Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:40 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 “ಅಂತ್ಯಕಾಲದಲ್ಲಿ ದಕ್ಷಿಣ ದಿಕ್ಕಿನ ರಾಜನು ಉತ್ತರ ದಿಕ್ಕಿನ ರಾಜನ ಮೇಲೆ ಬೀಳಲು, ಅವನು ರಥಾಶ್ವಬಲಗಳಿಂದಲೂ, ಬಹು ನಾವೆಗಳಿಂದಲೂ ಕೂಡಿ ದಕ್ಷಿಣ ದಿಕ್ಕಿನ ರಾಜನ ಮೇಲೆ ರಭಸವಾಗಿ ಬಿದ್ದು ಎಲ್ಲಾ ನಾಡುನಾಡುಗಳಲ್ಲಿ ನುಗ್ಗಿ, ತುಂಬಿ ತುಳುಕಿ ಹರಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 “ಅಂತ್ಯಕಾಲದಲ್ಲಿ ದಕ್ಷಿಣರಾಜನು ಉತ್ತರರಾಜನ ಮೇಲೆ ಬೀಳುವನು. ಆದರೆ ಉತ್ತರರಾಜನು ರಥಾಶ್ವಬಲಗಳಿಂದಲೂ ಬಹು ನಾವೆಗಳಿಂದಲೂ ಕೂಡಿದವನಾಗಿ ದಕ್ಷಿಣರಾಜನ ಮೇಲೆ ಧಾಳಿಮಾಡಿ ನಾಡುನಾಡುಗಳನ್ನು ನುಗ್ಗಿ, ಪ್ರವಾಹದಂತೆ ಹರಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಅಂತ್ಯಕಾಲದಲ್ಲಿ ದಕ್ಷಿಣರಾಜನು ಉತ್ತರರಾಜನ ಮೇಲೆ ಬೀಳಲು ಅವನು ರಥಾಶ್ವಬಲಗಳಿಂದಲೂ ಬಹು ನಾವೆಗಳಿಂದಲೂ ಕೂಡಿ ದಕ್ಷಿಣರಾಜನ ಮೇಲೆ ರಭಸವಾಗಿ ಬಿದ್ದು ನಾಡುನಾಡುಗಳಲ್ಲಿ ನುಗ್ಗಿ ತುಂಬಿತುಳುಕಿ ಹರಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 “ಅಂತ್ಯಕಾಲದ ಸಮಯಕ್ಕೆ ದಕ್ಷಿಣದ ರಾಜನು ಉತ್ತರದ ರಾಜನೊಂದಿಗೆ ಯುದ್ಧ ಮಾಡುವನು. ಉತ್ತರದ ರಾಜನು ಅವನ ಮೇಲೆ ಧಾಳಿ ಮಾಡುವನು. ಅವನ ರಥ, ಕುದುರೆ ಸವಾರರು, ಹಡಗುಪಡೆಯೊಂದಿಗೆ ಧಾಳಿ ಮಾಡುವನು. ಆ ಉತ್ತರದ ರಾಜನು ಪ್ರವಾಹದಂತೆ ರಭಸದಿಂದ ದೇಶದಲ್ಲೆಲ್ಲ ಮುನ್ನುಗ್ಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಅಂತ್ಯಕಾಲದಲ್ಲಿ ದಕ್ಷಿಣದ ಅರಸನು ಅವನ ಮೇಲೆ ಬೀಳುವನು; ಉತ್ತರದ ಅರಸನು ರಥಗಳೊಂದಿಗೂ, ಸವಾರರೊಂದಿಗೂ, ಅನೇಕ ಹಡಗುಗಳೊಂದಿಗೂ ಸುಳಿಗಾಳಿಯಂತೆ ಅವನಿಗೆ ವಿರೋಧವಾಗಿ ದೇಶಗಳನ್ನು ಪ್ರವೇಶಿಸಿ ಪ್ರಳಯದಂತೆ ಹಾದುಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:40
24 ತಿಳಿವುಗಳ ಹೋಲಿಕೆ  

ಜ್ಞಾನಿಗಳಲ್ಲಿಯೂ ಕೆಲವರು ಅಂತ್ಯಕಾಲದವರೆಗೆ ಬೀಳುತ್ತಿರುವರು. ಆದುದರಿಂದ ಜನರು ಶೋಧಿಸಲ್ಪಟ್ಟು, ಶುದ್ಧಿಹೊಂದಿ ಶುಭ್ರರಾಗುವರು. ಅಂತ್ಯವು ನಿಶ್ಚಿತಕಾಲದಲ್ಲೇ ಆಗುವುದು.


