ದಾನಿಯೇಲ 2:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆಗ ಆ ರಹಸ್ಯವು ರಾತ್ರಿಯ ಸ್ವಪ್ನದಲ್ಲಿ ದಾನಿಯೇಲನಿಗೆ ಪ್ರಕಟವಾಯಿತು. ಕೂಡಲೆ ದಾನಿಯೇಲನು ಪರಲೋಕ ದೇವರನ್ನು ಹೀಗೆ ಸ್ತುತಿಸಿದನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆ ರಾತ್ರಿಯೇ ಸ್ವಪ್ನದಲ್ಲಿ ಕನಸಿನ ಗುಟ್ಟು ದಾನಿಯೇಲನಿಗೆ ವ್ಯಕ್ತವಾಯಿತು. ಕೂಡಲೆ ಆತನು ಪರಲೋಕ ದೇವರನ್ನು ಹೀಗೆಂದು ಸ್ತುತಿಸಿದನು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆಗ ಆ ರಹಸ್ಯವು ರಾತ್ರಿಯ ಸ್ವಪ್ನದಲ್ಲಿ ದಾನಿಯೇಲನಿಗೆ ವ್ಯಕ್ತವಾಯಿತು. ಕೂಡಲೆ ದಾನಿಯೇಲನು ಪರಲೋಕ ದೇವರನ್ನು ಹೀಗೆ ಸ್ತುತಿಸಿದನು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಅಂದು ರಾತ್ರಿ ದಾನಿಯೇಲನಿಗೆ ದೇವದರ್ಶನವಾಯಿತು. ಆಗ ದಾನಿಯೇಲನು ಪರಲೋಕದ ದೇವರನ್ನು ಹೀಗೆ ಸ್ತುತಿಸಿದನು: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆ ರಹಸ್ಯವು ದಾನಿಯೇಲನಿಗೆ ರಾತ್ರಿ ದರ್ಶನದಲ್ಲಿ ಪ್ರಕಟವಾಯಿತು. ದಾನಿಯೇಲನು ಪರಲೋಕದ ದೇವರನ್ನು ಸ್ತುತಿಸಿ, ಅಧ್ಯಾಯವನ್ನು ನೋಡಿ |
ನಾನು ರಾತ್ರಿ ಕಂಡ ಕನಸಿನಲ್ಲಿ ಸ್ವಲ್ಪ ಹೊತ್ತಿನ ಮೇಲೆ ಆಹಾ, ನಾಲ್ಕನೆಯ ಮೃಗವು ಕಾಣಿಸಿತು; ಅದು ಭಯಂಕರವಾಗಿತ್ತು, ಹೆದರಿಸುವಂಥದಾಗಿತ್ತು, ಅಧಿಕ ಬಲವುಳ್ಳದ್ದಾಗಿತ್ತು. ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ನುಂಗುತ್ತಾ, ಚೂರುಚೂರು ಮಾಡುತ್ತಾ ಉಳಿದದ್ದನ್ನು ಕಾಲುಗಳಿಂದ ತುಳಿಯುತ್ತಾ ಇತ್ತು. ಅದು ಹಿಂದಿನ ಎಲ್ಲಾ ಮೃಗಗಳಿಗಿಂತ ವಿಲಕ್ಷಣವಾಗಿತ್ತು. ಅದಕ್ಕೆ ಹತ್ತು ಕೊಂಬುಗಳಿದ್ದವು.