Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಬೀಳುವಾಗ ಅವರಿಗೆ ಸ್ವಲ್ಪ ಸಹಾಯ ದೊರೆಯುವುದು. ಆ ಮೇಲೆ ಬಹಳ ಮಂದಿ ನಯವಾದ ನುಡಿಗಳನ್ನಾಡುತ್ತಾ ಅವರನ್ನು ಸೇರಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಹೀಗಾಗುವಾಗ ಅವರಿಗೆ ಅಲ್ಪಸ್ವಲ್ಪ ಸಹಾಯ ದೊರೆಯುವುದು. ಆ ಬಳಿಕ ಬಹುಮಂದಿ ನಯನವಿರಾದ ಮಾತುಗಳನ್ನಾಡುತ್ತಾ ಅವರನ್ನು ಸೇರಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಬೀಳುವಾಗ ಅವರಿಗೆ ಸ್ವಲ್ಪ ಸಹಾಯ ದೊರೆಯುವದು; ಆಮೇಲೆ ಬಹುಮಂದಿ ನಯವಾದ ನುಡಿಗಳನ್ನಾಡುತ್ತಾ ಅವರನ್ನು ಸೇರಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆ ಜ್ಞಾನಿಗಳಾದ ಯೆಹೂದ್ಯರು ಶಿಕ್ಷೆಗೊಳಗಾದಾಗ ಅವರಿಗೆ ಸ್ವಲ್ಪ ಸಹಾಯ ಸಿಕ್ಕುವದು. ಆದರೆ ಜ್ಞಾನಿಗಳಾದ ಆ ಯೆಹೂದ್ಯರನ್ನು ಸೇರಿಕೊಳ್ಳುವ ಅನೇಕ ಯೆಹೂದ್ಯರು ಕಪಟಿಗಳಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಅವರು ಬೀಳುವಾಗ ಅವರಿಗೆ ಸ್ವಲ್ಪ ಸಹಾಯ ದೊರೆಯುವುದು, ಆದರೆ ಅನೇಕರು ವಂಚನೆಯ ನುಡಿಗಳಿಂದ ಅವರನ್ನು ಸೇರಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:34
22 ತಿಳಿವುಗಳ ಹೋಲಿಕೆ  

ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಮತ್ತು ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.


“ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ.


ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಬಂದಿರುವುದರಿಂದ ನೀವು ಎಲ್ಲಾ ಆತ್ಮಗಳ ನುಡಿಗಳನ್ನು ನಂಬದೆ ಆಯಾ ಆತ್ಮಗಳ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.


ಘಟಸರ್ಪನು ತಾನು ದೊಬ್ಬಲ್ಪಟ್ಟು ಭೂಮಿಗೆ ಬಿದ್ದಿರುವುದನ್ನು ಗ್ರಹಿಸಿಕೊಂಡು, ಗಂಡು ಮಗುವನ್ನು ಹೆತ್ತ ಸ್ತ್ರೀಯನ್ನು ಹಿಂಸಿಸುವುದಕ್ಕೆ ಅಟ್ಟಿಸಿಕೊಂಡು ಹೋಯಿತು.


ನಿನ್ನ ವಿರುದ್ಧ ನನಗೆ ಅಪಾದನೆ ಒಂದಿದೆ. ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು, ಜಾರತ್ವಮಾಡಬಹುದೆಂದೂ ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಅನುಮತಿಯನ್ನು ಕೊಟ್ಟಿರುವಿ.


ಏಕೆಂದರೆ ಭಕ್ತಿಹೀನರೂ, ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಕಾಮಾಭಿಲಾಷೆಯ ಕೃತ್ಯಗಳನ್ನು ನಡಿಸುವವರೂ, ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಕೆಲವು ಜನರು ರಹಸ್ಯವಾಗಿ ಸಭೆಯ ಒಳಗೆ ಹೊಕ್ಕಿದ್ದಾರೆ. ಇವರು ದಂಡನೆಗಾಗಿ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ ಎಂದು ಬರೆದದೆ.


ಏಕೆಂದರೆ, ಯೇಸುಕ್ರಿಸ್ತನು ಮನುಷ್ಯನಾಗಿ ಬಂದನು ಎಂಬುದನ್ನು ಒಪ್ಪದೆ ಇರುವ ಅನೇಕ ಮೋಸಗಾರರು ಲೋಕದೊಳಗೆ ಹೊರಟು ಬಂದಿದ್ದಾರೆ. ಇಂಥವರೇ, ಯೇಸುವನ್ನು ಒಪ್ಪದ ಮೋಸಗಾರರೂ, ಕ್ರಿಸ್ತವಿರೋಧಿಗಳು ಆಗಿದ್ದಾರೆ.


ಅವರು ಲೋಕಸಂಬಂಧಿಗಳಾಗಿದ್ದಾರೆ. ಈ ಕಾರಣದಿಂದ ಅವರು ಲೌಕಿಕವಾದುದನ್ನೇ ಮಾತನಾಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.


ಅವರು ಅತಿಲಾಭವನ್ನು ಪಡೆದುಕೊಳ್ಳುವುದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಕುಟುಂಬ ಕುಟುಂಬಗಳನ್ನೇ ಹಾಳುಮಾಡುತ್ತಾರಾದ್ದರಿಂದ ಅವರ ಬಾಯಿ ಮುಚ್ಚಿಸಬೇಕಾಗಿದೆ.


ಯಾಕೆಂದರೆ ಜನರು ಸ್ವಸ್ಥಬೋಧನೆಯನ್ನು ಒಪ್ಪಲಾರದ ಕಾಲವು ಬರುತ್ತದೆ. ಅದರಲ್ಲಿ ಅವರು ಕಿವಿಗೆ ಇಂಪಾಗುವ ಹಾಗೆ ತಮ್ಮ ದುರಾಶೆಗಳಿಗೆ ಅನುಕೂಲವಾದ ಉಪದೇಶಗಳನ್ನು ನೀಡುವ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು.


ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ಸಹೋದರರು ನಮ್ಮನ್ನು ಧರ್ಮಶಾಸ್ತ್ರದ ದಾಸತ್ವದಲ್ಲಿ ಸಿಕ್ಕಿಸಬೇಕೆಂದು, ಕ್ರಿಸ್ತ ಯೇಸುವಿನಲ್ಲಿರುವ ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು.


“ಅವನ ಸ್ಥಾನದಲ್ಲಿ ರಾಜ್ಯಪದವಿಗೆ ಹಕ್ಕುದಾರನಲ್ಲದ ಒಬ್ಬ ನೀಚನು ಎದ್ದು, ನೆಮ್ಮದಿಯ ಕಾಲದಲ್ಲಿ ಬಂದು ನಯವಾದ ನುಡಿಗಳಿಂದ ರಾಜ್ಯವನ್ನು ಪಡೆದುಕೊಳ್ಳುವನು.


ನಿಬಂಧನ ದ್ರೋಹಿಗಳು ಅವನ ನಯನುಡಿಗಳಿಂದ ಕೆಟ್ಟುಹೋಗುವರು. ತಮ್ಮ ದೇವರನ್ನು ಅರಿತವರೋ ದೃಢಚಿತ್ತರಾಗಿ ಕೃತಾರ್ಥರಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು