Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವನು ದೊಡ್ಡ ದಂಡೆತ್ತಿ ದಕ್ಷಿಣ ದಿಕ್ಕಿನ ರಾಜನ ವಿರುದ್ಧವಾಗಿ ತನ್ನ ರಾಜ್ಯದ ಬಲವನ್ನೆಲ್ಲ ಕೂಡಿಸಿ ಧೈರ್ಯದಿಂದ ಹೊರಡುವನು. ದಕ್ಷಿಣ ದಿಕ್ಕಿನ ರಾಜನು ಅತ್ಯಧಿಕ ಬಲವುಳ್ಳ ಮಹಾ ಸೈನ್ಯಸಮೇತನಾಗಿ ಯುದ್ಧಕ್ಕೆ ಹೊರಡುವನು. ಆದರೆ ನಿಲ್ಲಲಾರನು, ಅವನು ಸೋಲುವ ಹಾಗೆ ಕುಯುಕ್ತಿಗಳನ್ನು ಕಲ್ಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 “ಅವನು ಧೈರ್ಯತಂದುಕೊಂಡು, ದೊಡ್ಡ ದಂಡೆತ್ತಿ, ದಕ್ಷಿಣರಾಜನಿಗೆ ವಿರುದ್ಧ ತನ್ನ ರಾಜ್ಯದ ಶಕ್ತಿಯನ್ನೆಲ್ಲ ಕೂಡಿಸುವನು. ದಕ್ಷಿಣರಾಜನಾದರೋ ಅತ್ಯಧಿಕ ಬಲವುಳ್ಳ ಮಹಾಸೈನ್ಯ ಸಮೇತನಾಗಿ ಯುದ್ಧಕ್ಕೆ ಹೊರಡುವನು. ಆದರೆ ಜಯಗಳಿಸನು. ಕುಯುಕ್ತಿಗಳಿಗೆ ಗುರಿಯಾಗಿ ಸೋಲನ್ನು ಅಪ್ಪಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವನು ದೊಡ್ಡ ದಂಡೆತ್ತಿ ದಕ್ಷಿಣರಾಜನಿಗೆ ವಿರುದ್ಧವಾಗಿ ತನ್ನ ರಾಜ್ಯದ ಬಲವನ್ನೆಲ್ಲ ಕೂಡಿಸಿ ಧೈರ್ಯತಂದುಕೊಳ್ಳಲು ದಕ್ಷಿಣರಾಜನು ಅತ್ಯಧಿಕ ಬಲವುಳ್ಳ ಮಹಾ ಸೈನ್ಯಸಮೇತನಾಗಿ ಯುದ್ಧಕ್ಕೆ ಹೊರಡುವನು; ಆದರೆ ನಿಲ್ಲಲಾರನು; ಅವನು ಸೋಲುವ ಹಾಗೆ ಕುಯುಕ್ತಿಗಳನ್ನು ಕಲ್ಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ಕ್ರೂರನಾದ ಮತ್ತು ವಂಚಕನಾದ ಆ ರಾಜನ ಹತ್ತಿರ ಅತಿ ದೊಡ್ಡ ಸೈನ್ಯವಿರುವದು. ಅವನು ಆ ಸೈನ್ಯದಿಂದ ತನ್ನ ಶಕ್ತಿಯನ್ನು ಪ್ರದರ್ಶಿಸಲು ಧೈರ್ಯ ತಂದುಕೊಂಡು ದಕ್ಷಿಣದ ರಾಜನ ಮೇಲೆ ದಾಳಿ ಮಾಡುವನು. ದಕ್ಷಿಣದ ರಾಜನು ಅತಿದೊಡ್ಡದಾದ ಮತ್ತು ಶಕ್ತಿಶಾಲಿಯಾದ ಸೈನ್ಯವನ್ನು ಕೂಡಿಸಿಕೊಂಡು ಯುದ್ಧಕ್ಕೆ ಹೋಗುವನು. ಆದರೆ ಅವನ ವೈರಿಗಳು ರಹಸ್ಯವಾಗಿ ಒಂದು ಕುಯುಕ್ತಿಯನ್ನು ಮಾಡುವರು. ದಕ್ಷಿಣದ ರಾಜನು ಸೋಲುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅವನು ದಕ್ಷಿಣದ ಅರಸನಿಗೆ ವಿರೋಧವಾಗಿ ತನ್ನ ಶಕ್ತಿಯಿಂದಲೂ ಧೈರ್ಯದಿಂದಲೂ ದೊಡ್ಡ ಸೈನ್ಯದ ಸಂಗಡ ಯುದ್ಧಕ್ಕೆ ಸನ್ನದ್ಧನಾಗುವನು, ಆದರೆ ನಿಲ್ಲಲಾರದೆ ಹೋಗುವನು. ಏಕೆಂದರೆ ಅವನಿಗೆ ವಿರೋಧವಾಗಿ ಕುಯುಕ್ತಿಗಳನ್ನು ಕಲ್ಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:25
6 ತಿಳಿವುಗಳ ಹೋಲಿಕೆ  

