ದಾನಿಯೇಲ 11:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 “ರಾಜನು ತನ್ನ ಇಚ್ಛಾನುಸಾರ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಗರ್ವದಿಂದ ಉಬ್ಬಿ, ದೇವಾಧಿ ದೇವನನ್ನು ಮಿತಿಮೀರಿ ದೂಷಿಸಿ ನಿಮ್ಮ ಮೇಲಿನ ದೈವ ಕೋಪವು ತೀರುವ ತನಕ ವೃದ್ಧಿಯಾಗಿರುವನು. ದೈವಸಂಕಲ್ಪವು ನೆರವೇರಲೇ ಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 “(ಉತ್ತರದ) ರಾಜನು ಮನಸ್ಸು ಬಂದ ಹಾಗೆ ನಡೆದು ತಾನು ಎಲ್ಲ ದೇವರುಗಳಿಗಿಂತಲೂ ದೊಡ್ಡವನೆಂದು ತನ್ನನ್ನೇ ಹೆಚ್ಚಿಸಿಕೊಂಡು ಗರ್ವಿಷ್ಠನಾಗುವನು. ದೇವಾಧಿದೇವರನ್ನು ಅತಿಯಾಗಿ ದೂಷಿಸುವನು. ನಿಮ್ಮ ಮೇಲಿನ ದೈವಕೋಪ ತೀರುವ ತನಕ ಅವನು ವೃದ್ಧಿಯಾಗುವನು. ದೈವಸಂಕಲ್ಪ ನೆರವೇರಲೇಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ರಾಜನು ಮನಸ್ಸುಬಂದ ಹಾಗೆ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಉಬ್ಬಿ ದೇವಾಧಿದೇವನನ್ನು ವಿುತಿಮೀರಿ ದೂಷಿಸಿ [ನಿಮ್ಮ ಮೇಲಿನ] ದೇವೋಗ್ರವು ತೀರುವ ತನಕ ವೃದ್ಧಿಯಾಗಿರುವನು; ದೈವಸಂಕಲ್ಪವು ನೆರವೇರಲೇಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 “ಉತ್ತರದ ರಾಜನು ತನ್ನ ಮನಸ್ಸಿಗೆ ಬಂದದ್ದನ್ನು ಮಾಡುವನು; ಬಡಾಯಿ ಕೊಚ್ಚಿಕೊಳ್ಳುವನು. ಅವನು ತನ್ನನ್ನು ತಾನು ಹೊಗಳಿಕೊಳ್ಳುವನು ಮತ್ತು ದೇವರಿಗಿಂತ ತಾನು ಹೆಚ್ಚಿನವನೆಂದು ಭಾವಿಸುವನು. ಅವನು ಯಾರೂ ಎಂದೂ ಕೇಳದ ಸಂಗತಿಗಳನ್ನು ಹೇಳುವನು. ಅವನು ಮಹೋನ್ನತನಾದ ದೇವರ ವಿರುದ್ಧವಾಗಿ ಅಂತಹ ಸಂಗತಿಗಳನ್ನು ಹೇಳುವನು. ಎಲ್ಲ ಕೆಟ್ಟ ಸಂಗತಿಗಳು ಜರಗುವವರೆಗೂ ಅವನು ಜಯ ಪಡೆಯುವನು. ಏನು ನಡೆಯಬೇಕೆಂದು ದೇವರು ನಿಶ್ಚಯ ಮಾಡಿರುವನೋ ಅದು ನಡೆಯುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು. ತನ್ನನ್ನು ತಾನೇ ಹೆಚ್ಚಿಸಿಕೊಂಡು, ತನ್ನನ್ನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನನ್ನಾಗಿ ಮಾಡಿಕೊಂಡು, ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ, ರೋಷವು ತೀರುವವರೆಗೂ ವೃದ್ಧಿಯಾಗಿರುವನು. ಹೀಗೆ ನಿಶ್ಚಯವಾದದ್ದು ನೆರವೇರಲೇಬೇಕು. ಅಧ್ಯಾಯವನ್ನು ನೋಡಿ |
ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದುಕೊಂಡು ನಿಂತಿದ್ದ ಪುರುಷನನ್ನು ಕೇಳಲು, ಆ ಪುರುಷನು ಎಡ ಮತ್ತು ಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು. ದೇವಜನರ ಬಲವನ್ನು ಸಂಪೂರ್ಣವಾಗಿ ಮುರಿದುಬಿಟ್ಟ ಮೇಲೆ ಈ ಕಾರ್ಯಗಳೆಲ್ಲಾ ಮುಕ್ತಾಯವಾಗುವವು” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.