Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆ ಮೇಲೆ ಅವನು ಕರಾವಳಿಯ ಕಡೆಗೆ ಕಣ್ಣಿಟ್ಟು ಅಲ್ಲಿ ಬಹಳ ದೇಶಗಳನ್ನು ಆಕ್ರಮಿಸುವನು. ಆದರೆ ಅವನು ಮಾಡುವ ನಿಂದೆಯನ್ನು ಒಬ್ಬ ಸರದಾರನು ನಿಲ್ಲಿಸಿ ಬಿಡುವುದಲ್ಲದೆ, ಅದು ಅವನ ಮೇಲೆಯೇ ತಿರುಗುವಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆಮೇಲೆ ಅವನು ಕರಾವಳಿಯ ನಾಡುಗಳ ಕಡೆಗೆ ಕಣ್ಣಿಟ್ಟು ಅಲ್ಲಿಯ ಅನೇಕ ನಾಡುಗಳನ್ನು ಆಕ್ರಮಿಸುವನು. ಆದರೆ ದಳವಾಯಿ ಒಬ್ಬನು ಅವನ ಅಟ್ಟಹಾಸವನ್ನು ತಡೆಗಟ್ಟುವನು. ಅವನು ಮಾಡುವ ಹಾನಿ ಅವನಿಗೇ ತಗಲುವಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆಮೇಲೆ ಅವನು ಕರಾವಳಿಯ ಕಡೆಗೆ ಕಣ್ಣಿಟ್ಟು ಅಲ್ಲಿ ಬಹು ದೇಶಗಳನ್ನು ಆಕ್ರವಿುಸುವನು; ಆದರೆ ಅವನು ಮಾಡುವ ಅವಮಾನವನ್ನು ಒಬ್ಬ ಸರದಾರನು ನಿಲ್ಲಿಸಿಬಿಡುವದಲ್ಲದೆ ಅದು ಅವನಿಗೇ ತಗಲುವಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಆಮೇಲೆ ಉತ್ತರದ ರಾಜನು ಭೂಮಧ್ಯ ಸಾಗರದ ಕರಾವಳಿಯ ದೇಶಗಳ ಕಡೆಗೆ ಗಮನಹರಿಸುವನು. ಅವನು ಅನೇಕ ನಗರಗಳನ್ನು ಗೆಲ್ಲುವನು. ಆದರೆ ಆಗ ಒಬ್ಬ ಸೇನಾಧಿಪತಿಯು ಉತ್ತರದ ರಾಜನ ಅಹಂಕಾರವನ್ನೂ ಸೊಕ್ಕನ್ನೂ ಮುರಿದುಬಿಡುವನು; ಅವನಿಗೆ ಅವಮಾನ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇದಾದ ಮೇಲೆ ಅವನು ತನ್ನ ಮುಖವನ್ನು ದ್ವೀಪಗಳ ಕಡೆಗೆ ತಿರುಗಿಸಿ, ಅನೇಕರನ್ನು ವಶಪಡಿಸಿಕೊಳ್ಳುವನು. ಆದರೆ ಒಬ್ಬ ಅಧಿಪತಿಯು ಅವನ ಅಹಂಕಾರವನ್ನು ಅಡಗಿಸಿಬಿಡುವನು. ಆ ಅಹಂಕಾರವನ್ನು ತನ್ನ ಮೇಲೆ ಹಾಕಿಕೊಳ್ಳದೆ, ಅವನ ಮೇಲೆ ತಿರುಗಿಸಿ ಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:18
10 ತಿಳಿವುಗಳ ಹೋಲಿಕೆ  

ಎಫ್ರಾಯೀಮು ಯೆಹೋವನನ್ನು ಅತಿ ತೀಕ್ಷ್ಣವಾಗಿ ರೇಗಿಸಿದೆ, ಆದಕಾರಣ ಅದರ ಒಡೆಯನು ಅದರ ರಕ್ತಾಪರಾಧವನ್ನು ಅದರ ಮೇಲೆ ಹೊರಿಸಿ, ಅದು ಮಾಡಿದ ಅವಮಾನವನ್ನು ಅದಕ್ಕೆ ಹಿಂದಿರುಗಿಸುವನು.


ಯೆಹೋವನು ಅವರಿಗೆ ಭಯಂಕರನಾಗುವನು; ಲೋಕದ ದೇವರುಗಳನ್ನೆಲ್ಲಾ ನಾಶಮಾಡುವನು; ಸಮಸ್ತ ಜನರು, ಪ್ರತಿಯೊಂದು ಪ್ರಾಂತ್ಯದ ನಿವಾಸಿಗಳು ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು.


ಜನಾಂಗಗಳೇ, ಯೆಹೋವನ ವಾಕ್ಯವನ್ನು ಕೇಳಿರಿ, ದೂರ ದ್ವೀಪಗಳಲ್ಲಿ ಸಾರಿರಿ! ಇಸ್ರಾಯೇಲರನ್ನು ಚದರಿಸಿದಾತನು, ‘ಮಂದೆಯನ್ನು ಕಾಯುವ ಕುರುಬನಂತೆ ಅವರನ್ನು ಕೂಡಿಸಿ ಕಾಪಾಡುವನು’ ಎಂದು ಪ್ರಕಟಿಸಿರಿ. ಯೆಹೋವನು ಯಾಕೋಬ್ಯರನ್ನು ವಿಮೋಚಿಸಿದ್ದಾನಲ್ಲಾ,


“ಕಿತ್ತೀಮ್ ದ್ವೀಪಗಳಿಗೆ ಹೋಗಿ ನೋಡಿರಿ, ಕೇದಾರಿಗೆ ಕಳುಹಿಸಿ ವಿಚಾರಮಾಡಿರಿ, ಇಂತಹ ಕಾರ್ಯವು ಎಲ್ಲಿಯಾದರೂ ನಡೆಯಿತೇ ಎಂದು ಚೆನ್ನಾಗಿ ಆಲೋಚಿಸಿರಿ.


ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವುದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.


ನಿನ್ನ ಹುಟ್ಟುಗೋಲನ್ನು ಬಾಷಾನಿನ ಓಕ್ ಮರದಿಂದ ಮಾಡಿ, ಕಿತ್ತೀಮ್ ದ್ವೀಪದ ಹಲಿಗೆಯಿಂದ ನಿನ್ನ ಹಡಗಿನ ಮೇಲ್ಮಾಳಿಗೆಯನ್ನು ಕಟ್ಟಿ, ಅದನ್ನು ದಂತದಿಂದ ಕೆತ್ತಿದ್ದಾರೆ.


ಅವರ ಮಧ್ಯದಲ್ಲಿ ಒಂದು ಸೂಚಕಕಾರ್ಯವನ್ನು ಮಾಡುವೆನು; ನನ್ನ ಸುದ್ದಿಯನ್ನು ಕೇಳದೆಯೂ, ನನ್ನ ಮಹಿಮೆಯನ್ನು ನೋಡದೆಯೂ ಇರುವ ತಾರ್ಷೀಷ್, ಪೂಲ್, ಬಿಲ್ಲುಗಾರರಿಗೆ ಪ್ರಸಿದ್ಧಸ್ಥಳವಾದ ಲೂದ್, ತೂಬಲ್, ಯಾವಾನ್ ಎಂಬ ಜನಾಂಗಗಳು ಮತ್ತು ದೂರವಾದ ದ್ವೀಪನಿವಾಸಿಗಳು ಇವರೆಲ್ಲರ ಬಳಿಗೆ ಹತಶೇಷರನ್ನು ಕಳುಹಿಸುವೆನು; ಇವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.”


ಆಗ ಅದೋನೀಬೆಜೆಕನು, “ಕೈ ಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾನೆ” ಅಂದನು. ಅವರು ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬರಲು ಅವನು ಅಲ್ಲಿ ಸತ್ತನು.


ಅಹಷ್ವೇರೋಷ್ ರಾಜನು ತನ್ನ ರಾಜ್ಯಕ್ಕೆ ಸೇರಿರುವ ಎಲ್ಲಾ ದೇಶಗಳಿಗೂ ಮತ್ತು ಸಮುದ್ರದ್ವೀಪಗಳಿಗೂ ತೆರಿಗೆಯನ್ನು ವಿಧಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು