Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನೆಮ್ಮದಿಯ ಕಾಲದಲ್ಲಿ ಸಂಸ್ಥಾನದ ಫಲವತ್ತಾದ ಪ್ರದೇಶಗಳ ಮೇಲೆ ನುಗ್ಗುವನು. ತಂದೆ, ತಾತಂದಿರು ಮಾಡದ ಕಾರ್ಯಗಳನ್ನು ಮಾಡುವನು, ಸೂರೆ, ಸುಲಿಗೆ, ಕೊಳ್ಳೆ ಹೊಡೆದವುಗಳನ್ನು ತನ್ನವರಿಗೆ ಚೆಲ್ಲಿಬಿಡುವನು. ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕೊನೆಯವರೆಗೂ ಮುಂದುವರೆಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನೆಮ್ಮದಿಯ ಕಾಲದಲ್ಲಿ ಸಂಸ್ಥಾನದ ಫಲವತ್ತಾದ ಪ್ರದೇಶಗಳ ಮೇಲೆ ದಾಳಿಮಾಡುವನು. ತಂದೆತಾತಂದಿರು ಮಾಡದಂಥ ಕಾರ್ಯಗಳನ್ನು ಮಾಡುವನು. ಸೂರೆ-ಸುಲಿಗೆ-ಕೊಳ್ಳೆಹೊಡೆದವುಗಳನ್ನು ತನ್ನವರಿಗೆ ಚೆಲ್ಲಿಬಿಡುವನು. ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕೊನೆಯವರೆಗೂ ಮುಂದುವರೆಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನೆಮ್ಮದಿಯ ಕಾಲದಲ್ಲಿ ಸಂಸ್ಥಾನದ ಫಲವತ್ತಾದ ಪ್ರದೇಶಗಳ ಮೇಲೆ ನುಗ್ಗುವನು; ತಂದೆತಾತಂದಿರು ಮಾಡದ ಕಾರ್ಯಗಳನ್ನು ಮಾಡುವನು; ಸೂರೆಸುಲಿಗೆ ಕೊಳ್ಳೆಹೊಡೆದವುಗಳನ್ನು ತನ್ನವರಿಗೆ ಚೆಲ್ಲಿಬಿಡುವನು; ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕ್ಲುಪ್ತಕಾಲದ ತನಕ ಕಲ್ಪಿಸುತ್ತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ಶ್ರೀಮಂತ ದೇಶಗಳು ನೆಮ್ಮದಿಯಿಂದಿರುವಾಗ ಈ ಕ್ರೂರಿಯು ಪೂರ್ವ ಸೂಚನೆಯಿಲ್ಲದೆ ಅವುಗಳ ಮೇಲೆ ದಾಳಿ ಮಾಡುವನು. ಅವನು ಸರಿಯಾದ ಸಮಯಕ್ಕೆ ದಾಳಿಮಾಡುವನು; ಅವನ ಪೂರ್ವಿಕರು ವಿಫಲರಾದ ದೇಶಗಳಲ್ಲಿ ಜಯ ಸಂಪಾದಿಸುವನು. ಅವನು ಸೋಲಿಸಿದ ದೇಶಗಳನ್ನು ಕೊಳ್ಳೆಹೊಡೆದು ದೊರೆತ ಸಂಪತ್ತನ್ನು ತನ್ನ ಅನುಯಾಯಿಗಳಲ್ಲಿ ಹಂಚುವನು. ಅವನು ಭದ್ರವಾದ ನಗರಗಳನ್ನು ಹಿಡಿದುಕೊಳ್ಳಲು ಮತ್ತು ನಾಶಮಾಡಲು ಯೋಜನೆಗಳನ್ನು ಮಾಡುವನು. ಅವನಿಗೆ ಜಯಸಿಕ್ಕಿದರೂ ಅದು ಸ್ವಲ್ಪ ಕಾಲದವರೆಗೆ ಮಾತ್ರ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನೆಮ್ಮದಿಯ ಕಾಲದಲ್ಲಿ ಸಂಸ್ಥಾನಗಳ ಫಲವತ್ತಾದ ಪ್ರದೇಶಗಳಲ್ಲಿ ನುಗ್ಗಿ, ತಂದೆ ತಾತಂದಿರು ಮಾಡದ ಕಾರ್ಯಗಳನ್ನು ಮಾಡುವನು. ಸೂರೆ, ಸುಲಿಗೆ, ಕೊಳ್ಳೆ ಹೊಡೆದವುಗಳನ್ನು, ತನ್ನನ್ನು ಅವರಿಗೆ ಹಂಚುವನು. ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕ್ಲುಪ್ತಕಾಲದ ತನಕ ಕಲ್ಪಿಸುತ್ತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:24
11 ತಿಳಿವುಗಳ ಹೋಲಿಕೆ  

ಯೇಸು ಅವರ ಆಲೋಚನೆಗಳನ್ನು ತಿಳಿದು, “ನೀವು ಏಕೆ ನಿಮ್ಮ ಮನಸ್ಸಿನಲ್ಲಿ ದುರಾಲೋಚನೆಯನ್ನು ಮಾಡುತ್ತಿದ್ದೀರಿ?


