ದಾನಿಯೇಲ 11:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಾನು ಈಗ ಸತ್ಯಾಂಶವನ್ನು ನಿನಗೆ ತಿಳಿಸುವೆನು, “ಇಗೋ, ಪಾರಸಿಯ ದೇಶದಲ್ಲಿ ಇನ್ನು ಮೂವರು ರಾಜರು ಏಳುವರು; ನಾಲ್ಕನೆಯ ರಾಜನು ಎಲ್ಲರಿಗಿಂತಲೂ ಅಧಿಕ ಧನವಂತನಾಗಿರುವನು; ಅವನು ತನ್ನ ಧನದಿಂದ ಪ್ರಬಲನಾಗಿ ಗ್ರೀಕ್ ರಾಜ್ಯಕ್ಕೆ ವಿರುದ್ಧವಾಗಿ ತನ್ನ ಬಲವನ್ನೆಲ್ಲಾ ಎಬ್ಬಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ಈಗ ಸತ್ಯಾಂಶವನ್ನು ತಿಳಿಸುತ್ತೇನೆ, ಕೇಳು: ಪರ್ಷಿಯ ದೇಶದಲ್ಲಿ ಇನ್ನೂ ಮೂವರು ರಾಜರು ಏಳುವರು. ನಾಲ್ಕನೆಯ ರಾಜನು ಎಲ್ಲರಿಗಿಂತಲೂ ಅಧಿಕ ಧನವಂತನಾಗಿರುವನು. ಅವನು ತನ್ನ ಧನದಿಂದ ಪ್ರಬಲನಾಗಿ ಗ್ರೀಕ್ ರಾಜ್ಯಕ್ಕೆ ವಿರುದ್ಧ ತನ್ನ ಬಲವನ್ನೆಲ್ಲ ಪ್ರಯೋಗಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಈಗ ಸತ್ಯಾಂಶವನ್ನು ನಿನಗೆ ತಿಳಿಸುವೆನು. ಇಗೋ, ಪಾರಸಿಯ ದೇಶದಲ್ಲಿ ಇನ್ನು ಮೂವರು ರಾಜರು ಏಳುವರು; ನಾಲ್ಕನೆಯ ರಾಜನು ಎಲ್ಲರಿಗಿಂತಲೂ ಅಧಿಕ ಧನವಂತನಾಗಿರುವನು; ಅವನು ತನ್ನ ಧನದಿಂದ ಪ್ರಬಲನಾಗಿ ಗ್ರೀಕ್ ರಾಜ್ಯಕ್ಕೆ ವಿರುದ್ಧವಾಗಿ ತನ್ನ ಬಲವನ್ನೆಲ್ಲಾ ಎಬ್ಬಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ದಾನಿಯೇಲನೇ, ಈಗ ನಾನು ನಿನಗೆ ಸತ್ಯಾಂಶವನ್ನು ಹೇಳುತ್ತೇನೆ ಕೇಳು. ಪಾರಸಿಯ ದೇಶದಲ್ಲಿ ಇನ್ನೂ ಮೂರು ಜನ ರಾಜರು ಆಳುವರು. ಆಮೇಲೆ ನಾಲ್ಕನೆಯ ರಾಜನು ಬರುವನು. ನಾಲ್ಕನೆಯ ರಾಜನು ತನಗಿಂತ ಮುಂಚೆ ಆಗಿ ಹೋದ ಪಾರಸಿಯ ದೇಶದ ಎಲ್ಲ ರಾಜರಿಗಿಂತ ಅಧಿಕ ಧನವಂತನಾಗಿರುವನು. ಆ ನಾಲ್ಕನೆಯ ರಾಜನು ತನ್ನ ಪ್ರಾಬಲ್ಯವನ್ನು ಬೆಳೆಸಿಕೊಳ್ಳುವದಕ್ಕೆ ಧನವನ್ನು ಬಳಸಿಕೊಳ್ಳುವನು. ಎಲ್ಲರೂ ಗ್ರೀಸ್ ರಾಜ್ಯದ ವಿರುದ್ಧವಾಗುವಂತೆ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಾನು ಈಗ ಸತ್ಯವನ್ನು ತಿಳಿಸುತ್ತೇನೆ. ಪಾರಸಿಯ ದೇಶದಲ್ಲಿ ಇನ್ನೂ ಮೂರು ಅರಸರು ಏಳುವರು. ನಾಲ್ಕನೆಯವನು ಅವರೆಲ್ಲರಿಗಿಂತಲೂ ಬಹಳ ಐಶ್ವರ್ಯವಂತನಾಗಿರುವನು. ಅವನು ತನ್ನ ಐಶ್ವರ್ಯದಿಂದಾಗುವ ಸಾಮರ್ಥ್ಯದಿಂದ ಗ್ರೀಕ್ ರಾಜ್ಯಕ್ಕೆ ವಿರೋಧವಾಗಿ ಎಲ್ಲರನ್ನೂ ಹುರಿದುಂಬಿಸುವನು. ಅಧ್ಯಾಯವನ್ನು ನೋಡಿ |