32 “ಉತ್ತರದ ರಾಜನು ಪರಿಶುದ್ಧ ನಿಬಂಧನೆಯನ್ನು ತೊರೆದ ಯೊಹೂದ್ಯರನ್ನು ಸುಳ್ಳುಮಾತುಗಳಿಂದ ಮತ್ತು ನಯವಾದ ನುಡಿಗಳಿಂದ ವಂಚಿಸುವನು. ಆ ಯೆಹೂದ್ಯರು ಅದಕ್ಕಿಂತಲೂ ಹೆಚ್ಚಿನ ಪಾಪಕೃತ್ಯಗಳನ್ನು ಮಾಡುವರು. ಆದರೆ ದೇವರನ್ನು ಅರಿತು ಆತನ ಆಜ್ಞೆ ಪಾಲಿಸುತ್ತಿರುವ ಯೆಹೂದ್ಯರು ದೃಢಚಿತ್ತರಾಗಿರುವರು; ಅವರು ಅವನನ್ನು ವಿರೋಧಿಸುವರು.
ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.
ನೆರೆಹೊರೆಯವರೂ, ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು, ‘ಯೆಹೋವನ ಜ್ಞಾನವನ್ನು ಪಡೆಯಿರಿ’ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವುದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು. ನಾನು ಅವರ ಅಪರಾಧವನ್ನು ಕ್ಷಮಿಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವುದಿಲ್ಲ. ಇದು ಯೆಹೋವನ ನುಡಿ” ಎಂಬುದೇ.
ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.
ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.
ಆಗ ಅವರಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ಬಿಳೀ ನಿಲುವಂಗಿಯು ಕೊಡಲ್ಪಟ್ಟಿತು ಇನ್ನೂ ಸ್ವಲ್ಪ ಸಮಯ ವಿಶ್ರಮಿಸಿಕೊಂಡಿರಬೇಕು. ನಿಮ್ಮ ಹಾಗೆ ವಧಿಸಲ್ಪಡಬೇಕಾಗಿರುವ ನಿಮ್ಮ ಸಹೋದರರ ಮತ್ತು ನಿಮ್ಮ ಜೊತೆ ಸೇವಕರ ಸಂಖ್ಯೆ ಪೂರ್ಣವಾಗುವ ತನಕ ಕಾದಿರಬೇಕೆಂದು ಅವರಿಗೆ ಅಪ್ಪಣೆಯಾಯಿತು.
ಆಗ ನಾನು ಅವರನ್ನು ಸಂದರ್ಶಿಸಿ ಅವರ ಮುಂದೆ ನಿಂತು ಶ್ರೀಮಂತರನ್ನೂ, ಅಧಿಕಾರಿಗಳನ್ನೂ, ಉಳಿದ ಜನರನ್ನೂ ಉದ್ದೇಶಿಸಿ, “ನಿಮ್ಮ ಹಗೆಗಳಿಗೆ ಹೆದರಬೇಡಿರಿ; ಮಹೋನ್ನತನೂ, ಭಯಂಕರನೂ ಆಗಿರುವ ಕರ್ತನನ್ನು ನೆನಪುಮಾಡಿಕೊಂಡು ನಿಮ್ಮ ಸಹೋದರರಿಗಾಗಿಯೂ, ಗಂಡು ಹೆಣ್ಣು ಮಕ್ಕಳಿಗಾಗಿಯೂ, ಹೆಂಡತಿಯರಿಗಾಗಿಯೂ, ನಿಮ್ಮ ಮನೆಗಳಿಗೋಸ್ಕರವೂ ಹೋರಾಡಿರಿ” ಎಂದು ಹೇಳಿದೆನು.