ನಾನು ಈಗ ಸತ್ಯಾಂಶವನ್ನು ನಿನಗೆ ತಿಳಿಸುವೆನು, “ಇಗೋ, ಪಾರಸಿಯ ದೇಶದಲ್ಲಿ ಇನ್ನು ಮೂವರು ರಾಜರು ಏಳುವರು; ನಾಲ್ಕನೆಯ ರಾಜನು ಎಲ್ಲರಿಗಿಂತಲೂ ಅಧಿಕ ಧನವಂತನಾಗಿರುವನು; ಅವನು ತನ್ನ ಧನದಿಂದ ಪ್ರಬಲನಾಗಿ ಗ್ರೀಕ್ ರಾಜ್ಯಕ್ಕೆ ವಿರುದ್ಧವಾಗಿ ತನ್ನ ಬಲವನ್ನೆಲ್ಲಾ ಎಬ್ಬಿಸುವನು.


ದುರಾಶೆಯುಳ್ಳವನು ಜಗಳವನ್ನೆಬ್ಬಿಸುವನು, ಯೆಹೋವನಲ್ಲಿ ಭರವಸವಿಡುವವನು ಪುಷ್ಟನಾಗುವನು.


ಕೋಪಿಷ್ಠನು ವ್ಯಾಜ್ಯವನ್ನೆಬ್ಬಿಸುವನು, ದೀರ್ಘಶಾಂತನು ಜಗಳವನ್ನು ಶಮನಪಡಿಸುವನು.


ಆ ಮೇಲೆ ಅವನ ಮಕ್ಕಳು ಯುದ್ಧ ಸನ್ನಾಹ ಮಾಡಿ ಮಹಾವ್ಯೂಹವಾದ ದೊಡ್ಡ ಸೈನ್ಯವನ್ನು ಕೂಡಿಸುವರು. ಆ ಸೈನ್ಯವು ಮುಂದುವರೆದು ತುಂಬಿತುಳುಕಿ ಹಬ್ಬಿಕೊಳ್ಳುವುದು. ಅವರು ಪುನಃ ಯುದ್ಧಕ್ಕೆ ಹೊರಟು ದಕ್ಷಿಣ ದಿಕ್ಕಿನ ರಾಜನ ದುರ್ಗದವರೆಗೆ ನುಗ್ಗುವರು.


ದಕ್ಷಿಣ ರಾಜ್ಯದ ರಾಜನೂ, ಅವನ ಸರದಾರರಲ್ಲಿ ಒಬ್ಬನೂ ಬಲಗೊಳ್ಳುವರು. ಸರದಾರನು ರಾಜನಿಗಿಂತ ಹೆಚ್ಚು ಬಲಗೊಂಡು ಪ್ರಭುತ್ವಕ್ಕೆ ಬರುವನು. ಅವನ ರಾಜ್ಯವು ದೊಡ್ಡ ರಾಜ್ಯವಾಗಿರುವುದು.


“ಅಂತ್ಯಕಾಲದಲ್ಲಿ ದಕ್ಷಿಣ ದಿಕ್ಕಿನ ರಾಜನು ಉತ್ತರ ದಿಕ್ಕಿನ ರಾಜನ ಮೇಲೆ ಬೀಳಲು, ಅವನು ರಥಾಶ್ವಬಲಗಳಿಂದಲೂ, ಬಹು ನಾವೆಗಳಿಂದಲೂ ಕೂಡಿ ದಕ್ಷಿಣ ದಿಕ್ಕಿನ ರಾಜನ ಮೇಲೆ ರಭಸವಾಗಿ ಬಿದ್ದು ಎಲ್ಲಾ ನಾಡುನಾಡುಗಳಲ್ಲಿ ನುಗ್ಗಿ, ತುಂಬಿ ತುಳುಕಿ ಹರಡಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು