ದಾನಿಯೇಲ 11:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವನ ಸ್ಥಾನದಲ್ಲಿ ಮತ್ತೊಬ್ಬನು ಎದ್ದು, ರಾಜ್ಯದಲ್ಲಿ ಶಿರೋಮಣಿಯಾದ ದೇಶವನ್ನೆಲ್ಲ ದೋಚಿಕೊಳ್ಳತಕ್ಕವನನ್ನು ನೇಮಿಸುವನು. ಅವನು ಕೆಲವು ದಿನಗಳೊಳಗೆ ನಾಶವಾಗುವನು. ಅವನ ನಾಶ ಕೋಪದ ಪೆಟ್ಟಿನಿಂದಲ್ಲ, ಯುದ್ಧದಿಂದಲೂ ಅಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 “ಅವನ ಸ್ಥಾನದಲ್ಲಿ ಮತ್ತೊಬ್ಬನು ರಾಜ್ಯವಾಳುವನು. ಇವನು ರಾಜ್ಯದಲ್ಲಿನ ಶಿರೋಮಣಿಯಂಥ ನಾಡನ್ನೆಲ್ಲ ದೋಚಿಕೊಳ್ಳಬಲ್ಲ ಉದ್ಯೋಗಿಯನ್ನು ನೇಮಿಸುವನು. ಆದರೆ ಕೆಲವೇ ದಿನಗಳಲ್ಲಿ ಅವನು ಕದನದಿಂದ ಅಲ್ಲ, ಕೋಪದಿಂದ ಅಲ್ಲ, ಹಾಗೆಯೇ ಮಡಿದುಹೋಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವನ ಸ್ಥಾನದಲ್ಲಿ ಮತ್ತೊಬ್ಬನು ಎದ್ದು ರಾಜ್ಯದಲ್ಲಿ ಶಿರೋಮಣಿಯಾದ ದೇಶವನ್ನೆಲ್ಲ ದೋಚಿಕೊಳ್ಳತಕ್ಕವನನ್ನು ನೇವಿುಸುವನು; ಆಹಾ, ಕೆಲವು ದಿನಗಳೊಳಗೆ ನಾಶವಾಗುವನು; ಆದರೆ ಕೋಪದ ಪೆಟ್ಟಿನಿಂದಲ್ಲ, ಯುದ್ಧದಿಂದಲೂ ಅಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 “ಉತ್ತರದ ರಾಜನ ತರುವಾಯ ಒಬ್ಬ ಹೊಸ ರಾಜನು ಬರುವನು. ಅವನು ಬಹು ವೈಭವಯುಕ್ತವಾದ ಜೀವನವನ್ನು ನಡೆಸಲಿಚ್ಛಿಸಿ ಅದಕ್ಕೆ ಬೇಕಾಗುವ ಹಣವನ್ನು ಸಂಗ್ರಹಿಸಲು ಒಬ್ಬ ತೆರಿಗೆ ಅಧಿಕಾರಿಯನ್ನು ಕಳುಹಿಸುವನು. ಆದರೆ ಕೆಲವು ವರ್ಷಗಳಲ್ಲಿ ಆ ರಾಜನು ನಾಶವಾಗುವನು. ಆದರೆ ಅವನು ಯುದ್ಧದಲ್ಲಿ ಮಡಿಯುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವನ ಉತ್ತರಾಧಿಕಾರಿಯು ಅರಸೊತ್ತಿಗೆಯ ಸೊಗಸನ್ನು ಕಾದುಕೊಳ್ಳುವುದಕ್ಕಾಗಿ ಸುಂಕ ವಸೂಲಿ ಮಾಡುವವನನ್ನು ಕಳುಹಿಸುವನು. ಆದರೂ ಕೆಲವೇ ವರ್ಷಗಳಲ್ಲಿ ಅವನು ನಾಶ ಹೊಂದುವನು. ಇದು ಕೋಪದಿಂದಾಗಲಿ ಇಲ್ಲವೆ ಯುದ್ಧದಿಂದಾಗಲಿ ಆಗುವುದಿಲ್ಲ. ಅಧ್ಯಾಯವನ್ನು ನೋಡಿ |