ಆ ಮೇಲೆ ಅವನ ಮಕ್ಕಳು ಯುದ್ಧ ಸನ್ನಾಹ ಮಾಡಿ ಮಹಾವ್ಯೂಹವಾದ ದೊಡ್ಡ ಸೈನ್ಯವನ್ನು ಕೂಡಿಸುವರು. ಆ ಸೈನ್ಯವು ಮುಂದುವರೆದು ತುಂಬಿತುಳುಕಿ ಹಬ್ಬಿಕೊಳ್ಳುವುದು. ಅವರು ಪುನಃ ಯುದ್ಧಕ್ಕೆ ಹೊರಟು ದಕ್ಷಿಣ ದಿಕ್ಕಿನ ರಾಜನ ದುರ್ಗದವರೆಗೆ ನುಗ್ಗುವರು.


ಅವರ ಬಾಣಗಳು ಹದವಾಗಿವೆ. ಅವರ ಬಿಲ್ಲುಗಳು ಬಿಗಿದಿವೆ. ಅವರ ಕುದುರೆಗಳ ಗೊರಸುಗಳು ಕಲ್ಲಿನಂತೆಯೂ, ಚಕ್ರಗಳು ಬಿರುಗಾಳಿಯಂತೆಯೂ ರಭಸವಾಗಿವೆ.


ಆರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಯೂಫ್ರೆಟಿಸ್ ಎಂಬ ಮಹಾ ನದಿಯಲ್ಲಿ ಸುರಿಯಲು, ಪೂರ್ವದಿಕ್ಕಿನಿಂದ ಬರುವ ರಾಜರಿಗೆ ಮಾರ್ಗ ಸಿದ್ಧವಾಗುವಂತೆ ಅದರ ನೀರು ಬತ್ತಿಹೋಯಿತು.


ಯೆಹೋವನು ಸ್ವಜನರಿಗಾಗಿ ಅವರ ಮೇಲೆ ಕಾಣಿಸಿಕೊಳ್ಳುವನು; ಆತನ ಬಾಣವು ಸಿಡಿಲಿನಂತೆ ಹಾರುವುದು; ಕರ್ತನಾದ ಯೆಹೋವನು ತುತ್ತೂರಿಯನ್ನು ಊದಿ ದಕ್ಷಿಣ ಪ್ರಾಂತ್ಯದ ಬಿರುಗಾಳಿಗಳೊಡನೆ ನುಗ್ಗುವನು.


ದಾನಿಯೇಲನೇ, ನೀನು ಈ ಮಾತುಗಳನ್ನು ಮುಚ್ಚಿಡು, ಅವುಗಳನ್ನು ಬರೆಯುವ ಗ್ರಂಥಕ್ಕೆ ಮುದ್ರೆ ಹಾಕು. ಅಂತ್ಯಕಾಲದ ವರೆಗೆ ಮರೆಯಾಗಿರಲಿ. ಬಹಳ ಜನರು ಅತ್ತಿತ್ತ ತಿರುಗುವರು, ತಿಳಿವಳಿಕೆಯು ಹೆಚ್ಚುವುದು.”


ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ, ನಿನ್ನ ದವಡೆಗಳಲ್ಲಿ ಕೊಕ್ಕೆಗಳನ್ನು ಹಾಕಿ, ನಿನ್ನ ಎಲ್ಲಾ ಸೈನ್ಯವನ್ನೂ, ಕುದರೆಗಳನ್ನೂ ಮತ್ತು ಕುದರೆ ಸವಾರರನ್ನೂ ಮುಂದೆ ತರುವೆನು. ಇವರೆಲ್ಲರೂ ನಾನಾ ತರವಾದ ಆಯುಧಗಳನ್ನು ತೊಟ್ಟಿರುವರು, ಇವರೊಂದಿಗೆ ಖೇಡ್ಯ ಮತ್ತು ಗುರಾಣಿಗಳುಳ್ಳ ಮಹಾಸಮೂಹವನ್ನು ತರುವೆನು. ಇವರೆಲ್ಲರೂ ಖಡ್ಗವನ್ನು ಹಿಡಿದಿರುವರು.


ಇಗೋ, ಆ ಶತ್ರುವು ಮೇಘಗಳೋಪಾದಿಯಲ್ಲಿ ಬರುತ್ತಾನೆ, ಅವರ ರಥಗಳು ಬಿರುಗಾಳಿಯಂತಿವೆ, ಅವನ ಅಶ್ವಗಳು ಹದ್ದುಗಳಿಗಿಂತ ವೇಗವಾಗಿವೆ! ನಮ್ಮ ಗತಿಯನ್ನು ಏನು ಹೇಳೋಣ, ಹಾಳಾದೆವಲ್ಲಾ.


ಸಮುದ್ರ ಹಾಗೂ ಅಡವಿಯ ವಿಷಯವಾದ ದೈವೋಕ್ತಿ. ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿಯಂತೆ ಅರಣ್ಯದ ಕಡೆಯ ಭಯಂಕರ ದೇಶದಿಂದ (ದೊಡ್ಡ ಅಪಾಯ) ಬರುತ್ತದೆ ಎಂಬ


ಕುದುರೆ ದಂಡಿನವರ ಸಂಖ್ಯೆಯು ಇಪ್ಪತ್ತು ಕೋಟಿ ಎಂದು ನನಗೆ ಕೇಳಿಸಿತು.


ತುಂಬಿ ತುಳುಕುವ ವ್ಯೂಹಗಳೂ, ದೇವರ ನಿಬಂಧನಾಧಿಪತಿಯೂ ಅವನ ರಭಸಕ್ಕೆ ಸಿಕ್ಕಿ ಹೊಡೆದುಕೊಂಡು ಹೋಗಿ ಭಂಗವಾಗುವರು.


ಅದರಂತೆ ಅವನು ನನ್ನ ಬಳಿಗೆ ಬಂದನು. ಅವನು ಬರಲು, ನಾನು ಭಯಭ್ರಾಂತನಾಗಿ ಅಡ್ಡಬಿದ್ದೆನು. ನನಗೆ ಅವನು, “ನರಪುತ್ರನೇ, ಇದು ಮನದಟ್ಟಾಗಿರಲಿ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು” ಎಂದು ಹೇಳಿದನು.


ಆಹಾ, ಯೆಹೋವನು ಬೆಂಕಿಯನ್ನು ಕಟ್ಟಿಕೊಂಡು ಬರುವನು; ಆತನ ರಥಗಳು ಬಿರುಗಾಳಿಯಂತಿರುವವು; ರೌದ್ರಾವೇಶದಿಂದ ತನ್ನ ಸಿಟ್ಟನ್ನು ತೀರಿಸುವನು, ಅಗ್ನಿ ಜ್ವಾಲೆಯಿಂದ ಖಂಡಿಸುವನು.


ಅನಂತರ ಅವಳು ಹುಟ್ಟಿದ ವಂಶವೃಕ್ಷದಲ್ಲಿ ಹುಟ್ಟಿದವರು ಅದರ ಸ್ಥಾನದಲ್ಲಿ ನಿಂತು ಉತ್ತರ ದಿಕ್ಕಿನ ರಾಜನ ಸೈನ್ಯಕ್ಕೆ ವಿರುದ್ಧವಾಗಿ ಹೊರಟು ಅವನ ದುರ್ಗದೊಳಗೆ ನುಗ್ಗಿ, ಅವರೊಡನೆ ಯುದ್ಧಮಾಡಿ, ಅವರನ್ನು ಗೆಲ್ಲುವರು.


ಆಗ ದಕ್ಷಿಣ ದಿಕ್ಕಿನ ರಾಜನು ಕ್ರೋಧದಿಂದ ಉರಿಯುತ್ತಾ ಹೊರಟು ಬಂದು, ಉತ್ತರ ದಿಕ್ಕಿನ ರಾಜನ ಸಂಗಡ ಯುದ್ಧ ಮಾಡುವನು. ಉತ್ತರ ದಿಕ್ಕಿನ ರಾಜನು ಮಹಾವ್ಯೂಹವನ್ನು ಕಟ್ಟಿದರೂ, ಅದೆಲ್ಲಾ ದಕ್ಷಿಣ ದಿಕ್ಕಿನ ರಾಜನ ಕೈಗೆ ಸಿಕ್ಕಿ ಒಯ್ಯಲ್ಪಡುವುದು.


ತರುವಾಯ ಉತ್ತರ ದಿಕ್ಕಿನ ರಾಜನು ಹಿಂದಿನ ದಂಡಿಗಿಂತ ದೊಡ್ಡ ದಂಡನ್ನು ಮತ್ತೆ ಕೂಡಿಸಿ ಬಹಳ ವರ್ಷಗಳ ನಂತರ ಮಹಾ ಸೈನ್ಯದಿಂದಲೂ, ಅಧಿಕ ಆಯುಧಗಳ ಸಮೇತವಾಗಿಯೂ ಬರುವನು.


ಅವನು ದೊಡ್ಡ ದಂಡೆತ್ತಿ ದಕ್ಷಿಣ ದಿಕ್ಕಿನ ರಾಜನ ವಿರುದ್ಧವಾಗಿ ತನ್ನ ರಾಜ್ಯದ ಬಲವನ್ನೆಲ್ಲ ಕೂಡಿಸಿ ಧೈರ್ಯದಿಂದ ಹೊರಡುವನು. ದಕ್ಷಿಣ ದಿಕ್ಕಿನ ರಾಜನು ಅತ್ಯಧಿಕ ಬಲವುಳ್ಳ ಮಹಾ ಸೈನ್ಯಸಮೇತನಾಗಿ ಯುದ್ಧಕ್ಕೆ ಹೊರಡುವನು. ಆದರೆ ನಿಲ್ಲಲಾರನು, ಅವನು ಸೋಲುವ ಹಾಗೆ ಕುಯುಕ್ತಿಗಳನ್ನು ಕಲ್ಪಿಸುವನು.


ಅನ್ಯದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು; ಯಾರನ್ನು ಕಟಾಕ್ಷಿಸುವನೋ ಅವರಿಗೆ ಮಹಿಮೆ ಹೆಚ್ಚುವುದು; ಬಹಳ ಜನರ ಮೇಲೆ ಆಳ್ವಿಕೆಯನ್ನು ನಡೆಸುವನು; ದೇಶವನ್ನು ಕ್ರಯಕ್ಕೆ ಹಂಚುವನು.


ಅವನು, “ದಾನಿಯೇಲನೇ, ಈ ಮಾತುಗಳು ಅಂತ್ಯಕಾಲದ ವರೆಗೆ ಮುಚ್ಚಲ್ಪಟ್ಟು ಮುದ್ರಿತವಾಗಿವೆ, ಹೋಗು.


ದಿಕ್ಕಿಲ್ಲದವರನ್ನು ಮರೆಯಲ್ಲಿ ನುಂಗಲು ಹೆಚ್ಚಳಪಡುವವರಾಗಿ ನನ್ನನ್ನು ಚದುರಿಸಬೇಕೆಂದು ನನ್ನ ಮೇಲೆ ಬಿರುಗಾಳಿಯಂತೆ ನುಗ್ಗಿದ ಅವನ ಭಟರ ತಲೆಯನ್ನು ಅವನ ದೊಣ್ಣೆಗಳಿಂದಲೇ ಒಡೆದಿದ್ದೀ


ನೀನು ಮೇಲೇರಿ ಬಿರುಗಾಳಿಯಂತೆ ಹೊರಟು ಬರುವೆ. ನಿನ್ನ ಎಲ್ಲಾ ದಂಡುಗಳೂ ಅನೇಕ ಜನರ ಸಹಿತವಾಗಿ ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವುದು.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು