Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಕೂಡಲೆ ಆ ಆಜ್ಞೆಯು ಪ್ರಕಟವಾಯಿತು. ವಿದ್ವಾಂಸರು ಪ್ರಾಣಾಪಾಯಕ್ಕೆ ಗುರಿಯಾದರು; ದಾನಿಯೇಲನನ್ನೂ, ಅವನ ಸ್ನೇಹಿತರನ್ನೂ ಕೊಲ್ಲುವುದಕ್ಕೆ ಹುಡುಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಕೂಡಲೆ ಆ ಆಜ್ಞೆ ಹೊರಪಟ್ಟಿತು. ವಿದ್ವಾಂಸರು ಪ್ರಾಣಾಪಾಯಕ್ಕೆ ಗುರಿಯಾದರು. ಅಂತೆಯೇ ದಾನಿಯೇಲನನ್ನೂ ಅವನ ಗೆಳೆಯರೆಲ್ಲರನ್ನೂ ಕೊಲ್ಲಲಿಕ್ಕೆ ಹುಡುಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಕೂಡಲೆ ಆ ಆಜ್ಞೆಯು ಹೊರಪಟ್ಟಿತು; ವಿದ್ವಾಂಸರು ಪ್ರಾಣಾಪಾಯಕ್ಕೆ ಗುರಿಯಾದರು; ದಾನಿಯೇಲನನ್ನೂ ಅವನ ಸ್ನೇಹಿತರನ್ನೂ ಕೊಲ್ಲಲಿಕ್ಕೆ ಹುಡುಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅರಸನಾದ ನೆಬೂಕದ್ನೆಚ್ಚರನ ಆಜ್ಞೆಯನ್ನು ಪ್ರಕಟಗೊಳಿಸಲಾಯಿತು. ಎಲ್ಲಾ ವಿದ್ವಾಂಸರನ್ನು ಕೊಲ್ಲಬೇಕಾಗಿತ್ತು. ದಾನಿಯೇಲ ಮತ್ತು ಅವನ ಸ್ನೇಹಿತರನ್ನು ಹುಡುಕಿ ಅವರ ಕೊಲೆ ಮಾಡುವುದಕ್ಕಾಗಿ ರಾಜಭಟರನ್ನು ಕಳುಹಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಹಾಗೆಯೇ ಜ್ಞಾನಿಗಳನ್ನು ಕೊಲ್ಲಬೇಕೆಂಬ ನಿರ್ಣಯವು ಹೊರಟಿತು. ದಾನಿಯೇಲನನ್ನೂ, ಅವನ ಜೊತೆಗಾರರನ್ನೂ ಕೊಲ್ಲಲು ಹುಡುಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:13
8 ತಿಳಿವುಗಳ ಹೋಲಿಕೆ  

ಅಯ್ಯೋ, ಅನ್ಯಾಯವಾದ ತೀರ್ಪುಗಳನ್ನು ತೀರಿಸಿ, ಕೇಡಿನ ಪತ್ರಗಳನ್ನು ಬರೆಯಿಸುವವರ ಗತಿಯನ್ನು ಏನೆಂದು ಹೇಳಲಿ.


ಧರ್ಮಶಾಸ್ತ್ರದ ನೆಪದಿಂದ ಕೇಡುಕಲ್ಪಿಸುವ ದುಷ್ಟ ಅಧಿಪತಿಗಳಿಗೂ, ನಿನಗೂ ಸಂಬಂಧವೇನು?


ನಂತರ ದಾನಿಯೇಲನು ಬಾಬೆಲಿನ ವಿದ್ವಾಂಸರನ್ನು ಕೊಲ್ಲುವುದಕ್ಕೆ ರಾಜನು ನೇಮಿಸಿದ ಅರ್ಯೋಕನ ಬಳಿಗೆ ಹೋಗಿ ಅವನಿಗೆ, “ಬಾಬೆಲಿನ ವಿದ್ವಾಂಸರನ್ನು ಕೊಲ್ಲಬೇಡ; ನನ್ನನ್ನು ರಾಜನ ಸನ್ನಿಧಿಗೆ ಬಿಡು; ನಾನು ಕನಸಿನ ಅಭಿಪ್ರಾಯವನ್ನು ರಾಜನಿಗೆ ತಿಳಿಸುವೆನು” ಎಂದು ಹೇಳಿದನು.


ಈ ಮಹತ್ವದ ನಿಮಿತ್ತ ಸಕಲ ಜನಾಂಗ, ಕುಲ, ಭಾಷೆಗಳವರು ಅವನ ಮುಂದೆ ಬೆಚ್ಚಿಬೆದರಿದರು; ತನಗೆ ಬೇಕಾದವರನ್ನು ಕೊಲ್ಲಿಸಿದನು, ತನಗೆ ಬೇಕಾದವರನ್ನು ಉಳಿಸಿದನು, ಮನಸ್ಸು ಬಂದವರನ್ನು ಅಭಿವೃದ್ಧಿಮಾಡಿದನು, ಮನಸ್ಸು ಬಂದವರನ್ನು ಇಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು