ದಾನಿಯೇಲ 2:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಗ ಆ ಪಂಡಿತರು ರಾಜನ ಸನ್ನಿಧಿಯ ಮುಂದೆ, “ರಾಜನು ಕೇಳಿದ ಸಂಗತಿಯನ್ನು ತಿಳಿಸಬಲ್ಲವನು ಲೋಕದಲ್ಲಿ ಯಾರೂ ಇಲ್ಲ; ಎಷ್ಟೇ ಬಲಿಷ್ಠನು, ಎಷ್ಟೇ ಪ್ರಬಲನು ಆದ ಯಾವ ಅರಸನೂ ಜೋಯಿಸರನ್ನಾಗಲಿ, ಮಾಟಗಾರನನ್ನಾಗಲಿ, ಪಂಡಿತನನ್ನಾಗಲಿ, ಇಂಥ ಸಂಗತಿಯನ್ನು ಎಂದೂ ಕೇಳಿದ್ದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆಗ ಆ ಪಂಡಿತರು ಸನ್ನಿಧಿಯ ಮುಂದೆ, “ರಾಜರು ಕೇಳುವ ಸಂಗತಿಯನ್ನು ತಿಳಿಸಬಲ್ಲವನು ಈ ಲೋಕದಲ್ಲಿ ಯಾವನೂ ಇಲ್ಲ. ಎಷ್ಟೆಷ್ಟೋ ಬಲಿಷ್ಠರಾದ , ಪ್ರಬಲರಾದ ಯಾವ ಅರಸರೂ ಜೋಯಿಸನನ್ನಾಗಲಿ, ಮಾಟಗಾರನನ್ನಾಗಲಿ, ಪಂಡಿತನನ್ನಾಗಲಿ, ಇಂಥ ಸಂಗತಿಯನ್ನು ಎಂದೂ ಕೇಳಿದ್ದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆಗ ಆ ಪಂಡಿತರು ಸನ್ನಿಧಿಯ ಮುಂದೆ - ರಾಜನು ಕೇಳಿದ ಸಂಗತಿಯನ್ನು ತಿಳಿಸಬಲ್ಲವನು ಲೋಕದಲ್ಲಿ ಯಾವನೂ ಇಲ್ಲ; ಎಷ್ಟೇ ಬಲಿಷ್ಠನು, ಎಷ್ಟೇ ಪ್ರಬಲನು ಆದ ಯಾವ ಅರಸನೂ ಜೋಯಿಸನನ್ನಾಗಲಿ ಮಾಟಗಾರನನ್ನಾಗಲಿ ಪಂಡಿತನನ್ನಾಗಲಿ ಇಂಥ ಸಂಗತಿಯನ್ನು ಎಂದೂ ಕೇಳಿದ್ದಿಲ್ಲ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಕಸ್ದೀಯರು, “ಮಹಾಪ್ರಭುಗಳು ಕೇಳುತ್ತಿರುವುದನ್ನು ಹೇಳುವವರು ಈ ಜಗತ್ತಿನಲ್ಲಿ ಯಾರೂ ಇಲ್ಲ. ಈ ಹಿಂದೆ ಯಾವ ಅರಸನೂ ತನ್ನ ಆಸ್ಥಾನ ಪಂಡಿತರಿಗೂ ಮಂತ್ರವಾದಿಗಳಿಗೂ ಇಂತಹ ಪ್ರಶ್ನೆಯನ್ನು ಕೇಳಲಿಲ್ಲ. ಅತ್ಯಂತ ದೊಡ್ಡ ಮತ್ತು ಪ್ರಬಲನಾದ ಅರಸನೂ ತನ್ನ ಪಂಡಿತರಿಗಾಗಲಿ ಜೋಯಿಸರಿಗಾಗಲಿ ಇಂಥದ್ದನ್ನು ಕೇಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಪಂಡಿತರು ಅರಸನಿಗೆ ಉತ್ತರವಾಗಿ, “ಅರಸನ ಸಂಗತಿಯನ್ನು ತಿಳಿಸಬಲ್ಲ ವ್ಯಕ್ತಿ ಭೂಲೋಕದಲ್ಲಿಲ್ಲ! ಆದ್ದರಿಂದ ಯಾವ ಅರಸನಾದರೂ, ಯಾವ ಪ್ರಭುವಾದರೂ, ಯಾವ ಯಜಮಾನನಾದರೂ ಯಾವೊಬ್ಬ ಮಂತ್ರಗಾರನಲ್ಲೂ, ಜೋತಿಷ್ಯನಲ್ಲೂ, ಪಂಡಿತನಲ್ಲೂ ಇಂಥ ಸಂಗತಿಗಳನ್ನು ಕೇಳಲಿಲ್ಲ. ಅಧ್ಯಾಯವನ್ನು ನೋಡಿ |