ಪರಾತ್ಪರನಾದ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಂಡು ಪರಾತ್ಪರನಾದ ದೇವರ ಭಕ್ತರನ್ನು ಬಾಧಿಸಿ ಕಟ್ಟಳೆಯ ಕಾಲಗಳನ್ನೂ, ಧರ್ಮವಿಧಿಗಳನ್ನೂ ಮಾರ್ಪಡಿಸಲು ಮನಸ್ಸು ಮಾಡುವನು; ಆ ಭಕ್ತರು ಒಂದುಕಾಲ, ಎರಡುಕಾಲ, ಅರ್ಧಕಾಲ ಅವನ ಕೈವಶವಾಗಿರುವರು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಗ ನಿನ್ನ ಮನಸ್ಸಿನಲ್ಲಿ ಆಲೋಚನೆಗಳು ಹುಟ್ಟುವವು ಮತ್ತು ನೀನು ಕೆಟ್ಟ ಯೋಚನೆಯನ್ನು ಮಾಡುವಿ.


ಅವನು ತನ್ನ ಒಳಗಿನ ಯೋಚನೆಯಂತೆಯೇ ಇದ್ದಾನೆ, ಉಣ್ಣು, ಕುಡಿ ಎಂದು ಹೇಳಿದರೂ ನಿನ್ನಲ್ಲಿ ಅವನಿಗೆ ಪ್ರೀತಿಯಿಲ್ಲ.


ಉದಾರಿಯ ಕಟಾಕ್ಷವನ್ನು ಅನೇಕರು ಕೋರುವರು, ದಾನಶೂರನಿಗೆ ಪ್ರತಿಯೊಬ್ಬನೂ ಸ್ನೇಹಿತನಲ್ಲವೇ.


ಕೊಡುವವನ ದೃಷ್ಟಿಗೆ ಲಂಚವು ಚಿಂತಾಮಣಿಯಾಗಿದೆ, ಎಲ್ಲಿ ಹೋದರೂ ಅವನಿಗೆ ಅನುಕೂಲವೇ.


ಅವರು ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ, ಸಾರವುಳ್ಳ ಭೂಮಿಯನ್ನೂ, ಸಮಸ್ತ ವಿಧವಾದ ಉತ್ತಮ ವಸ್ತುಗಳಿಂದ ತುಂಬಿದ ಮನೆಗಳನ್ನೂ, ತೋಡಿದ ಬಾವಿಗಳನ್ನೂ, ದ್ರಾಕ್ಷಿತೋಟಗಳನ್ನೂ, ಎಣ್ಣೇಮರಗಳ ತೋಪುಗಳನ್ನೂ, ಹೆಚ್ಚಾದ ಹಣ್ಣಿನ ಮರ ಇವುಗಳನ್ನೂ ವಶಮಾಡಿಕೊಂಡು ಚೆನ್ನಾಗಿ ತಿಂದು, ಕುಡಿದು ತೃಪ್ತರಾಗಿ ಕೊಬ್ಬಿ, ನೀನು ಕೊಟ್ಟ ಸಮೃದ್ಧಿಯಲ್ಲಿ ಆನಂದಿಸುತ್ತಿದ್ದರು.


ಮತ್ತು ಅವರು ಬಾಳ್‍ಬೆರೀತಿನ ದೇವಸ್ಥಾನದಿಂದ ಎಪ್ಪತ್ತು ರೂಪಾಯಿಗಳನ್ನು ಅವನಿಗೆ ಕೊಟ್ಟರು. ಅವನು ಈ ಹಣದಿಂದ ಕೆಲವು ಕಾಕಪೋಕರನ್ನು ಕೂಡಿಸಿ,


ಭೂಮಿಯು ಸಾರವಾದುದೋ ಅಥವಾ ನಿಸ್ಸಾರವಾದುದೋ, ಮರಗಳುಳ್ಳದ್ದೋ ಅಥವಾ ಬಯಲುಪ್ರದೇಶವೋ ಎಂದು ನೋಡಿ ತಿಳಿದುಕೊಳ್ಳಬೇಕು. ಅದಲ್ಲದೆ ನೀವು ಧೈರ್ಯವುಳ್ಳವರಾಗಿದ್ದು ಆ ದೇಶದ ಉತ್ಪನ್ನಗಳಲ್ಲಿ ಕೆಲವನ್ನು ತರಬೇಕು” ಎಂದು ಹೇಳಿದನು. ಆಗ ದ್ರಾಕ್ಷಾಲತೆಗಳ ಪ್ರಥಮ ಫಲದ ಕಾಲವಾಗಿತ್ತು.


ಅವುಗಳನ್ನು ಒಳ್ಳೆಯ ಮೇವಿನಿಂದ ಮೇಯಿಸುವೆನು; ಅವುಗಳ ಹುಲ್ಲುಗಾವಲು ಇಸ್ರಾಯೇಲಿನ ಎತ್ತರವಾದ ಬೆಟ್ಟಗಳಲ್ಲಿರುವುದು; ಅವು ಒಳ್ಳೆಯ ಮಂದೆಯಲ್ಲಿ ಮಲಗಿ; ಇಸ್ರಾಯೇಲಿನ ಪರ್ವತಗಳಲ್ಲಿ ಪುಷ್ಟಿಯುಳ್ಳ ಮೇವನ್ನು ಮೇಯುವವು.


ಅವನ ಸಂಗಡ ಒಪ್ಪಂದ ಮಾಡಿಕೊಂಡವನಿಗೆ ಕೂಡಲೆ ಮೋಸ ಮಾಡುವನು; ಸ್ವಲ್ಪ ಜನರ ಸಹಾಯದಿಂದ ಏಳಿಗೆಯಾಗಿ ಬಲಗೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು