Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 12:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕಾದುಕೊಂಡು, ಸಾವಿರದ ಮುನ್ನೂರ ಮೂವತ್ತೈದು ದಿನಗಳ ಕೊನೆಯವರೆಗೆ ತಾಳುವವನು ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 1335 ದಿನಗಳ ಮಟ್ಟಿಗೆ ವಿಶ್ವಾಸದಿಂದ ಕಾದಿರುವವರು ಧನ್ಯರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕಾದುಕೊಂಡು ಸಾವಿರದ ಮುನ್ನೂರ ಮೂವತ್ತೈದು ದಿನಗಳ ಕೊನೆಯ ಮಟ್ಟಿಗೆ ತಾಳಿರುವವನು ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಕಾದುಕೊಂಡು ಒಂದು ಸಾವಿರದ ಮುನ್ನೂರ ಮೂವತ್ತೈದು ದಿನಗಳ ಕೊನೆಯವರೆಗೆ ತಾಳಿರುವವನು ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 1,335 ದಿನಗಳು ಬರುವವರೆಗೆ ಕಾದಿರುವವನೇ ಭಾಗ್ಯವಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 12:12
8 ತಿಳಿವುಗಳ ಹೋಲಿಕೆ  

ಅವನು ಇವನಿಗೆ, “ಉದಯಾಸ್ತಮಾನಗಳ ಎರಡು ಸಾವಿರದ ಮುನ್ನೂರ ರವರೆಗೆ ನಡೆಯುವವು. ಅನಂತರ ಪವಿತ್ರಾಲಯಕ್ಕೆ ಪುನಃ ನ್ಯಾಯಸ್ಥಾಪನೆಯಾಗುವುದು” ಎಂದು ಹೇಳಿದನು.


ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.


ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯ ತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ, ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನಗೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡದೇ ತಮ್ಮ ಹಣೆಯ ಮೇಲೆ ಮತ್ತು ಕೈಗಳ ಮೇಲೆ ಅದರ ಗುರುತು ಹಾಕಿಸಿಕೊಳ್ಳದವರನ್ನೂ ಕಂಡೆನು. ಅವರು ಪುನಃ ಜೀವಿತರಾಗಿ ಎದ್ದು ಸಾವಿರ ವರ್ಷ ಕ್ರಿಸ್ತನೊಂದಿಗೆ ಆಳಿದರು.


ಯಾಕೆಂದರೆ ಇಸ್ರಾಯೇಲ್ಯರನ್ನು ನಿರಾಕರಿಸುವುದರಿಂದ ಲೋಕವು ದೇವರ ಸಂಗಡ ಸಂಧಾನವಾಗುವುದಕ್ಕೆ ಮಾರ್ಗವಾದ ಮೇಲೆ ಅವರನ್ನು ಸೇರಿಸಿಕೊಳ್ಳುವುದರಿಂದ ಏನಾಗುವುದು? ಸತ್ತವರು ಜೀವಿತರಾಗಿ ಎದ್ದುಬಂದತಾಗುವುದಿಲ್ಲವೇ.


ಆಲಯದ ಹೊರಗಿರುವ ಹೊರಾಂಗಣವನ್ನು ಅಳೆಯದೆ ಬಿಟ್ಟುಬಿಡು, ಅದು ಅನ್ಯಜನರಿಗಾಗಿ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಲವತ್ತೆರಡು ತಿಂಗಳು ತುಳಿದಾಡುವರು.


ಮತ್ತು ಆ ಸ್ತ್ರೀಯು ಅರಣ್ಯಕ್ಕೆ ಓಡಿಹೋದಳು. ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರವತ್ತು ದಿನಗಳ ವರೆಗೆ ಪೋಷಣೆಮಾಡುವುದಕ್ಕಾಗಿ ದೇವರು ಸಿದ್ಧಮಾಡಿದ್ದ ಸ್ಥಳವನ್ನು ಅವಳು ಕಂಡಳು.


ಬಡಾಯಿಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು ಮತ್ತು ನಲವತ್ತೆರಡು ತಿಂಗಳ ಪರ್ಯಂತರ ತನ್ನ ಕಾರ್ಯಗಳನ್ನು ನಡಿಸುವ ಅಧಿಕಾರವೂ ಅದಕ್ಕೆ ಕೊಡಲ್ಪಟ್ಟಿತು.


“ಅಷ್ಟು ದಿನಗಳು ತೀರಿದ ಮೇಲೆ ಬಲಮಗ್ಗುಲಲ್ಲಿ ಮಲಗಿಕೊಂಡು ಯೆಹೂದ ವಂಶದವರ ಪಾಪವನ್ನು ಅನುಭವಿಸಬೇಕು; ವರ್ಷ ಒಂದಕ್ಕೆ ಒಂದು ದಿನದ ಮೇರೆಗೆ ನಲ್ವತ್ತು ದಿನ ಅವರ ಪಾಪವನ್ನು ಹೊರಬೇಕೆಂದು ನಿನಗೆ ಗೊತ್ತುಮಾಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು