ದಾನಿಯೇಲ 11:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅನಂತರ ಉತ್ತರ ದಿಕ್ಕಿನ ರಾಜನು ಬಹಳ ಆಸ್ತಿಯನ್ನು ಐಶ್ವರ್ಯವನ್ನು ಕೊಳ್ಳೆಹೊಡೆದು ಸ್ವದೇಶಕ್ಕೆ ಹಿಂದಿರುಗುವನು. ಅವನ ಮನಸ್ಸು ಪರಿಶುದ್ಧ ನಿಬಂಧನೆಗೆ ವಿರುದ್ಧವಾಗಿರುವುದು. ಅವನು ತನಗೆ ಇಷ್ಟ ಬಂದಂತೆ ಮಾಡಿ ಮತ್ತೆ ಸ್ವದೇಶವನ್ನು ಸೇರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅನಂತರ ಉತ್ತರದ ಆ ನೀಚರಾಜನು ಬಹು ಆಸ್ತಿಯನ್ನು ಕೊಳ್ಳೆಹೊಡೆದು ಸ್ವದೇಶಕ್ಕೆ ಹಿಂತಿರುಗುವನು. ಅವನ ಮನಸ್ಸು ಪವಿತ್ರ ಒಡಂಬಡಿಕೆಗೆ ವಿರುದ್ಧವಾಗಿರುವುದು. ಇಷ್ಟಬಂದ ಹಾಗೆ ವರ್ತಿಸಿ ಮತ್ತೆ ಸ್ವದೇಶವನ್ನು ಸೇರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅನಂತರ ಉತ್ತರರಾಜನು ಬಹು ಆಸ್ತಿಯನ್ನು ಕೊಳ್ಳೆಹೊಡೆದು ಸ್ವದೇಶಕ್ಕೆ ಹಿಂದಿರುಗುವನು; ಅವನ ಮನಸ್ಸು ಪರಿಶುದ್ಧ ನಿಬಂಧನೆಗೆ ವಿರುದ್ಧವಾಗಿರುವದು; ಅವನು ಮಾಡುವಷ್ಟು ಮಾಡಿ ಮತ್ತೆ ಸ್ವದೇಶವನ್ನು ಸೇರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 “ಉತ್ತರದ ರಾಜನು ಅಪಾರ ಸಂಪತ್ತಿನೊಂದಿಗೆ ಸ್ವದೇಶಕ್ಕೆ ಮರಳುವನು. ಆಗ ಅವನು ಪರಿಶುದ್ಧ ನಿಬಂಧನೆಗೆ ವಿರುದ್ಧವಾಗಿ ಆಚರಿಸುವ ತೀರ್ಮಾನ ಮಾಡುವನು. ಅವನು ಯೋಚಿಸಿದಂತೆ ಮಾಡಿ ತನ್ನ ದೇಶಕ್ಕೆ ಹಿಂತಿರುಗಿ ಹೋಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಆಗ ಉತ್ತರದ ಅರಸನು ಮಹಾ ಐಶ್ವರ್ಯದೊಂದಿಗೆ ಸ್ವದೇಶಕ್ಕೆ ಹಿಂದಿರುಗುವನು, ಆದರೆ ಅವನ ಹೃದಯವು ಪರಿಶುದ್ಧ ಒಡಂಬಡಿಕೆಗೆ ವಿರೋಧವಾಗಿರುವುದು; ಅವನು ಇದಕ್ಕೆ ವಿರುದ್ಧವಾಗಿ ಕಾರ್ಯಸಾಧಿಸಿ, ಸ್ವಂತ ದೇಶಕ್ಕೆ ಹಿಂದಿರುಗುವನು. ಅಧ್ಯಾಯವನ್ನು ನೋಡಿ |