃಗದ ಹೃದಯವು ಬರಲಿ; ಹೀಗೆ ಅದಕ್ಕೆ ಏಳು ವರ್ಷ ಕಳೆಯಲಿ.


ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದುಕೊಂಡು ನಿಂತಿದ್ದ ಪುರುಷನನ್ನು ಕೇಳಲು, ಆ ಪುರುಷನು ಎಡ ಮತ್ತು ಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು. ದೇವಜನರ ಬಲವನ್ನು ಸಂಪೂರ್ಣವಾಗಿ ಮುರಿದುಬಿಟ್ಟ ಮೇಲೆ ಈ ಕಾರ್ಯಗಳೆಲ್ಲಾ ಮುಕ್ತಾಯವಾಗುವವು” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.


ಆದುದರಿಂದ ಅವನ ಮನಸ್ಸು ಗರ್ವದಿಂದ ತುಂಬುವುದು. ಅವನು ಲಕ್ಷಾಂತರ ಸೈನಿಕರನ್ನು ಬೀಳಿಸಿದರೂ ಪ್ರಾಬಲ್ಯಕ್ಕೆ ಬರುವುದಿಲ್ಲ.


ಆ ಕಾಲದಲ್ಲಿ ಅನೇಕರು ದಕ್ಷಿಣ ದಿಕ್ಕಿನ ರಾಜನಿಗೆ ಎದುರು ನಿಲ್ಲುವರು. ಇದಲ್ಲದೆ ನಿನ್ನ ಜನರಲ್ಲಿ ಹಿಂಸಕರು ಕನಸನ್ನು ನಿಜ ಮಾಡಬೇಕೆಂದು ದಂಗೆ ಏಳುವರು. ಆದರೆ ಬಿದ್ದುಹೋಗುವರು.


“ಅಂತ್ಯಕಾಲದಲ್ಲಿ ದಕ್ಷಿಣ ದಿಕ್ಕಿನ ರಾಜನು ಉತ್ತರ ದಿಕ್ಕಿನ ರಾಜನ ಮೇಲೆ ಬೀಳಲು, ಅವನು ರಥಾಶ್ವಬಲಗಳಿಂದಲೂ, ಬಹು ನಾವೆಗಳಿಂದಲೂ ಕೂಡಿ ದಕ್ಷಿಣ ದಿಕ್ಕಿನ ರಾಜನ ಮೇಲೆ ರಭಸವಾಗಿ ಬಿದ್ದು ಎಲ್ಲಾ ನಾಡುನಾಡುಗಳಲ್ಲಿ ನುಗ್ಗಿ, ತುಂಬಿ ತುಳುಕಿ ಹರಡಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು