Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 12:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಿತ್ಯಹೋಮವು ನೀಗಿಸಲ್ಪಟ್ಟು, ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ ಸಾವಿರದ ಇನ್ನೂರತ್ತೊಂಭತ್ತು ದಿನಗಳು ಕಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅನುದಿನದ ಬಲಿ ನಿಂತುಹೋಗುವುದು. ‘ವಿನಾಶಕರ ವಿಕಟ ಮೂರ್ತಿ’ ಪ್ರತಿಷ್ಠಿತವಾದ ಮೇಲೆ 1290 ದಿನಗಳು ಕಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಿತ್ಯಹೋಮವು ನೀಗಿಸಲ್ಪಟ್ಟು ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ ಸಾವಿರದ ಇನ್ನೂರತೊಂಭತ್ತು ದಿನಗಳು ಕಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ನಿತ್ಯಹೋಮವು ನಿಲ್ಲಿಸಲ್ಪಟ್ಟು ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ ಒಂದು ಸಾವಿರದ ಇನ್ನೂರ ತೊಂಭತ್ತು ದಿನಗಳು ಕಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಪ್ರತಿದಿನದ ಯಜ್ಞವು ಸಕಾಲಕ್ಕೆ ನಿಂತುಹೋಗುವುದು. ಆ ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ, 1,290 ದಿನಗಳು ಕಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 12:11
14 ತಿಳಿವುಗಳ ಹೋಲಿಕೆ  

ಅವನು ಕೂಡಿಸುವ ಸೈನ್ಯವು ಆಶ್ರಯ ದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸಿ, ನಿತ್ಯಹೋಮವನ್ನು ನೀಗಿಸಿ, ಹಾಳುಮಾಡುವ ಅಸಹ್ಯವಸ್ತುವನ್ನು ಪ್ರತಿಷ್ಠಿಸುವುದು.


“ಪ್ರವಾದಿಯಾದ ದಾನಿಯೇಲನು ಹೇಳಿದ ಹಾಗೆ ವಿನಾಶಕಾರಕ, ವಿಕಾರ ವಸ್ತು ಪವಿತ್ರ ಸ್ಥಾನದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ)


“ಇದಲ್ಲದೆ ವಿನಾಶಕಾರಕ ಅಸಹ್ಯ ಮೂರ್ತಿಯು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ). ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.


ಆ ಪ್ರಭುವು ಒಂದು ವಾರದ ಮಟ್ಟಿಗೆ ಬಹು ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು; ಅರ್ಧಭಾಗ ಯಜ್ಞನೈವೇದ್ಯಗಳನ್ನು ನಿಲ್ಲಿಸುವನು; ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬಂದು ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.”


ಬಡಾಯಿಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು ಮತ್ತು ನಲವತ್ತೆರಡು ತಿಂಗಳ ಪರ್ಯಂತರ ತನ್ನ ಕಾರ್ಯಗಳನ್ನು ನಡಿಸುವ ಅಧಿಕಾರವೂ ಅದಕ್ಕೆ ಕೊಡಲ್ಪಟ್ಟಿತು.


ಆಲಯದ ಹೊರಗಿರುವ ಹೊರಾಂಗಣವನ್ನು ಅಳೆಯದೆ ಬಿಟ್ಟುಬಿಡು, ಅದು ಅನ್ಯಜನರಿಗಾಗಿ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಲವತ್ತೆರಡು ತಿಂಗಳು ತುಳಿದಾಡುವರು.


ಪರಾತ್ಪರನಾದ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಂಡು ಪರಾತ್ಪರನಾದ ದೇವರ ಭಕ್ತರನ್ನು ಬಾಧಿಸಿ ಕಟ್ಟಳೆಯ ಕಾಲಗಳನ್ನೂ, ಧರ್ಮವಿಧಿಗಳನ್ನೂ ಮಾರ್ಪಡಿಸಲು ಮನಸ್ಸು ಮಾಡುವನು; ಆ ಭಕ್ತರು ಒಂದುಕಾಲ, ಎರಡುಕಾಲ, ಅರ್ಧಕಾಲ ಅವನ ಕೈವಶವಾಗಿರುವರು.


ಕನಸಿನಲ್ಲಿ ತಿಳಿಸಲ್ಪಟ್ಟ ಉದಯಾಸ್ತಮಾನಗಳ ವಿಷಯವು ನಿಜವೇ ಸರಿ. ಆದರೆ ಆ ಕನಸು ಗುಟ್ಟಾಗಿರಲಿ. ಅದು ಬಹು ದಿನಗಳ ನಂತರ ನಡೆಯುವಂಥದು” ಎಂದು ಹೇಳಿದನು.


ನೇಮಿಸಿದ್ದ ವಿಚಾರಕನಿಗೆ, “ಅಯ್ಯಾ, ಹತ್ತು ದಿನಗಳ ಮಟ್ಟಿಗೆ ನಿನ್ನ ಸೇವಕರಾದ ನಮ್ಮನ್ನು ಪರೀಕ್ಷಿಸು; ಆಹಾರಕ್ಕೆ ಕಾಯಿಪಲ್ಯ ಮತ್ತು ಪಾನಕ್ಕೆ ನೀರು ನಮಗೆ ಒದಗಲಿ.


ಮತ್ತು ಆ ಸ್ತ್ರೀಯು ಅರಣ್ಯಕ್ಕೆ ಓಡಿಹೋದಳು. ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರವತ್ತು ದಿನಗಳ ವರೆಗೆ ಪೋಷಣೆಮಾಡುವುದಕ್ಕಾಗಿ ದೇವರು ಸಿದ್ಧಮಾಡಿದ್ದ ಸ್ಥಳವನ್ನು ಅವಳು ಕಂಡಳು.


“ಅಷ್ಟು ದಿನಗಳು ತೀರಿದ ಮೇಲೆ ಬಲಮಗ್ಗುಲಲ್ಲಿ ಮಲಗಿಕೊಂಡು ಯೆಹೂದ ವಂಶದವರ ಪಾಪವನ್ನು ಅನುಭವಿಸಬೇಕು; ವರ್ಷ ಒಂದಕ್ಕೆ ಒಂದು ದಿನದ ಮೇರೆಗೆ ನಲ್ವತ್ತು ದಿನ ಅವರ ಪಾಪವನ್ನು ಹೊರಬೇಕೆಂದು ನಿನಗೆ ಗೊತ್ತುಮಾಡಿದ್ದೇನೆ.


ಇದರಂತೆ ರಾಜಮುಖಂಡ, ಯಜ್ಞ, ಸ್ತಂಭ, ಏಫೋದು, ವಿಗ್ರಹಗಳಿಲ್ಲದೆ ಇಸ್ರಾಯೇಲರು ಬಹಳ ದಿನಗಳು ತಾಳಿಕೊಂಡಿರುವರು.


ಯಜ್ಞವೇದಿಯ ಮೇಲೆ ನಿತ್ಯವೂ ಸಮರ್ಪಿಸಬೇಕಾದವುಗಳು, ಒಂದು ವರ್ಷದ ಎರಡು ಕುರಿಮರಿಗಳನ್ನು ಪ್ರತಿದಿನವೂ ಹೋಮಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು