ದಾನಿಯೇಲ 12:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದುಕೊಂಡು ನಿಂತಿದ್ದ ಪುರುಷನನ್ನು ಕೇಳಲು, ಆ ಪುರುಷನು ಎಡ ಮತ್ತು ಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು. ದೇವಜನರ ಬಲವನ್ನು ಸಂಪೂರ್ಣವಾಗಿ ಮುರಿದುಬಿಟ್ಟ ಮೇಲೆ ಈ ಕಾರ್ಯಗಳೆಲ್ಲಾ ಮುಕ್ತಾಯವಾಗುವವು” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆ ದೂತ ಎಡಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಯುಗ, ಎರಡು ಯುಗ, ಮತ್ತು ಅರ್ಧ ಯುಗ ಕಳೆಯಬೇಕು. ದೇವಜನರಿಗಾಗುವ ಹಿಂಸೆಬಾಧೆಗಳು ಸಂಪೂರ್ಣವಾಗಿ ನಿಂತಮೇಲೆ ಈ ಕಾರ್ಯಗಳೆಲ್ಲ ಮುಕ್ತಾಯವಾಗುವುವು,” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆಕಾಶದ ಕಡೆಗೆ ಎತ್ತಿಕೊಂಡು - ಶಾಶ್ವತ ಜೀವಸ್ವರೂಪನಾಣೆ, ಒಂದುಕಾಲ ಎರಡುಕಾಲ ಅರ್ಧಕಾಲ ಕಳೆಯಬೇಕು; ದೇವರ ಜನರ ಬಲವನ್ನು ಸಂಪೂರ್ಣವಾಗಿ ಮುರಿದುಬಿಟ್ಟ ಮೇಲೆ ಈ ಕಾರ್ಯಗಳೆಲ್ಲಾ ಮುಕ್ತಾಯವಾಗುವವು ಎಂಬದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಾರುಮಡಿಯನ್ನು ಧರಿಸಿ ನೀರಿನ ಮೇಲೆ ನಿಂತುಕೊಂಡಿದ್ದ ಮನುಷ್ಯನು ತನ್ನ ಎರಡೂ ಕೈಗಳನ್ನು ಆಕಾಶದ ಕಡೆಗೆ ಎತ್ತಿದನು. ಅವನು ಶಾಶ್ವತವಾದ ದೇವರ ಮೇಲೆ ಆಣೆಮಾಡಿ, “ಮೂರುವರೆ ವರ್ಷ ಕಳೆಯಬೇಕು. ದೇವರ ಭಕ್ತರ ಬಲವು ಸಂಪೂರ್ಣವಾಗಿ ಮುರಿದುಹೋಗುವದು. ಆಮೇಲೆ ಎಲ್ಲಾ ಸಂಗತಿಗಳು ಜರುಗುವವು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನದಿಯ ನೀರಿನ ಮೇಲೆ ನಿಂತು ನಾರುಬಟ್ಟೆಯನ್ನು ಧರಿಸಿ ನಿಂತಿದ್ದ ಮನುಷ್ಯನು ತನ್ನ ಎಡಗೈಯನ್ನೂ ಬಲಗೈಯನ್ನೂ ಆಕಾಶದ ಕಡೆಗೆ ಎತ್ತಿ ಸದಾಕಾಲ ಜೀವಂತರಾಗಿರುವವರ ಮೇಲೆ ಆಣೆಯಿಟ್ಟು, “ಅದು ಒಂದುಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು; ಕೊನೆಗೆ ಪರಿಶುದ್ಧರ ಬಲವನ್ನು ಮುರಿದ ಮೇಲೆ ಈ ಕಾರ್ಯಗಳೆಲ್ಲ ಮುಕ್ತಾಯವಾಗುವುವು,” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು. ಅಧ್ಯಾಯವನ್ನು ನೋಡಿ |
ಆ ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕುಳಿತಾತನ ಪಾದಕ್ಕೆ ಅಡ್ಡಬಿದ್ದು, ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ, “ಕರ್ತನೇ ನಮ್ಮ ದೇವರೇ ನೀನು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯನಾಗಿದ್ದೀ, ಏಕೆಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಎಲ್ಲವೂ ನಿನ್ನ ಚಿತ್ತದಿಂದಲೇ ಇದ್ದವು ಮತ್ತು ನಿನ್ನ ಚಿತ್ತದಿಂದಲೇ ನಿರ್ಮಿತವಾದವು” ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಿದ್ದರು.